ಕನ್ನಡಪ್ರಭ ವಾರ್ತೆ ಉಡುಪಿ
ಬುಧವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಕುರಿತಂತೆ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ಏಕಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ಬಗ್ಗೆ ದತ್ತಾಂಶಗಳನ್ನು ಸಮೀಕ್ಷೆ ನಡೆಸುವ ಸಂಬಂಧ ನಡೆದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಮೀಕ್ಷೆಗೆ ತಾಲೂಕು ಮಟ್ಟದಲ್ಲಿ ಉಪವಿಭಾಗಾಧಿಕಾರಿ ನೇತೃತ್ವದಲ್ಲಿ ತಾಲೂಕು ಮಟ್ಟದ ಸಮನ್ವಯ ಸಮಿತಿ ರಚಿಸಲಾಗಿದ್ದು, ತಹಸೀಲ್ದಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ತಾಲೂಕು ಮಟ್ಟದ ಇತರ ಅಧಿಕಾರಿಗಳು ಸದಸ್ಯರಾಗಿರುತ್ತಾರೆ ಎಂದವರು ಹೇಳಿದರು.ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿಯ ಸುಮಾರು 75,000 ಕ್ಕೂ ಹೆಚ್ಚು ಜನರಿದ್ದು, ಅವರ ಸಮೀಕ್ಷೆ ನಡೆಸಲು 1000 - 1100 ಗಣತಿದಾರರ ಅವಶ್ಯಕತೆ ಇದ್ದು, ಈ ಕಾರ್ಯಕ್ಕೆ ಶಿಕ್ಷಣ ಇಲಾಖೆಯ ಶಿಕ್ಷಕರನ್ನು ನೇಮಕ ಮಾಡಲಾಗುತ್ತದೆ ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಆಬೀದ್ ಗದ್ಯಾಳ, ಜಿ.ಪಂ. ಉಪ ಕಾರ್ಯದರ್ಶಿ ಶ್ರೀನಿವಾಸ್ ರಾವ್, ಸಹಾಯಕ ಕಮೀಷನರ್ ರಶ್ಮಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನಾರಾಯಣ ಸ್ವಾಮಿ, ಡಯಟ್ ಉಪ ಪ್ರಾಂಶುಪಾಲ ಡಾ. ಅಶೋಕ್ ಕಾಮತ್, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.