ಶಾಲಾ ಮಕ್ಕಳು ಮೊಟ್ಟೆಯಿಂದ ವಂಚಿತರಾಗಬಾರದು

KannadaprabhaNewsNetwork |  
Published : Jul 19, 2025, 02:00 AM IST
೧೮ಕೆಎಲ್‌ಆರ್-೭ಕೋಲಾರದ ಜಿಪಂ ಕೆಸ್ವನ್ ಹಾಲಿನಲ್ಲಿ ಜಿಲ್ಲೆಯ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸಭೆಯಲ್ಲಿ ಜಿಪಂ ಸಿಇಓ ಡಾ.ಪ್ರವೀಣ್ ಪಿ.ಬಾಗೇವಾಡಿ ಮಾತನಾಡಿದರು. | Kannada Prabha

ಸಾರಾಂಶ

ಸರ್ಕಾರವು ಶಾಲಾ ಮಕ್ಕಳಿಗೆ ಬಿಸಿಯೂಟದ ಜೊತೆಗೆ ಮೊಟ್ಟೆ ನೀಡುವ ಯೋಜನೆ ಜಾರಿಗೆ ತಂದಿದೆ. ಇಂತಹ ಯೋಜನೆಯು ಎಲ್ಲಾ ಶಾಲಾ ಮಕ್ಕಳಿಗೆ ತಲುಪುವ ರೀತಿ ಕಾರ್ಯನಿರ್ವಹಿಸುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ. ಮೊಟ್ಟೆ ನೀಡುವ ಮುಖ್ಯ ಉದ್ದೇಶವೆಂದರೆ ಮೊಟ್ಟೆಯಲ್ಲಿ ಎ ಜೀವಸತ್ವವಿರುತ್ತದೆ. ಇದು ಮೆದುಳಿನ ಬೆಳವಣಿಗೆಗೆ ಸಹಕಾರಿ,

ಕನ್ನಡಪ್ರಭ ವಾರ್ತೆ ಕೋಲಾರಜಿಲ್ಲೆಯಲ್ಲಿ ಶಾಲಾ ಮಕ್ಕಳು ಮೊಟ್ಟೆಯಿಂದ ಸಿಗುವ ಪೌಷ್ಟಿಕಂಶ ವಂಚಿತರಾಗದಂತೆ ಕ್ರಮವಹಿಸಿ ಎಂದು ಜಿಪಂ ಸಿಇಓ ಡಾ.ಪ್ರವೀಣ್ ಪಿ.ಬಾಗೇವಾಡಿ ತಿಳಿಸಿದರು.ನಗರದ ಜಿಪಂ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಯೋಜನೆ ಮಕ್ಕಳಿಗೆ ತಲುಪಲಿ

ಸರ್ಕಾರವು ಶಾಲಾ ಮಕ್ಕಳಿಗೆ ಬಿಸಿಯೂಟದ ಜೊತೆಗೆ ಮೊಟ್ಟೆ ನೀಡುವ ಯೋಜನೆ ಜಾರಿಗೆ ತಂದಿದೆ. ಇಂತಹ ಯೋಜನೆಯು ಎಲ್ಲಾ ಶಾಲಾ ಮಕ್ಕಳಿಗೆ ತಲುಪುವ ರೀತಿ ಕಾರ್ಯನಿರ್ವಹಿಸುವುದು ತಮ್ಮೆಲ್ಲರ ಜವಾಬ್ದಾರಿಯಾಗಿದೆ. ಮೊಟ್ಟೆ ನೀಡುವ ಮುಖ್ಯ ಉದ್ದೇಶವೆಂದರೆ ಮೊಟ್ಟೆಯಲ್ಲಿ ಎ ಜೀವಸತ್ವವಿರುತ್ತದೆ. ಇದು ಮೆದುಳಿನ ಬೆಳವಣಿಗೆಗೆ ಸಹಕಾರಿ, ಉತ್ತಮ ಕೊಬ್ಬನ್ನು ಹೊಂದಿದೆ. ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ, ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರು.

ಮೊಟ್ಟೆಯಲ್ಲಿ ವಿಟಮಿನ್ ಡಿ ಇರುತ್ತದೆ. ಬಲವಾದ ಮೂಳೆ ಬೆಳವಣಿಗೆಗೆ ಸಹಕಾರಿ, ಕಣ್ಣಿನ ಆರೋಗ್ಯವನ್ನು ಉತ್ತಮಗೊಳಿಸುತ್ತದೆ. ಒಂದು ಮೊಟ್ಟೆಯಲ್ಲಿ ೬.೩ ಗ್ರಾಂ ಪ್ರೋಟೀನ್ ಇರುತ್ತದೆ. ೯ ಉಪಯುಕ್ತ ಅಮಿನೋ ಆಮ್ಲಗಳಿರುತ್ತವೆ ಇಂತಹ ಉತ್ತಮ ಪೌಷ್ಟಿಕಾಂಶಗಳನ್ನು ಪಡೆದುಕೊಂಡು ಮಕ್ಕಳು ದೈಹಿಕ ಬೆಳವಣಿಗೆ ಹಾಗೂ ಉತ್ತಮ ವಿದ್ಯಾಭ್ಯಾಸವನ್ನು ಪಡೆಯುವುದು ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು.ಪೋಷಕರಿಗೆ ಅರಿವು ಮೂಡಿಸಿ

