ಅತಿ ಹೆಚ್ಚು ಅಂಕ ಪಡೆದ 10 ಬಡ ಮಕ್ಕಳಿಗೆ ಸ್ಕಾಲರ್ ಶಿಪ್: ಆದರ್ಶ ಗೌಡ

KannadaprabhaNewsNetwork |  
Published : Apr 19, 2026, 02:00 AM IST
ನರಸಿಂಹರಾಜಪುರ ಜ್ವಾಲಾಮಾಲಿನಿ ಜೇಸಿ ಸಂಸ್ಥೆಯ ವತಿಯಿಂದ ಗುಬ್ಬಿಗಾ ಗ್ರಾಮ ಪಂಚಾಯಿತಿಯಲ್ಲಿ 27 ವರ್ಷಗಳಿಂದ  ಪ್ರಾಮಾಣಿಕತೆಯಿಂದ ವಾಟರ್ ಮ್ಯಾನ್  ಆಗಿ ಕಾರ್ಯ ನಿರ್ವಹಿಸುತ್ತಿರುವ ಜೆ.ರಾಘವ ಪೂಜಾರಿ  ಅವರನ್ನು ಗೌರವಿಸಲಾಯಿತು. | Kannada Prabha

ಸಾರಾಂಶ

ನರಸಿಂಹರಾಜಪುರ ಜೇಸಿ ಸಂಸ್ಥೆಯಿಂದ ಸರ್ಕಾರಿ ಶಾಲೆಯಲ್ಲಿ 9 ರಿಂದ 12 ನೇ ತರಗತಿಯಲ್ಲಿ ಅತಿ ಹೆಚ್ಚು ಅಂಕ ಪಡೆದ 10 ಬಡ ವಿದ್ಯಾರ್ಥಿಗಳಿಗೆ ಪ್ರತಿ ಜೇಸಿ ಘಟಕದಿಂದ ಸ್ಕಾಲರ್ ಶಿಪ್ ನೀಡುವ ಕಾರ್ಯಕ್ರಮವಿದೆ ಎಂದು ಜ್ವಾಲಾಮಾಲಿನಿ ಜೇಸಿ ಸಂಸ್ಥೆ ಅಧ್ಯಕ್ಷ ಆದರ್ಶ ಬಿ. ಗೌಡ ತಿಳಿಸಿದರು.

ಜ್ವಾಲಾಮಾಲಿನಿ ಜೇಸಿ ಸಂಸ್ಥೆಯಿಂದ ಗುಬ್ಬಿಗಾ ಗ್ರಾಪಂನಲ್ಲಿ ವ್ಯಕ್ತಿತ್ವ ವಿಕಸನ ಶಿಬಿರ

ಕನ್ನಡಪ್ರಭ ವಾರ್ತೆ, ನರಸಿಂಹರಾಜಪುರ

ಜೇಸಿ ಸಂಸ್ಥೆಯಿಂದ ಸರ್ಕಾರಿ ಶಾಲೆಯಲ್ಲಿ 9 ರಿಂದ 12 ನೇ ತರಗತಿಯಲ್ಲಿ ಅತಿ ಹೆಚ್ಚು ಅಂಕ ಪಡೆದ 10 ಬಡ ವಿದ್ಯಾರ್ಥಿಗಳಿಗೆ ಪ್ರತಿ ಜೇಸಿ ಘಟಕದಿಂದ ಸ್ಕಾಲರ್ ಶಿಪ್ ನೀಡುವ ಕಾರ್ಯಕ್ರಮವಿದೆ ಎಂದು ಜ್ವಾಲಾಮಾಲಿನಿ ಜೇಸಿ ಸಂಸ್ಥೆ ಅಧ್ಯಕ್ಷ ಆದರ್ಶ ಬಿ. ಗೌಡ ತಿಳಿಸಿದರು.

ಗುರುವಾರ ಗುಬ್ಬಿಗಾ ಗ್ರಾಮ ಪಂಚಾಯಿತಿಯಲ್ಲಿ ನಡೆಯುತ್ತಿದ್ದ ಮಕ್ಕಳ ಬೇಸಿಗೆ ಶಿಬಿರದಲ್ಲಿ ಜ್ವಾಲಾಮಾಲಿನಿ ಜೇಸಿ ಸಂಸ್ಥೆಯಿಂದ ನಡೆದ ವ್ಯಕ್ತಿತ್ವ ವಿಕಸನ ಶಿಬಿರದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜೇಸಿ ಸಂಸ್ಥೆ ಪ್ರಾರಂಭವಾಗಿ 110 ವರ್ಷಗಳು ತುಂಬಿದೆ. 120 ಕ್ಕೂ ಹೆಚ್ಚು ದೇಶಗಳಲ್ಲಿ ಜೇಸಿ ಸಂಸ್ಥೆ ಘಟಕಗಳಿವೆ.18 ರಿಂದ 45 ವರ್ಷದ ವಯೋಮಾನದ ಯುವ ಜನರು ಜೇಸಿ ಸದಸ್ಯರಾಗಬಹುದು. ಮಕ್ಕಳು ಮೊಬೈಲ್, ಟಿ.ವಿ.ಗಳನ್ನು ಹೆಚ್ಚು ನೋಡದೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಬೇಸಿಗೆ ಶಿಬಿರದಲ್ಲಿ ಮಕ್ಕಳು ಭಾಗವಹಿಸುವುದರಿಂದ ಬೇರೆ, ಬೇರೆ ಶಾಲೆ ಮಕ್ಕಳ ಪರಿಚಯವಾಗಲಿದೆ ಎಂದರು.

ಇದೇ ಸಂದರ್ಭದಲ್ಲಿ ಜೇಸಿ ಸಂಸ್ಥೆಯ ಸೆಲ್ಯೂಟ್ ಸೈಲೆಂಟ್ ಸ್ಟಾರ್ ಕಾರ್ಯಕ್ರಮದಡಿ ಗುಬ್ಬಿಗಾ ಗ್ರಾಮ ಪಂಚಾಯಿತಿಯಲ್ಲಿ ವಾಟರ್ ಮ್ಯಾನ್ ವೃತ್ತಿಯಲ್ಲಿ ಕಳೆದ 27 ವರ್ಷದಿಂದ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿರುವ ಜೆ. ರಾಘವ ಪೂಜಾರಿ ಅವರನ್ನು ಗೌರವಿಸಲಾಯಿತು.

ಗುಬ್ಬಿಗಾ ಗ್ರಾಮ ಪಂಚಾಯಿತಿ ಪಿಡಿಓ ಸೀಮಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಭೆಯಲ್ಲಿ ಜೇಸಿ ಸಂಸ್ಥೆ ಕಾರ್ಯದರ್ಶಿ ರಜಿತ್ ವಗಡೆ, ಜೇಸಿ ಸದಸ್ಯರಾದ ಮನು ಕೂಸ್ಗಲ್, ಜೋಯಿ ಬ್ರೋ , ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಹೂವಮ್ಮ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

25 ರಿಂದ ಮೇ 6ರವರೆಗೆ ಮದ್ದೂರು ಉತ್ಸವ ಅದ್ಧೂರಿ ಆಚರಣೆ
ಅಕ್ಕರೆಯ ಅಂಗಳ ಬೇಸಿಗೆ ಶಿಬಿರ ಮಕ್ಕಳಿಗೆ ಕೌಶಲ್ಯ ಕಲಿಸಲಿದೆ: ಅನಿಲ್ ಕುಮಾರ್