ಕನ್ನಡಪ್ರಭ ವಾರ್ತೆ ಮಂಡ್ಯ
ಮಂಗಳವಾರ ಮಂಡ್ಯ ವಿಶ್ವವಿದ್ಯಾಲಯ ಸಭಾಂಗಣದಲ್ಲಿ ನಡೆದ ಜಿಲ್ಲಾ ನಗರಾಭಿವೃದ್ಧಿ ಕೋಶ ಮತ್ತು ನಗರಸಭೆಯಿಂದ ಘನ ತ್ಯಾಜ್ಯ ವಸ್ತು ನಿರ್ವಹಣೆ ನಿಯಮಗಳು ಕುರಿತು ಮಂಡ್ಯ ಜಿಲ್ಲೆಯ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತಿಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಎಲ್ಲಾ ಪೌರಾಯುಕ್ತರು, ಮುಖ್ಯಾಧಿಕಾರಿಗಳಿಗೆ ಒಂದು ದಿನದ ಕಾರ್ಯಾಗಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸರ್ವೋಚ್ಚ ನ್ಯಾಯಾಲಯದ 2026 ರ ಹೊಸ ನಿಯಮಗಳ ಅನ್ವಯ ಹಸಿ ಕಸ, ಒಣ ಕಸ, ವಿಶೇಷ ತ್ಯಾಜ್ಯ, ಡೈಪರ್ ತ್ಯಾಜ್ಯವಾಗಿ ನಾಲ್ಕು ರೀತಿಯ ವಿಲೇವಾರಿ ಭಾಗಗಳಾಗಿ ರೂಪಿಸಲಾಗಿದ್ದು ಸಾರ್ವಜನಿಕರಲ್ಲಿ ನಿಯಮಗಳನ್ನು ಅರ್ಥೈಸಿಕೊಡಬೇಕು ಎಂದರು.ಘನ ತ್ಯಾಜ್ಯಗಳನ್ನು ನಿರ್ಲಕ್ಷಿಸುವುದರಿಂದ ಆರ್ಥಿಕತೆ ಅಷ್ಟೇ ಅಲ್ಲದೇ, ಆರೋಗ್ಯದ ಮೇಲೆಯೂ ಪರಿಣಾಮ ಬೀರುತ್ತದೆ. ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡಾಗ ಮಾತ್ರ ಮನುಷ್ಯ ಉತ್ತಮ ಆರೋಗ್ಯ ಹೊಂದಲು ಸಾಧ್ಯ. ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯಗಳನ್ನು ನಾಲ್ಕು ವಿಧದ ತ್ಯಾಜ್ಯಗಳಾದ ಹಸಿ ತ್ಯಾಜ್ಯ, ಒಣ ತ್ಯಾಜ್ಯ, ಸ್ಯಾನಿಟರಿ ತ್ಯಾಜ್ಯ ಹಾಗೂ ಸ್ಪೆಷಲ್ ಕೇರ್ ತ್ಯಾಜ್ಯಗಳ (ಬಲ್ಬ್ ಗಳು, ಬ್ಯಾಟರಿ, ಅವಧಿ ಮೀರಿದ ಔಷಧಗಳು, ಪೇಂಟ್ ಡಬ್ಬಿಗಳು ಇತ್ಯಾದಿ) ವಿಂಗಡಣೆಯನ್ನು ಮಾಡಿ ಸಂಗ್ರಹಿಸಿ, ಅವುಗಳನ್ನು ಸಾಗಾಣಿಕೆ ಮಾಡಿ ಸಂಸ್ಕರಣೆ ಹಾಗೂ ವಿಲೇವಾರಿಯನ್ನು ವೈಜ್ಞಾನಿಕವಾಗಿ ಮಾಡಬೇಕು ಎಂದರು.
ಸ್ಥಳೀಯ ಸಂಸ್ಥೆಗಳು ಪ್ರತ್ಯೇಕವಾಗಿ ಸಂಗ್ರಹಿಸಿದ ಒಣ ತ್ಯಾಜ್ಯವನ್ನು ಎಂ.ಆರ್.ಎಫ್ ಘಟಕಗಳಲ್ಲಿ ಮರುಬಳಕೆ ಮಾಡಬಹುದಾದ ವಸ್ತುಗಳು, ಮರುಬಳಕೆ ಮಾಡಲಾಗದ ವಸ್ತುಗಳು, ದಹನಕಾರಿ ತ್ಯಾಜ್ಯ ನಿಷ್ಕ್ರಿಯ ತ್ಯಾಜ್ಯಗಳು ಎಂದು ಮರು ವಿಂಗಡಣೆ ಮಾಡಿ, ನಿಯಮಾನುಸಾರ ವಿಲೇವಾರಿ ಮಾಡಬೇಕು ಎಂದು ಸೂಚಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ನಗರಾಭಿವೃದ್ಧಿಕೋಶದ ಯೋಜನಾಧಿಕಾರಿ ಟಿ.ಎನ್.ನರಸಿಂಹಮೂರ್ತಿ, ಜಿಲ್ಲಾ ಅಪರ ಪೊಲೀಸ್ ಅಧೀಕ್ಷಕ ಸಿ.ಇ.ತಿಮ್ಮಯ್ಯ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಶ್ರೀನಿವಾಸ್, ನಗರಸಭೆಯ ಪೌರಯುಕ್ತೆ ಯು.ಪಿ.ಪಂಪಾಶ್ರೀ, ಕಾರ್ಯಪಾಲಕ ಅಭಿಯಂತರ ಪ್ರತಾಪ್, ಸುಂದರ್ ರಾಜ್, ಸಂಪನ್ಮೂಲ ವ್ಯಕ್ತಿ ರಾಘವೇಂದ್ರ ಉಪಸ್ಥಿತರಿದ್ದರು.