ಮೂಡುಬಿದಿರೆ: ಶಾಲಾ ಶಿಕ್ಷಣವು ಪಠ್ಯಕ್ಕೆ ಮಾತ್ರ ಸೀಮಿತವಾಗದೆ, ಕಲೆ, ಸಾಹಿತ್ಯ, ಕ್ರೀಡೆ, ಶಿಸ್ತು ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸಿದಾಗ ಮಾತ್ರ ವಿದ್ಯಾರ್ಥಿಯ ವ್ಯಕ್ತಿತ್ವ ಪರಿಪೂರ್ಣವಾಗುತ್ತದೆ ಎಂದು ಜೈನ ಪ್ರೌಢಶಾಲೆಯ ವಿಶ್ರಾಂತ ಮುಖ್ಯೋಪಾಧ್ಯಾಯ ಹಾಗೂ ಶಿಕ್ಷಣ ಚಿಂತಕ ಮುನಿರಾಜ ರೆಂಜಾಳ ಹೇಳಿದರು.
ಡಾ .ಆಳ್ವರ ದೂರದೃಷ್ಟಿಯ ಶಿಕ್ಷಣ ಪರಿಕಲ್ಪನೆಯಿಂದ ಶಾಲೆ ರಾಜ್ಯದ ಮಾದರಿ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿ ರೂಪುಗೊಂಡಿದೆ. ಶಿಕ್ಷಣದ ನಿಜವಾದ ಉದ್ದೇಶ ಉತ್ತಮ ಅಂಕಗಳನ್ನು ಗಳಿಸುವುದಷ್ಟೇ ಅಲ್ಲ, ಉತ್ತಮ ವ್ಯಕ್ತಿತ್ವವನ್ನು ರೂಪಿಸುವುದಾಗಿದೆ ಎಂದರು. ಅಧ್ಯಕ್ಷತೆಯನ್ನು ಆಳ್ವಾಸ್ ಶಾಲೆಗಳ ಆಡಳಿತಾಧಿಕಾರಿ ಪ್ರೀತಮ್ ಕುಂದರ್ ವಹಿಸಿದ್ದರು. ಆಳ್ವಾಸ್ ಕೇಂದ್ರೀಯ ಪ್ರಾಥಮಿಕ ಶಾಲೆಗಳ ಆಡಳಿತಾಧಿಕಾರಿ ಗುರುಪ್ರಸಾದ್ ಹಾಗೂ ಕನ್ನಡ ಮಾಧ್ಯಮ ಶಾಲೆಯ ಸಹ ಆಡಳಿತಾಧಿಕಾರಿ ರಾಜೇಶ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.
ಶಾಲೆಯ ಮುಖ್ಯೋಪಾಧ್ಯಾಯ ಪ್ರಶಾಂತ್ ಬಿ. ಪ್ರಾಸ್ತಾವಿಕವಾಗಿ ಮಾತನಾಡಿದರು. ಹತ್ತನೇ ತರಗತಿಯ ವಿದ್ಯಾರ್ಥಿನಿ ಪೂರ್ಣಿಮಾ ಕಾರ್ಯಕ್ರಮ ನಿರೂಪಿಸಿ, ಸಿಂಚನಾ ಹಿರೇಮಠ ಸ್ವಾಗತಿಸಿ, ಸಿದ್ದಾರೂಡ ವಂದಿಸಿದರು.