ಮಕ್ಕಳ ಪ್ರತಿಭೆ ಹೊರತರಲು ಶಾಲಾ ವಾರ್ಷಿಕೋತ್ಸವ ಸಹಕಾರಿ: ಮಲ್ಲಿಕಾರ್ಜುನ್

KannadaprabhaNewsNetwork |  
Published : Jan 11, 2026, 01:45 AM IST
10ಕೆಎಂಎನ್ ಡಿ18 | Kannada Prabha

ಸಾರಾಂಶ

ಸರ್ಕಾರಿ ಶಾಲೆಗಳನ್ನು ಬಲಪಡಿಸಿ ದಾಖಲಾತಿ ಹೆಚ್ಚಳ ಮಾಡಲು ಮತ್ತು ಗುಣಮಟ್ಟದ ಶಿಕ್ಷಣ ನೀಡಲು ಸರ್ಕಾರಿ ಶಾಲೆಗಳನ್ನು ಸಜ್ಜುಗೊಳಿಸಬೇಕಾಗಿದೆ. ಸ್ಥಳೀಯ ಜನಪ್ರತಿನಿಧಿಗಳು ಸಂಘ ಸಂಸ್ಥೆಗಳು ಶಾಲೆಗಳ ಅಭಿವೃದ್ಧಿಗೆ ಬೆಂಬಲವಾಗಿ ನಿಲ್ಲಬೇಕು.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ವಿದ್ಯಾರ್ಥಿಗಳಿಗೆ ಸೃಜನಶೀಲತೆಯ ಅವಕಾಶಗಳನ್ನು ಕಲ್ಪಿಸಿಕೊಟ್ಟು ಅವರಲ್ಲಿನ ಪ್ರತಿಭೆ ಹೊರತರಲು ಶಾಲಾ ವಾರ್ಷಿಕೋತ್ಸವ ಸಹಕಾರಿಯಾಗಿವೆ ಎಂದು ರಾಜ್ಯ ಆರ್‌ಟಿಒ ಅಧಿಕಾರಿಗಳ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ್ ತಿಳಿಸಿದರು.

ತಾಲೂಕಿನ ಬಳ್ಳೆಕೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವದಲ್ಲಿ ಉದ್ಘಾಟಿಸಿ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಕೊರತೆಯಿಂದ ಶಾಲೆಗಳನ್ನು ಮುಚ್ಚುವಂತಹ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸದರು.

ಸರ್ಕಾರಿ ಶಾಲೆಗಳನ್ನು ಬಲಪಡಿಸಿ ದಾಖಲಾತಿ ಹೆಚ್ಚಳ ಮಾಡಲು ಮತ್ತು ಗುಣಮಟ್ಟದ ಶಿಕ್ಷಣ ನೀಡಲು ಸರ್ಕಾರಿ ಶಾಲೆಗಳನ್ನು ಸಜ್ಜುಗೊಳಿಸಬೇಕಾಗಿದೆ. ಸ್ಥಳೀಯ ಜನಪ್ರತಿನಿಧಿಗಳು ಸಂಘ ಸಂಸ್ಥೆಗಳು ಶಾಲೆಗಳ ಅಭಿವೃದ್ಧಿಗೆ ಬೆಂಬಲವಾಗಿ ನಿಲ್ಲಬೇಕು ಎಂದರು.

ತಾಲೂಕು ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಆನಂದ್ ಮಾತನಾಡಿ, ಮಕ್ಕಳನ್ನು ಓದಿಸುವ ವಿಚಾರದಲ್ಲಿ ಶಿಕ್ಷಕರಷ್ಟೇ ಪೋಷಕರದ್ದು ಕೂಡ ದೊಡ್ಡ ಜವಾಬ್ದಾರಿ ಇದೆ. ಮಕ್ಕಳ ಓದಿನ ಬಗ್ಗೆ ಪೋಷಕರು ಸರಿಯಾಗಿ ಗಮನಿಸಬೇಕು. ಬದ್ಧತೆ, ಶಿಸ್ತು, ಧೈರ್ಯದ ಗುಣಗಳನ್ನು ಮಕ್ಕಳಿಗೆ ಧಾರೆಯೆರಯಬೇಕು ಎಂದರು.

ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪೂರ್ಣಚಂದ್ರ ತೇಜಸ್ವಿ ಮಾತನಾಡಿದರು. ಎಸ್.ಡಿಎಂಸಿ ಅಧ್ಯಕ್ಷ ಕಿರಣ್ ಅಧ್ಯಕ್ಷತೆ ವಹಿಸಿದರು. ಕಾರ್ಯಕ್ರಮದಲ್ಲಿ ಎಸ್ಸಿ ಎಸ್ಟಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಶಿಕ್ಷಕ ಯೋಗೇಶ್, ಶಿಕ್ಷಣ ಸಂಯೋಜಕ ಸುರೇಶ, ಸಂಪನ್ಮೂಲ ವ್ಯಕ್ತಿ ಯೋಗೇಶ್, ಮುಖ್ಯ ಶಿಕ್ಷಕ ಎಸ್.ಟಿ.ರಾಮು, ಡಾಯಧನಲಕ್ಷ್ಮಿ, ಶಿಕ್ಷಕರಾದ ಗುಡುಗನಹಳ್ಳಿ ಮಂಜುನಾಥ್, ಗೋಪಾಲಕೃಷ್ಣ, ಮಹೇಶ್, ಹೇಮಲತಾ, ವೀರಪ್ಪ, ಶಾಲಾ ಎಸ್.ಡಿ.ಎಂ.ಸಿ ಸದಸ್ಯರು ಮತ್ತು ಗ್ರಾಮದ ಮುಖಂಡರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಶಾಲಾ ಪುಟಾಣಿಗಳಿಂದ ನೃತ್ಯ ಸಿಂಚನ, ವಿದ್ಯಾರ್ಥಿಗಳಿಂದ ನೃತ್ಯ ವೈಭವ, ನವ್ಯ ಶೈಲಿಯ ನಾಟಕ ಕುಣಿ ಕುಣಿ ನವಿಲೆ ಪ್ರದರ್ಶನ, ಜಾನಪದ ನೃತ್ಯಗಳನ್ನು ವಿದ್ಯಾರ್ಥಿಗಳು ಅದ್ಭುತವಾಗಿ ಪ್ರದರ್ಶನಗೊಂಡವು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹರ ಜಾತ್ರೆಗೆ ರಾಜ್ಯದಿಂದ 25 ಸಾವಿರ ಭಕ್ತರು
ಕರ್ನಾಟಕದಲ್ಲಿ ಕನ್ನಡಿಗರಿಗೆ ಮೊದಲ ಆದ್ಯತೆ ಸಿಗಲಿ: ಸಮ್ಮೇಳನಾಧ್ಯಕ್ಷ ಸುರೇಶ್ ಸಂಸ್ಕೃತಿ