ಕನ್ನಡಪ್ರಭ ವಾರ್ತೆ, ದಾವಣಗೆರೆ ಪರಿಸರ ಸಮತೋಲನಕ್ಕಾಗಿ ಜಿಲ್ಲಾಡಳಿತ ಭವನ ಸೇರಿದಂತೆ ಕಚೇರಿಗಳ ಆವರಣದಲ್ಲಿ ಗಿಡ, ಮರಗಳ ಬೆಳೆಸಲು ಈ ವರ್ಷ ಸಸಿ ಹಾಕಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಹೇಳಿದರು.
ಇಲಾಖೆಗಳ ಅವರಣ ಮತ್ತು ನೀರು ಪೂರೈಕೆ ಮಾಡುವ ಟ್ಯಾಂಕ್‌ಗಳ ಸುತ್ತಮುತ್ತ ಹಾಗೂ ಖಾಲಿ ಇರುವ ಸರ್ಕಾರಿ ಜಾಗಗಳಲ್ಲಿ ಸಸಿ ನೆಡುವ ಮೂಲಕ ವೃಕ್ಷಗಳಾಗಿಸುವುದು, ಆ ಮೂಲಕ ಪರಿಸರ ಸಮತೋಲನ ಕಾಯ್ದುಕೊಳ್ಳಲು ಯೋಜಿಸಲಾಗಿದೆ. ಜಿಲ್ಲೆಯ ರೈತ ಸಂಘಟನೆಗಳು ಸಹ ಪರಿಸರ ಸಂರಕ್ಷಣೆಗೆ ಗಿಡ, ಮರ ಬೆಳೆಸಲು ಮುಂದೆ ಬಂದಿದ್ದಾರೆ ಎಂದರು.
ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್ ಬಿ. ಇಟ್ನಾಳ್, ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್, ಅಪರ ಜಿಲ್ಲಾಧಿಕಾರಿ ಸೈಯ್ಯದಾ ಆಫ್ರೀನಾ ಭಾನು ಎಸ್. ಬಳ್ಳಾರಿ, ಮಹಾನಗರ ಪಾಲಿಕೆ ಆಯುಕ್ತರಾದ ರೇಣುಕಾ ಹಾಗೂ ಇನ್ನಿತರರು ಭಾಗವಹಿಸಿದ್ದರು.- - - -5ಕೆಡಿವಿಜಿ35ಃ: