ಭುವನೇಂದ್ರ ಕಾಲೇಜಿನಲ್ಲಿ ಆಡಳಿತ ಮಂಡಳಿ ವತಿಯಿಂದ ಮೆರಿಟ್ ಹಾಗೂ ಅರ್ಹ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ ನಡೆಯಿತು.
ಕಾರ್ಕಳ: ಭುವನೇಂದ್ರ ಕಾಲೇಜಿನಲ್ಲಿ ಆಡಳಿತ ಮಂಡಳಿ ವತಿಯಿಂದ ಮೆರಿಟ್ ಹಾಗೂ ಅರ್ಹ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾಹೆ ಮಣಿಪಾಲದ ಸಿಇಒ ಡಾ. ಆನಂದ್ ವೇಣುಗೋಪಾಲ್ ಮಾತನಾಡಿ, ಹಿರಿಯ ವಿದ್ಯಾರ್ಥಿಗಳು ತಾವು ಪಡೆದ ಶಿಕ್ಷಣದ ಸಾರ್ಥಕತೆಯಾಗಿ ಇಂದಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡುತ್ತಿರುವುದು ಶ್ಲಾಘನೀಯ ಎಂದರು.
ಇನ್ನೊಬ್ಬ ಮುಖ್ಯ ಅತಿಥಿ ಹಾಗೂ ಕೊಡುಗೈ ದಾನಿ ಸಿಎ ಕೆ. ಕಮಲಾಕ್ಷ ಕಾಮತ್ ಮಾತನಾಡಿ, ವಿದ್ಯೆಗಿಂತ ಶ್ರೇಷ್ಠವಾದುದು ಮತ್ತೊಂದಿಲ್ಲ. ಅದಕ್ಕಿಂತಲೂ ಮನುಷ್ಯತ್ವ ಮುಖ್ಯವಾಗಿದ್ದು, ಪ್ರಾಮಾಣಿಕತೆ ಮತ್ತು ಒಳ್ಳೆಯತನವನ್ನು ಜೀವನದ ಮಂತ್ರವಾಗಿಸಿಕೊಳ್ಳಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಆಡಳಿತ ಮಂಡಳಿ ಅಧ್ಯಕ್ಷ ಸಿಎ ಶಿವಾನಂದ ಪೈ ಮಾತನಾಡಿ, ವಿದ್ಯಾರ್ಥಿಗಳ ಶಿಕ್ಷಣಕ್ಕೆ ತಂತ್ರಜ್ಞಾನದ ಬಳಕೆ ಅಗತ್ಯವಾಗಿದ್ದು, ಅದರ ಕೊರತೆ ಆಗದಂತೆ ನೋಡಿಕೊಳ್ಳುವುದು ಸಂಸ್ಥೆಗಳ ಜವಾಬ್ದಾರಿಯಾಗಿದೆ ಎಂದರು. ಭುವನೇಂದ್ರ ಕಾಲೇಜಿನಲ್ಲಿ ಆಧುನಿಕ ಶಿಕ್ಷಣದ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳಿಗೂ ಒತ್ತು ನೀಡಲಾಗುತ್ತಿದೆ ಎಂದು ಹೇಳಿದರು.ಈ ಸಂದರ್ಭ ಹಳೆ ವಿದ್ಯಾರ್ಥಿ ಹಾಗೂ ದಾನಿ ರಮೇಶ್ ಪ್ರಭು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಿದರು. ಮಾಹೆ ಮಣಿಪಾಲದ ಉಪಕುಲಪತಿ ಡಾ. ಶರತ್ ಕುಮಾರ್ ರಾವ್ ಅವರನ್ನು ಸನ್ಮಾನಿಸಲಾಯಿತು.ಕಾಲೇಜಿನ ಪ್ರಾಂಶುಪಾಲ ಡಾ. ಮಂಜುನಾಥ ಎ. ಕೋಟ್ಯಾನ್ ಸ್ವಾಗತಿಸಿದರು. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ರಮೇಶ್ ಎಸ್.ಸಿ. ವಂದಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಡಾ. ಈಶ್ವರ ಭಟ್ ನಿರೂಪಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.