ಬ್ರಹ್ಮಾವರ ಮಟಪಾಡಿಯ ಶ್ರೀ ನಿಕೇತನ ಹಿರಿಯ ಪ್ರಾಥಮಿಕ ಶಾಲೆಯ ಹಾಗೂ ಪ್ರೌಢ ಶಾಲೆ ಮಟಪಾಡಿ ಇವುಗಳ ಜಂಟಿ ವಾರ್ಷಿಕೋತ್ಸವ
ಬ್ರಹ್ಮಾವರ: ಇಲ್ಲಿನ ಮಟಪಾಡಿಯ ಶ್ರೀ ನಿಕೇತನ ಹಿರಿಯ ಪ್ರಾಥಮಿಕ ಶಾಲೆಯ ಹಾಗೂ ಪ್ರೌಢ ಶಾಲೆ ಮಟಪಾಡಿ ಇವುಗಳ ಜಂಟಿ ವಾರ್ಷಿಕೋತ್ಸವ ವಿಜೃಂಭಣೆಯಿಂದ ಜರುಗಿತು. ಸಂಜೆ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆನರಾ ಬ್ಯಾಂಕ್ ಇದರ ನಿವೃತ್ತ ಮ್ಯಾನೇಜರ್ ಗೋಪಾಲ ಗಾಣಿಗ ಮಟಪಾಡಿ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಬಿಎಸ್ಎನ್ಎಲ್ ನಿವೃತ್ತ ಮಹಾಪ್ರಭಂದಕ ಚಂದ್ರಶೇಖರ ಕಲ್ಕೂರ ಮಟಪಾಡಿ ಮತ್ತು ವಿಜಯ ಸೇವಾ ಪ್ರತಿಷ್ಠಾನದ ಟ್ರಸ್ಟಿ ಜಯರಾಮ ನಾಯರಿ ಅವರನ್ನು ಶಾಲೆ ವತಿಯಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಉಮಾ ಪಿ., ಉದ್ಯಮಿ ಪ್ರಶಾಂತ್ ಕಾಡೂರು, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬ್ರಹ್ಮಾವರ ಯೋಜನಾಧಿಕಾರಿ ರಮೇಶ್ ಪಿ. ಕೆ. ಭಾಗವಹಿಸಿದ್ದರು. ಪತ್ರಕರ್ತ, ಶಾಲೆಯ ಹಳೆ ವಿದ್ಯಾರ್ಥಿ ಚೇತನ್ ಜಿ. ಪೂಜಾರಿ ಸ್ವಸ್ತಿ ವಾಚನ ಮಾಡಿದರು. ಕಾರ್ಯಕ್ರಮದಲ್ಲಿ ವಿಜಯ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಗಿರೀಶ್ ಚಂದ್ರ ಆಚಾರ್ಯ, ಶ್ರೀವಾಣಿ ವಿದ್ಯಾಭಿವೃದ್ಧಿ ಸಂಘದ ಅಧ್ಯಕ್ಷರ ಬಿ. ಭೋಜ ಹೆಗ್ಡೆ, ಶ್ರೀನಿಕೇತನ ಶಾಲಾಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ವಿಶ್ವನಾಥ ಶೆಟ್ಟಿ, ಹಿರಿಯ ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯ ಶಿವರಾಮ ಶೆಟ್ಟಿ, ವಿದ್ಯಾರ್ಥಿ ನಾಯಕ ಶಶಾಂಕ್ ರಾಕೇಶ್ ಉಪಸ್ಥಿತರಿದ್ದರು.
ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯನಿ ಶ್ಯಾಮಲ ವರದಿ ಮಂಡಿಸಿದರು. ಸನ್ಮಾನ ಪತ್ರವನ್ನು ದಿವ್ಯಾ, ಮತ್ತು ಸ್ನೇಹ ವಾಚಿಸಿದರು. ಬಹುಮಾನ ವಿಜೇತರ ಪಟ್ಟಿಯನ್ನು ಪವಿತ್ರ, ರಜನಿ, ಜಯಲಕ್ಷ್ಮೀ, ಆಶಾ, ಸುಕನ್ಯಾ ವಾಚಿಸಿದರು.ಶಿವರಾಮ ಶೆಟ್ಟಿ ಸ್ವಾಗತಿಸಿ, ರತಿ ವಂದಿಸಿದರು. ಸುಧಾಕರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.