ಚಿಕ್ಕಬಳ್ಳಾಪುರ/ ಬಾಗೇಪಲ್ಲಿ
ಜಿಲ್ಲೆಯ ಬಾಗೇಪಲ್ಲಿ ಪಟ್ಟಣದ ನ್ಯಾಷನಲ್ ಪದವಿ ಕಾಲೇಜಿನಲ್ಲಿ ಕೇಂದ್ರ ಸಂವಹನ ಇಲಾಖೆ ಮೈಸೂರು, ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಹಾಗೂ ಜಿಲ್ಲಾಡಳಿತದ ಸಹಯೋಗದಲ್ಲಿ ಆಯೋಜಿಸಿದ್ದ ಕೇಂದ್ರ ಸರ್ಕಾರದ 70 ಕ್ಕೂ ಹೆಚ್ಚು ಯೋಜನೆಗಳ ಛಾಯಾಚಿತ್ರ ಪ್ರದರ್ಶನ ಮತ್ತು ಜಾಗೃತಿ ಕಾರ್ಯಕ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಫಲಾನುಭವಿಗಳಿಗೆ ತಲುಪಿಸಿಮುಖ್ಯವಾಗಿ ಗ್ರಾಮೀಣ ಭಾಗದ ಅಸಹಾಯಕ ವರ್ಗಗಳ ಶ್ರೇಯೋಭಿವೃದ್ಧಿಯಿಂದ ಈ ಯೋಜನೆಗಳನ್ನು ಜಾರಿ ಮಾಡಿದೆ. ಕೇಂದ್ರ ಸರ್ಕಾರದ ವಿವಿಧ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಸರ್ಕಾರದ ಯೋಜನೆಗಳು ಮತ್ತು ಕಾರ್ಯಕ್ರಮಗಳ ಕುರಿತು ವ್ಯಾಪಕ ಪ್ರಚಾರ ಮಾಡಿ ಜನರಲ್ಲಿ ಜಾಗೃತಿಯನ್ನೂ ಮೂಡಿಸಬೇಕು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಸ್.ಎಸ್.ಮಹೇಶ್ ಕುಮಾರ್, ಕೇಂದ್ರ ಸಂವಹನ ಇಲಾಖೆಯ ಕ್ಷೇತ್ರ ಪ್ರಚಾರ ಅಧಿಕಾರಿ ಎಸ್.ಟಿ.ಶೃತಿ, ವಕ್ಕಲಿಗರ ಸಂಘದ ನಿರ್ಧೇಶಕ ಕೋನಪ್ಪರೆಡ್ಡಿ, ಜೆಡಿಎಸ್ ಮುಖಂಡ ಹರಿನಾಥರೆಡ್ಡಿ,ಚಂದ್ರಶೇಖರ್ , ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ, ಸಾರ್ವಜನಿಕರು, ಮತ್ತಿತರರು ಇದ್ದರು.