ವಿಜ್ಞಾನ ಸಮಾವೇಶ ವಿದ್ಯಾರ್ಥಿಗಳಲ್ಲಿ ಸೃಜಶೀಲತೆ, ನಾವೀನ್ಯತೆಗೆ ವೇದಿಕೆ

KannadaprabhaNewsNetwork |  
Published : Nov 23, 2026, 02:15 AM IST
ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ, ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಜಿಲ್ಲಾ ಮಟ್ಟದ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ ಸ್ಥಳೀಯ ಹಾವೇರಿ ಉಪ ವಿಜ್ಞಾನ ಕೇಂದ್ರದಲ್ಲಿ ಜರುಗಿತು. | Kannada Prabha

ಸಾರಾಂಶ

ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ, ಜಿಲ್ಲಾ ಪಂಚಾಯಿತಿ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಜಿಲ್ಲಾ ಮಟ್ಟದ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ ಈಚೆಗೆ ಹಾವೇರಿ ಉಪ ವಿಜ್ಞಾನ ಕೇಂದ್ರದಲ್ಲಿ ಜರುಗಿತು.

ಹಾವೇರಿ: ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ, ಜಿಲ್ಲಾ ಪಂಚಾಯಿತಿ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಜಿಲ್ಲಾ ಮಟ್ಟದ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ ಈಚೆಗೆ ಹಾವೇರಿ ಉಪ ವಿಜ್ಞಾನ ಕೇಂದ್ರದಲ್ಲಿ ಜರುಗಿತು.

ಉದ್ಘಾಟನೆ ನೆರವೇರಿಸಿದ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಡಾ. ಪುನೀತ ಆರ್. ಅವರು ಮಾತನಾಡಿ, ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ, ಸೃಜನಶೀಲತೆ, ಸಂಶೋಧನಾ ಪ್ರವೃತ್ತಿ ಹಾಗೂ ನಾವೀನ್ಯತೆಯನ್ನು ಬೆಳೆಸುವುದು ಸಮಾವೇಶದ ಪ್ರಮುಖ ಉದ್ದೇಶವಾಗಿದೆ ಎಂದು ಹೇಳಿದರು.

ದೈನಂದಿನ ಜೀವನದಲ್ಲಿ ಎದುರಾಗುವ ಸಣ್ಣ ಪುಟ್ಟ ಪ್ರಶ್ನೆಗಳನ್ನು ಗಮನಿಸುವುದು, ಅವುಗಳ ಕುರಿತು ಯೋಚಿಸುವುದು ಮತ್ತು ಉತ್ತರಗಳನ್ನು ಕಂಡುಕೊಳ್ಳಲು ಪ್ರಯತ್ನಿಸುವುದೇ ವೈಜ್ಞಾನಿಕ ಮನೋಭಾವದ ಆರಂಭ ಎಂದು ಅವರು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟರು.

ವಿದ್ಯಾರ್ಥಿಗಳು ಯಾವುದೇ ವಿಷಯವನ್ನು ಕುರುಡಾಗಿ ನಂಬದೆ, ಪ್ರಶ್ನಿಸುವ, ಪರಿಶೀಲಿಸುವ ಪ್ರಯೋಗಿಸುವ ಮತ್ತು ತಾರ್ಕಿಕವಾಗಿ ಯೋಚಿಸುವ ಗುಣವನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಈ ಉಪನ್ಯಾಸವು ವಿದ್ಯಾರ್ಥಿಗಳು ತಮ್ಮ ಸುತ್ತಮುತ್ತಲಿನ ಘಟನೆಗಳನ್ನು ವೈಜ್ಞಾನಿಕ ದೃಷ್ಟಿಕೋನದಿಂದ ಗಮನಿಸಿ, ಪ್ರಶ್ನಿಸುವ ಮತ್ತು ಹೊಸ ವಿಷಯಗಳನ್ನು ಅನ್ವೇಷಿಸುವ ಮನೋಭಾವ ಬೆಳೆಸಿಕೊಳ್ಳಲು ಉತ್ತಮ ಪ್ರೇರಣೆಯಾಗಿದೆ ಎಂದರು.

ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಗಮಿಸಿದ್ದ ವಿದ್ಯಾರ್ಥಿಗಳು ತಮ್ಮ ವೈಜ್ಞಾನಿಕ ಯೋಜನೆಗಳನ್ನು ಮಂಡಿಸಿ, ತಮ್ಮ ಸಂಶೋಧನಾ ಚಿಂತನೆ ಮತ್ತು ಸೃಜನಶೀಲತೆಯನ್ನು ಅನಾವರಣಗೊಳಿಸಿದರು. ನಿರ್ಣಾಯಕರಾಗಿ ಹಾವೇರಿಯ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಪಕರಾದ ಡಾ. ಸುಧಾ ಹಾಗೂ ನಿವೃತ್ತ ಶಿಕ್ಷಕ ಮುದ್ದಿ ಅವರು ಭಾಗವಹಿಸಿ ವಿದ್ಯಾರ್ಥಿಗಳ ಯೋಜನೆಗಳನ್ನು ಮೌಲ್ಯ ಮಾಪನ ಮಾಡಿದರು.

ವಿದಾರ್ಥಿಗಳಿಗೆ ಪ್ರಮಾಪತ್ರ ವಿತರಿಸಿ ಮಾತನಾಡಿದ ಶಾಲಾ ಶಿಕ್ಷಣ ಇಲಾಖೆಯ ವಿಷಯ ಪರೀವಿಕ್ಷಕ ಸುರೇಶ ಮೂಡಲದವರ ಅವರು, ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶಕ್ಕೆ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿ, ಕಾರ್ಯಕ್ರಮ ಯಶಸ್ವಿಗೊಳ್ಳಲು ಕಾರಣರಾದ ಮಾರ್ಗದರ್ಶಿ ಶಿಕ್ಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಅಭಿನಂದಿಸಿದರು ಹಾಗೂ ಜಿಲ್ಲೆಯಲ್ಲಿ ನಡೆಯುವ ವಿಜ್ಞಾನ ಚಟುವಟಿಕೆಗಳಿಗೆ ಸಹಕಾರ ನೀಡುವಂತೆ ಕೋರಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತಿ ಬಸವರಾಜ ಬಾರ್ಕಿ, ಗದಗ ಜಿಲ್ಲೆಯ ಮಂಜುನಾಥ ತೋಟದ ಹಾಗೂ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಕಿರಣ ಗರಡಿಮನಿ ಉಪಸ್ಥಿತರಿದ್ದರು. ಬಸವರಾಜ ಬಾರ್ಕಿ ಸ್ವಾಗತಿಸಿದರು. ಕುಮಾರಿ ಮೇಘಾ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬರದಲ್ಲಿ ಆಸರೆಯಾದ ಕಳಸಕೊಪ್ಪ ಕೆರೆ
ಬೆಳಗಾವಿಯಲ್ಲಿ ಮಟಕಾ ದಂಧೆ ಮೇಲೆ ಪೊಲೀಸರ ಸರಣಿ ದಾಳಿ