-ತಾಲೂಕು ಅಧ್ಯಕ್ಷ ಶಾಂತಕುಮಾರ ಮಳಖೇಡ ಸಲಹೆ
ಕನ್ನಡಪ್ರಭ ವಾರ್ತೆ ಚಿತ್ತಾಪುರ
ನಾಗರ ಪಂಚಮಿ ದಿನದಂದು ಕಲ್ಲಿಗೆ ಹಾಲೆರೆಯುವ ಬದಲು ಬಡ ನಿರ್ಗತಿಕ ಮಕ್ಕಳಿಗೆ ಹಾಲು ನೀಡುವ ಮೂಲಕ ಬಸವ ಪಂಚಮಿಯನ್ನಾಗಿ ವೈಜ್ಞಾನಿಕ ಸಂಶೋಧನಾ ಪರಿಷತ್ ವತಿಯಿಂದ ಆಚರಿಸಲಾಗುತ್ತಿದ್ದೇವೆ ಎಂದು ತಾಲೂಕು ಅಧ್ಯಕ್ಷ ಶಾಂತಕುಮಾರ ಮಳಖೇಡ ತಿಳಿಸಿದರು.ಪಟ್ಟಣದಲ್ಲಿ ವಾಸಿಸುತ್ತಿರುವ ಅಲೆಮಾರಿ ಅರೆ ಅಲೆಮಾರಿ ಜನಾಂಗದ ಕುಟುಂಬದವರು ವಾಸಿಸುವ ಪ್ರದೇಶದಲ್ಲಿನ ಮಕ್ಕಳಿಗೆ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೊಧನಾ ಪರಿಷತ್ ತಾಲೂಕು ಘಟಕದಿಂದ ಹಮ್ಮಿಕೊಂಡಿದ್ದ ಬಸವ ಪಂಚಮಿ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಹಾಲು ಬಿಸ್ಕೆಟ್‌ಗಳನ್ನು ವಿತರಣೆ ಮಾಡಿ ಮಾತನಾಡಿದ ಅವರು ನಾಗರ ಹುತ್ತಕ್ಕೆ, ಕಲ್ಲಿನ ಮೂರ್ತಿಗಳಿಗೆ ಹಾಲು ಸುರಿದು ಅವೈಜ್ಞಾನಿಕವಾಗಿ ಆಚರಣೆಗೆ ಜನರು ಮುಂದಾಗುತ್ತಾರೆ. ಇದರಿಂದ ಅಪಾರ ಪ್ರಮಾಣದ ಹಾಲು ವ್ಯರ್ಥವಾಗುತ್ತಿದೆ. ಪ್ರಸ್ತುತ ಅಪೌಷ್ಟಿಕತೆಯಿಂದ ಸಾವಿರಾರು ಮಕ್ಕಳು ಸಾವಿಗೀಡಾಗುತ್ತಿದ್ದಾರೆ, ಹಾಲನ್ನು ವ್ಯರ್ಥ ಮಾಡುವ ಬದಲಿಗೆ ಬಡವರ ಮಕ್ಕಳಿಗೆ ಮತ್ತು ಬಡವರಿಗೆ ನೀಡಿದರೆ ಅದು ಅಮೃತವಾಗುತ್ತದೆ. ಹೀಗಾಗಿ ಎಲ್ಲರೂ ಮೌಡ್ಯದಿಂದ ಹೊರಬರಬೇಕು ಎಂದರು.
ಪೋಟೋ
ಚಿತ್ತಾಪುರ ಪಟ್ಟಣದಲ್ಲಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ತಾಲೂಕು ಅಧ್ಯಕ್ಷ ಶಾಂತಕುಮಾರ ಮಳಖೇಡ ನೇತೃತ್ವದಲ್ಲಿ ನಾಗರ ಪಂಚಮಿಯನ್ನು ಬಸವ ಪಂಚಮಿಯಂದು ಆಚರಿಸಿ ಮಕ್ಕಳಿಗೆ ಹಾಲು ವಿತರಿಸಿ ಆಚರಿಸಿದರು.