ವಿಜ್ಞಾನ ವಿಚಾರಗೋಷ್ಠಿ । ವಿಜ್ಞಾನ ನಾಟಕ ಮತ್ತು ವಿಜ್ಞಾನ ವಸ್ತು ಪ್ರದರ್ಶನ,
ನಡೆದು ಹೋಗಿರುವುದನ್ನು ಇತಿಹಾಸ ಹೇಳಿದರೆ ವಿಜ್ಞಾನ ಮುಂದೆ ಆಗುವುದನ್ನು ತಿಳಿಸುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಸಿ. ರವೀಶ್ ಹೇಳಿದರು.
ಜೂನಿಯರ್ ಕಾಲೇಜಿನಲ್ಲಿ ಜಿಪಂ, ತಾಪಂ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಂಯುಕ್ತಾಶ್ರಯದಲ್ಲಿ ಸೋಮವಾರ ಏರ್ಪಡಿಸಿದ್ದ ತಾಲೂಕು ಮಟ್ಟದ ವಿಜ್ಞಾನ ವಿಚಾರಗೋಷ್ಠಿ, ವಿಜ್ಞಾನ ನಾಟಕ ಮತ್ತು ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ವೈದ್ಯ, ಇಂಜಿನಿಯರ್ ಮುಂತಾದ ಉನ್ನತ ಹುದ್ದೆಗಳ ಬಗ್ಗೆ ಕನಸು ಕಾಣಬೇಕು. ಅದನ್ನು ನನಸು ಮಾಡಲು ಕಠಿಣ ಪರಿಶ್ರಮದೊಂದಿಗೆ ಯಶಸ್ಸು ಗಳಿಸಿ ಎಂದು ಕವಿಮಾತು ಹೇಳಿದರು.ಸರ್ಕಾರಿ ಶಾಲೆ, ಆಸ್ಪತ್ರೆಯಲ್ಲಿ ಉಚಿತ ಸೌಲಭ್ಯ ದೊರೆಯುತ್ತವೆ. ಆದರೆ ದೇವರ ದರ್ಶನಕ್ಕೆ ಹೋದರೆ ಶುಲ್ಕ ಪಾವತಿಸ ಬೇಕಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ನೀಡುವ ಸೌಲಭ್ಯ ಸದುಪಯೋಗ ಮಾಡಿಕೊಳ್ಳಿ ಎಂದು ಹೇಳಿದರು.
ವಿಜ್ಞಾನಿಗಳು ಸಂಶೋಧನೆ ಮಾಡಿದಂತೆ ನಿಮಗೆ ಸಿಕ್ಕ ಅವಕಾಶ ಬಳಸಿಕೊಂಡು ನೀವೂ ಸಹ ಹೊಸ ಹೊಸ ಆವಿಷ್ಕಾರ ಗಳನ್ನು ಮಾಡಿ ಎಂದು ಸಲಹೆ ನೀಡಿದರು.
ತಾಲೂಕು ಮಟ್ಟದ ಈ ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ, ತೃತೀಯ ಎಂಬ ಮೂರು ವಿಭಾಗಗಳಿದ್ದು, ನಗದು ಬಹುಮಾನ ನೀಡಲಾಗುವುದು. ವಿಜೇತರಾದ ವಿದ್ಯಾರ್ಥಿಗಳು ತಾವು ಹೊಂದಿದ ಬ್ಯಾಂಕ್ ಖಾತೆ ಪಾಸ್‌ಪುಸ್ತಕದ ಜೆರಾಕ್ಸ್ ಪ್ರತಿಯನ್ನು ಮೂರು ದಿನಗಳ ಒಳಗಾಗಿಗೆ ನೋಡಲ್ ಅಧಿಕಾರಿಗಳಿಗೆ ನೀಡುವಂತೆ ತಿಳಿಸಿದರು.
ಕಾರ್ಯಕ್ರಮ ಉದ್ಘಾಟಿಸಿದ ಡಯಟ್ ಉಪನ್ಯಾಸಕ ಕೆ.ಜಿ. ನೀಲಕಂಠಪ್ಪ ಮಾತನಾಡಿ, ವಿದ್ಯಾರ್ಥಿಗಳು ವಿಜ್ಞಾನ ಗೋಷ್ಠಿ, ವಿಜ್ಞಾನ ನಾಟಕ, ವಸ್ತುಪ್ರ ದರ್ಶನದಲ್ಲಿ ಭಾಗವಹಿಸುವ ಕುರಿತು ನಿಬಂಧನೆಗಳ ಬಗ್ಗೆ ವಿವರ ನೀಡಿದರು.
ತಾಲೂಕು ಮಟ್ಟದಲ್ಲಿ ಪ್ರಥಮ ಬಹುಮಾನ ಪಡೆದವರು ಜಿಲ್ಲಾ ಮಟ್ಟದ ನಾಟಕ ಪ್ರದರ್ಶನದಲ್ಲಿ ಭಾಗವಹಿಸಬಹುದು. ಒಂದು ಪ್ರದರ್ಶನಕ್ಕೆ 8 ಜನ ವಿದ್ಯಾರ್ಥಿಗಳಿಗೆ ಅವಕಾಶ ನೀಡಲಾಗುವುದು. 6 ಜಿಲ್ಲೆಗಳನ್ನು ಸೇರಿಸಿ ವಿಭಾಗ ಮಟ್ಟ ಮಾಡಿದ್ದು, ಜಿಲ್ಲಾಮಟ್ಟದಲ್ಲಿ ಗೆದ್ದವರು ಭಾಗವಹಿಸಲು ಅವಕಾಶ ನೀಡಲಾಗಿದೆ. ವಿಭಾಗ ಮಟ್ಟದಲ್ಲಿ ವಿಜೇತರಾದವರು ರಾಜ್ಯಮಟ್ಟಕ್ಕೆ ಆಯ್ಕೆಯಾಗಲಿದ್ದಾರೆಂದು ತಿಳಿಸಿದರು.
2 ಕೆಸಿಕೆಎಂ 2
-------------------------------