ಜಿಲ್ಲೆಯು ಗಡಿಭಾಗದಲ್ಲಿ ಇರುವುದರಿಂದ ಎಲ್ಲಾ ಬಿಇಒಓಗಳು ತಮ್ಮ ವ್ಯಾಪ್ತಿಗೆ ಬರುವ ಶಾಲೆಗಳಿಗೆ ಆಗಾಗ್ಗೆ ಭೇಟಿ ನೀಡಿ ಮೊಟ್ಟೆ ಉತ್ತಮ ಪೋಷಕಾಂಶಗಳನ್ನು ಹೊಂದಿದೆ ಎಂದು ಅಲ್ಲಿನ ಮಕ್ಕಳಿಗೆ ಹಾಗೂ ಅವರ ಪೋಷಕರಿಗೆ ಅರಿವು ಮೂಡಿಸಬೇಕು. ಆಮೂಲಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯ ಲಾಭ ಎಲ್ಲಾ ಮಕ್ಕಳಿಗೆ ತಲುಪಬೇಕು. ಅಲ್ಲದೆ ಶಾಲೆಗಳಲ್ಲಿ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಿ ಹಾಗೂ ಮಕ್ಕಳ ದಾಖಲಾತಿಗಳ ಗಮನ ಹರಿಸಿ ಎಂದು ಹೇಳಿದರು.

ಗ್ರಾಮಗಳಲ್ಲಿ ಗ್ರಾಮ ಸಭೆ ನಡೆಯುವ ಸಂದರ್ಭದಲ್ಲಿ ಶಾಲಾ ಮಕ್ಕಳ ದಾಖಲಾತಿ ಬಗ್ಗೆ ಚರ್ಚಿಸಿ. ಶಾಲಾ ಕಟ್ಟಡಗಳ ಕಾಮಗಾರಿಗಳು ಇದ್ದಲ್ಲಿ ತಮ್ಮ ಗಮನಕ್ಕೆ ತರಬೇಕು, ಸಿಎಸ್‌ಆರ್ ಅನುದಾನದಲ್ಲಿ ಶಾಲೆಯ ಕಟ್ಟಡಗಳು ಕಾಮಗಾರಿಗಳು ಮಾಡಬೇಕಾದ ಸಂದರ್ಭದಲ್ಲಿ ತಮ್ಮ ಗಮನಕ್ಕೆ ತರಬೇಕು. ಗ್ರಾಪಂ ಮಟ್ಟದಲ್ಲಿ ಡಿಜಿಟಲ್ ಗ್ರಂಥಾಲಯ ಹಾಗೂ ಗ್ರಂಥಾಲಯಗಳ ಬಗ್ಗೆ ಶಾಲಾ ಮಕ್ಕಳಿಗೆ ಅರಿವು ಮೂಡಿಸಿ. ಎಂದು ಹೇಳಿದರು.

ಪೌಷ್ಟಿಕ ಕೈತೋಟಕ್ಕೆ ನಿಯಮ

ಸಭೆಗೂ ಮುನ್ನ ಪೌಷ್ಟಿಕ ಕೈತೋಟ ಎಂಬ ಕಾರ್ಯಕ್ರಮದ ಮಾರ್ಗಸೂಚಿ ನೀಡಿದರು. ಜಿಲ್ಲೆಯಲ್ಲಿ ನೂರಕ್ಕೂ ಹೆಚ್ಚು ಶಾಲೆಗಳಲ್ಲಿ ಔಷದೀಯ ಸಸಿಗಳನ್ನು ಬೆಳೆಸಲು ಮಾರ್ಗಸೂಚಿ ನೀಡಿದರು. ಎಲ್ಲಾ ಶಾಲೆಗಳಲ್ಲೂ ಕೈತೋಟ ಮಾಡಲು ವ್ಯವಸ್ಥೆ ಇದಿಯಾ ಎಂಬುದರ ಬಗ್ಗೆ ಚರ್ಚಿಸಿದರು. ತಮ್ಮ-ತಮ್ಮ ಶಾಲಾ ಆವರಣಗಳಲ್ಲಿ ಆಯುಷ್‌ ಇಲಾಖೆಗೆ ಸಂಬಂಧಪಟ್ಟ ಔಷಧಿ ಸಸಿಗಳನ್ನು ನೀಡಲು ಸಂಬಂಧಪಟ್ಟ ಇಲಾಖೆಗಳು ತಮ್ಮ ತಮ್ಮ ತಾಲೂಕು ಮಟ್ಟದಲ್ಲಿ ಸಭೆಯನ್ನು ನಡೆಸಿ ಸೂಕ್ತ ಮಾರ್ಗದರ್ಶನದೊಂದಿಗೆ ಸಸಿಗಳನ್ನು ಬೆಳೆಸಬೇಕು. ಎಲ್ಲ ಶಾಲಾ ಆವರಣಗಳಲ್ಲಿ ನೀರಿನ ವ್ಯವಸ್ಥೆ ಹಾಗೂ ಕಾಂಪೌಂಡ್ ವ್ಯವಸ್ಥೆ ಇರುವ ಎಲ್ಲಾ ಶಾಲೆಗಳಲ್ಲಿ ಬಳಸಿ ಎಂದು ಹೇಳಿದರು.

ಸಭೆಯಲ್ಲಿ ಜಿಪಂ ಉಪ ಕಾರ್ಯದರ್ಶಿ ರಮೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಯ ಉಪನಿರ್ದೇಶಕ ನಾರಾಯಣಸ್ವಾಮಿ, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಕುಮಾರಸ್ವಾಮಿ, ಆಯುಷ್‌ ಇಲಾಖೆಯ ನಿರ್ದೇಶಕ ರಾಘವೇಂದ್ರ ಶೆಟ್ಟಿಗಾರ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು