ಜಿಲ್ಲೆಯ ಗೋಣಿಕೊಪ್ಪದ ಲಯನ್ಸ್ ಪ್ರೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಸಿಂಚನಾ ಬಿ . ಕೆ ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಕನ್ನಡಪ್ರಭ ವಾರ್ತೆ ಶ್ರೀಮಂಗಲ
ಜಿಲ್ಲೆಯ ಗೋಣಿಕೊಪ್ಪದ ಲಯನ್ಸ್ ಪ್ರೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಸಿಂಚನಾ ಬಿ . ಕೆ ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಬೆಂಗಳೂರಿನ ಬನಶಂಕರಿಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ರಾಜ್ಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಇಲಾ ವತಿಯಿಂದ ಆಯೋಜಿಸಲಾಗಿದ್ದ ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಸಿಂಚನಾ ಭಾಗವಹಿಸಿದ್ದರು. ಅವರು ‘ನೀರಿನ ನಿರ್ವಹಣೆ ಮತ್ತು ಸಂರಕ್ಷಣೆ’ ವಿಷಯವನ್ನು ಆಧರಿಸಿ ತಮ್ಮ ವಿಜ್ಞಾನ ಮಾದರಿ ಪ್ರದರ್ಶಿಸಿದರು. ಈಕೆ ಕೊಡಗು ಜಿಲ್ಲೆಯಿಂದ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾದ ಏಕೈಕ ವಿದ್ಯಾರ್ಥಿನಿ ಆಗಿದ್ದಾಳೆ. ಈಕೆ ಗೋಣಿಕೊಪ್ಪ ಕಲತ್ಮಾಡು ಲಯನ್ಸ್ ಪ್ರೌಢ ಶಾಲೆಯ 10 ನೇ ತರಗತಿ ವಿದ್ಯಾರ್ಥಿನಿಯಾಗಿದ್ದು, ಹುದಿಕೇರಿ ಗ್ರಾಮದ ಬೊಳ್ಳಾಜಿರ ಕಿಶೋರ್-ಗಾಯತ್ರಿ ದಂಪತಿ ಪುತ್ರಿ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.