ಪರಿಶಿಷ್ಟಜಾತಿ ಸಮುದಾಯದವರು ಜಾತಿ ಬಗ್ಗೆ ನಿಖರ ಮಾಹಿತಿ ನೀಡಿ

KannadaprabhaNewsNetwork |  
Published : May 07, 2025, 12:51 AM IST
ಹೊನ್ನಾಳಿ ಫೋಟೋ 5ಎಚ್.ಎಲ್.ಐ1। ಪಟ್ಟಣದ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025ಕ್ಕೆ ಪಟ್ಟಣದ ದುರ್ಗಿಗುಡಿ ಬಡಾವಣೆಯ 5ನೇ ಅಡ್ಡ ರಸ್ತೆಯಲ್ಲಿರುವ ಮನೆಯೊಂದರಲ್ಲಿ ಜಾತಿ ಸಮೀಕ್ಷೆಗೆ ಶಾಸಕ ಡಿ.ಜಿ.ಶಾಂತನಗೌಡ ಚಾಲನೆ ನೀಡಿದರು. | Kannada Prabha

ಸಾರಾಂಶ

Scheduled caste community give accurate information about caste

-ಹೊನ್ನಾಳಿಯಲ್ಲಿ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷಾ ಕಾರ್ಯಕ್ಕೆ ಶಾಸಕ ಡಿ.ಜಿ.ಶಾಂತನಗೌಡ

-----

ಕನ್ನಡ ಪ್ರಭ ವಾರ್ತೆ ಹೊನ್ನಾಳಿ

ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ಆರಂಭವಾಗಿದ್ದು, ಸಮೀಕ್ಷೆ ವೇಳೆ ಸಮೀಕ್ಷಾದಾರರು ಮನೆ-ಮನೆ ಭೇಟಿ ನೀಡಲಿದ್ದು ಪರಿಶಿಷ್ಟಜಾತಿ ಸಮುದಾಯದವರು ತಮ್ಮ ಜಾತಿ ಬಗ್ಗೆ ನಿಖರ ಮಾಹಿತಿ ನೀಡಬೇಕು ಎಂದು ಶಾಸಕ ಡಿ.ಜಿ.ಶಾಂತನಗೌಡ ಹೇಳಿದರು.

ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025ಕ್ಕೆ ಪಟ್ಟಣದ ದುರ್ಗಿಗುಡಿ ಬಡಾವಣೆಯ 5ನೇ ಅಡ್ಡ ರಸ್ತೆಯಲ್ಲಿರುವ ಮನೆಯೊಂದರಲ್ಲಿ ಜಾತಿ ಸಮೀಕ್ಷೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಕುಟುಂಬದ ಸದಸ್ಯರು ಪಡೆದಿರುವ ಶಿಕ್ಷಣ, ವೃತ್ತಿ, ವಾಸಿಸುವ ಪ್ರದೇಶ, ಹೊಂದಿರುವ ಸೌಲಭ್ಯಗಳು ಸೇರಿದಂತೆ ಇತರ ಮಾಹಿತಿಗಳು ಹಾಗೂ ಆರ್ಥಿಕತೆಗೆ ಸಂಬಂಧಿಸಿದ ಮಾಹಿತಿಗಳು, ಸರ್ಕಾರಿ ಉದ್ಯೋಗ, ಖಾಸಗಿ ಉದ್ಯೋಗ, ವೃತ್ತಿ, ಭೂಮಿ ಒಡೆತನ, ಮನೆ, ಆದಾಯ ಇತ್ಯಾಧಿ ವಿಷಯಗಳ ಕುರಿತು ಸಮಗ್ರ ಮಾಹಿತಿಯನ್ನು ಸಮೀಕ್ಷಾದಾರರಿಗೆ ಕಡ್ಡಾಯವಾಗಿ ಹಾಗೂ ವಿವರವಾಗಿ ನೀಡಬೇಕು ಎಂದು ಹೇಳಿದರು.

ಸಮಾಜ ಕಲ್ಯಾಣ ಇಲಾಖೆ ತಾಲೂಕು ಅಧಿಕಾರಿ ಉಮಾ ಮಾತನಾಡಿ, ಅವಳಿ ತಾಲೂುಕುಗಳ ಎಲ್ಲಾ 245 ಬೂತ್ ಗಳಲ್ಲಿ ಸಮೀಕ್ಷಾ ಕಾರ್ಯ ನಡೆಯಲಿದ್ದು ಇದಕ್ಕಾಗಿ 245 ಸರ್ವೆ ಸಿಬ್ಬಂದಿ, 24 ಮೇಲ್ವಿಚಾರಕ ಸಿಬ್ಬಂದಿ ನಿಯೋಜನೆ ಮಾಡಿದೆ ಎಂದು ಮಾಹಿತಿ ನೀಡಿದರು.

ಉಪ ವಿಭಾಗಾಧಿಕಾರಿ ಅಭಿಷೇಕ್, ತಹಶೀಲ್ದಾರ್ ಪಟ್ಟರಾಜಗೌಡ, ನ್ಯಾಮತಿ ತಾಲೂಕು ತಹಶೀಲ್ದಾರ್ ಎಂ.ಪಿ.ಕವಿರಾಜ್,ಪುರಸಭೆ ಅಧ್ಯಕ್ಷ ಎ.ಕೆ.ಮೈಲಪ್ಪ, ಹೊನ್ನಾಳಿ ತಾ.ಪಂ. ಇಒ ಪ್ರಕಾಶ್, ನ್ಯಾಮತಿ ತಾಪಂ ಇ.ಒ. ರಾಘವೇಂದ್ರ, ಸಮಾಜ ಕಲ್ಯಾಣ ಇಲಾಖಾಧಿಕಾರಿ ಉಮಾ, ಸಿಡಿಪಿಒ ಜ್ಯೋತಿ, ಪಟ್ಟಣದ 5ನೇ ವಾರ್ಡ ನ ಪುರಸಭೆ ಸದಸ್ಯೆ ಸವಿತಾಮಹೇಶ್ ಹುಡೇದ್ ತಾಲೂಕು ಮಟ್ಟದ ಅಧಿಕಾರಿಗಳು ಪುರಸಭೆ ಸದಸ್ಯ ಸಮೀಭಾ ಕಾರ್ಯದ ಸಿಬ್ಬಂದಿ, ಮುಖಂಡರು ಇದ್ದರು.

- - -

-5ಎಚ್.ಎಲ್.ಐ1:

ಪಟ್ಟಣದ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025ಕ್ಕೆ ಪಟ್ಟಣದ ದುರ್ಗಿಗುಡಿ ಬಡಾವಣೆಯ 5ನೇ ಅಡ್ಡ ರಸ್ತೆಯಲ್ಲಿರುವ ಮನೆಯೊಂದರಲ್ಲಿ ಜಾತಿ ಸಮೀಕ್ಷೆಗೆ ಶಾಸಕ ಡಿ.ಜಿ.ಶಾಂತನಗೌಡ ಚಾಲನೆ ನೀಡಿದರು.

PREV

Recommended Stories

ಇ-ಬಸ್‌ ಪೂರೈಕೆ ಸಂಸ್ಥೆಗೆ ಕಠಿಣ ನಿಯಮ ರೂಪಿಸಿ : ರಾಮಲಿಂಗಾರೆಡ್ಡಿ
ಅಸ್ಸಾಂನಲ್ಲಿ ಯಾವ ಪ್ರತಿಭೆ ಇದೆ ಎಂದು ಹೂಡಿಕೆ? : ಪ್ರಿಯಾಂಕ್‌