28ಕ್ಕೆ ಎಸ್‌ಸಿ, ಎಸ್‌ಟಿ ಮಕ್ಕಳಿಗೆ ವಿದ್ಯಾರ್ಥಿವೇತನ, ಪ್ರತಿಭಾ ಪುರಸ್ಕಾರ

KannadaprabhaNewsNetwork |  
Published : Jun 07, 2026, 02:00 AM IST
 ಸಿಕೆಬಿ-3 ಸುದ್ದಿಗೋಷ್ಟಿಯಲ್ಲಿ ಸಂದೀಪ್ ಬಿ. ರೆಡ್ಡಿ ಮಾತನಾಡಿದರು | Kannada Prabha

ಸಾರಾಂಶ

ಕಳೆದ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಶೇ.60ಕ್ಕಿಂತ ಹೆಚ್ಚು ಅಂಕ ಪಡೆದ ಎಸ್‌ಸಿ, ಎಸ್‌ಟಿ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಹಾಗೂ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಿ ಅವರ ಆತ್ಮವಿಶ್ವಾಸ ಹೆಚ್ಚಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ

ಕನ್ನಡಪ್ರಭ ವಾರ್ತೆ, ಚಿಕ್ಕಬಳ್ಳಾಪುರ:

ಪ್ರತಿ ವರ್ಷದಂತೆ ಈ ವರ್ಷವೂ ಭಗತ್ ಸಿಂಗ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಎಸ್‌ಸಿ/ಎಸ್‌ಟಿ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಜೂ.28ರಂದು ನಗರದ ಹರ್ಷೋದಯ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷ ಸಂದೀಪ್ ಬಿ. ರೆಡ್ಡಿ ತಿಳಿಸಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾರ್ಯಕ್ರಮದಲ್ಲಿ ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಗೋಪಾಲ್ ಗೌಡ ಸೇರಿ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದರು.ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಸರ್ಕಾರಿ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡಿ, ಕಳೆದ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಶೇ.60ಕ್ಕಿಂತ ಹೆಚ್ಚು ಅಂಕ ಪಡೆದ ಎಸ್‌ಸಿ, ಎಸ್‌ಟಿ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಹಾಗೂ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಿ ಅವರ ಆತ್ಮವಿಶ್ವಾಸ ಹೆಚ್ಚಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಅರ್ಹ ವಿದ್ಯಾರ್ಥಿಗಳು ಟ್ರಸ್ಟ್ ಕಚೇರಿಯಿಂದ ಅರ್ಜಿ ಪಡೆದು ಸಲ್ಲಿಸಬಹುದು. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಾಮಾಜಿಕ ಜಾಲತಾಣಗಳ ಮೂಲಕವೂ ಅರ್ಜಿ ನಮೂನೆ ತಲುಪಿಸಲಾಗುವುದು. ಅರ್ಜಿಯೊಂದಿಗೆ ಆಧಾರ್ ಕಾರ್ಡ್, ಪೋಷಕರ ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ, ಅಂಕಪಟ್ಟಿಯ ಪ್ರತಿ ಹಾಗೂ ಶಿಕ್ಷಣ ಸಂಸ್ಥೆಯ ಮುಖ್ಯೋಪಾಧ್ಯಾಯರಿಂದ ದೃಢೀಕರಣ ಪತ್ರ ಸಲ್ಲಿಸಬೇಕು. ಪ್ರತಿ ವರ್ಷ ಸುಮಾರು 800 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದ್ದು,ಈ ಬಾರಿ ಚಿಕ್ಕಬಳ್ಳಾಪುರದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ ಫಲಿತಾಂಶ ಬಂದಿರುವ ಹಿನ್ನೆಲೆಯಲ್ಲಿ 1,600ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ತಲಾ 5,000 ರು. ನಗದು ಪ್ರೋತ್ಸಾಹಧನ ಹಾಗೂ ಪ್ರಮಾಣಪತ್ರ ವಿತರಿಸಲಾಗುವುದು ಎಂದು ತಿಳಿಸಿದರು.

ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ದಿನ ಭಗತ್ ಸಿಂಗ್ ಚಾರಿಟಬಲ್ ಟ್ರಸ್ಟ್ ನೀಡುವ ಕೂಪನ್ ಕಡ್ಡಾಯವಾಗಿ ತರಬೇಕು. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ವಿದ್ಯಾರ್ಥಿಗಳು ರಾಜ್ಯದ ಯಾವುದೇ ಭಾಗದಲ್ಲಿ ಪರೀಕ್ಷೆ ಬರೆದಿದ್ದರೂ ವಿದ್ಯಾರ್ಥಿವೇತನಕ್ಕೆ ಅರ್ಹರು. ಆದರೆ ಬೇರೆ ವಿಧಾನಸಭಾ ಕ್ಷೇತ್ರದ ವಿದ್ಯಾರ್ಥಿಗಳು ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಪರೀಕ್ಷೆ ಬರೆದಿದ್ದರೆ ಸೌಲಭ್ಯ ಪಡೆಯಲು ಅರ್ಹರಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಈ ಸಂದರ್ಭದಲ್ಲಿ ಪಟ್ರೇನಹಳ್ಳಿ ಗ್ರಾ.ಪಂ ಮಾಜಿ ಅಧ್ಯಕ್ಷ ವೆಂಕಟೇಶ್, ಮಂಚೇನಹಳ್ಳಿಯ ರಿಯಾಜ್, ಅಣಕನೂರು ಸುನೀಲ್, ಬಾಲಕೃಷ್ಣ ( ಬಾಲು), ಶಿವಕುಮಾರ್, ನಾಗೇಶ್, ಸಂದೀಪ್ ಸ್ಯಾಂಡಿ ಮತ್ತಿತರರು ಇದ್ದರು.

ಸಿಕೆಬಿ-3 ಸುದ್ದಿಗೋಷ್ಠಿಯಲ್ಲಿ ಸಂದೀಪ್ ಬಿ.ರೆಡ್ಡಿ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಖಾಸಗಿ ಶಾಲೆಗಳಲ್ಲಿ ಡೊನೇಶನ್ ಹಾವಳಿ ತಡೆಗೆ ಒತ್ತಾಯ
ಉದ್ಯಮಿಗಳಲ್ಲಿ ಆತ್ಮಸ್ಥೈರ್ಯ ತುಂಬಿದ ಸ್ಟಾರ್ಟಪ್‌ ಕಾನ್‌ಕ್ಲೇವ್‌