ಶಾಲಾ ಮಕ್ಕಳ ಸುರಕ್ಷತೆ ದೃಷ್ಟಿಯಲ್ಲಿಟ್ಟುಕೊಂಡು ಜಿಲ್ಲಾ ಪೊಲೀಸ್ ಇಲಾಖೆ 20ರಿಂದ 27ರವರೆಗೆ ಜಿಲ್ಲೆಯಾದ್ಯಂತ ಶಾಲಾ-ಕಾಲೇಜು ವಾಹನಗಳ ವಿಶೇಷ ತಪಾಸಣೆ ಹಾಗೂ ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನವನ್ನು ನಡೆಸಿತು.
ಉಡುಪಿ: ಶಾಲಾ ಮಕ್ಕಳ ಸುರಕ್ಷತೆ ದೃಷ್ಟಿಯಲ್ಲಿಟ್ಟುಕೊಂಡು ಜಿಲ್ಲಾ ಪೊಲೀಸ್ ಇಲಾಖೆ 20ರಿಂದ 27ರವರೆಗೆ ಜಿಲ್ಲೆಯಾದ್ಯಂತ ಶಾಲಾ-ಕಾಲೇಜು ವಾಹನಗಳ ವಿಶೇಷ ತಪಾಸಣೆ ಹಾಗೂ ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನವನ್ನು ನಡೆಸಿತು.
ಅಭಿಯಾನದಲ್ಲಿ ಒಟ್ಟು 204 ಬಸ್‌ಗಳು, 69 ಮಿನಿ ಬಸ್‌ಗಳು, 65 ಆಟೋರಿಕ್ಷಾಗಳು ಹಾಗೂ 33 ಕಾರುಗಳು ಸೇರಿದಂತೆ ವಿವಿಧ ಶಾಲಾ ವಾಹನಗಳನ್ನು ತಪಾಸಣೆಗೆ ಒಳಪಡಿಸಲಾಯಿತು.ತಪಾಸಣೆಯಲ್ಲಿ 29 ವಾಹನಗಳಲ್ಲಿ ನಿಗದಿತ ಮಿತಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳನ್ನು ಸಾಗಿಸುತ್ತಿರುವುದು ಹಾಗೂ 5 ವಾಹನಗಳ ಚಾಲಕರು ಸಮವಸ್ತ್ರ ಧರಿಸದೇ ವಾಹನ ಚಲಾಯಿಸುತ್ತಿರುವುದು ಸೇರಿದಂತೆ ಒಟ್ಟು 43 ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ಪತ್ತೆಯಾಗಿವೆ. ಸಂಬಂಧಿತ ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿ ಒಟ್ಟು 30,800 ರು. ದಂಡ ವಿಧಿಸಿ ವಸೂಲಿ ಮಾಡಲಾಗಿದೆ.ಜಿಲ್ಲೆಯ ವಿವಿಧ ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿದ ಪೊಲೀಸರು 295 ಬಸ್‌ಗಳು, 69 ಮಿನಿ ಬಸ್‌ಗಳು, 34 ಕಾರುಗಳು ಸೇರಿದಂತೆ ಇತರ ವಾಹನಗಳನ್ನು ಪರಿಶೀಲಿಸಿದರು. ವಾಹನಗಳ ದಾಖಲೆಗಳು, ಸುರಕ್ಷತಾ ಉಪಕರಣಗಳು ಹಾಗೂ ಸರ್ಕಾರದ ಮಾರ್ಗಸೂಚಿಗಳ ಪಾಲನೆಯನ್ನೂ ಪರಿಶೀಲಿಸಲಾಯಿತು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.