ಕನ್ನಡಪ್ರಭ ವಾರ್ತೆ ಗುಳೇದಗುಡ್ಡ
ತಾಲೂಕಿನ ಹಾನಾಪೂರ ಎಲ್.ಟಿ (ಸರಸ್ವತಿ ನಗರ) ಪ್ರೌಢಶಾಲೆಯಲ್ಲಿ ಶುಕ್ರವಾರ ಜರುಗಿದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಮಕ್ಕಳು ನಿತ್ಯ ಜೀವನಸಲ್ಲಿ ವೈಜ್ಞಾನಿಕ ಮನೋಭಾವನೆ ಬೆಳೆಸಿಕೊಳ್ಳಬೇಕೆಂದರು.
ಶಾಲೆಯ ಎಸ್ ಡಿಎಂಸಿ ಅಧ್ಯಕ್ಷ ಶಿವಾಜಿ ಚವ್ಹಾಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿಜ್ಞಾನಿಗಳು ನಾಡಿಗೆ ಬಹುದೊಡ್ಡ ಕೊಡುಗೆ ನೀಡಿದ್ದಾರೆ. ನಮ್ಮ ಮಕ್ಕಳು ವಿಜ್ಞಾನದಲ್ಲಿ ಆಸಕ್ತಿ ವಹಿಸಿ ಸಾಧನೆ ಮಾಡಬೇಕೆಂದು ಹೇಳಿದರು.ಶಾಲೆಯ ಮುಖ್ಯಗುರುಮಾತೆ ಆರ್.ಬಿ. ಹುಣಸಿಮರದ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಕ್ಕಳು ಮೂಢ ನಂಬಿಕೆಗಳಿಗೆ ದಾಸರಾಗದೆ ವೈಜ್ಞಾನಿಕ ದೃಷ್ಟಿಕೋನದಲ್ಲಿ ಬದುಕು ರೂಪಿಸಿಕೊಳ್ಳಬೇಕೆಂದರು.
ವಿಜ್ಞಾನ ಶಿಕ್ಷಕ ಎಸ್. ಪಿ. ಕಂದಗಲ್ಲ ಮಾತನಾಡಿ, ವಿಜ್ಞಾನ ವಿಭಾಗದಲ್ಲಿ ಏಷ್ಯಾದಲ್ಲಿ ಪ್ರಥಮ ಬಾರಿಗೆ ನೊಬೆಲ್ ಪ್ರಶಸ್ತಿಯನ್ನು ಪಡೆದಿರುವ ವಿಜ್ಞಾನಿಯ ಸರ್ ಸಿ.ವಿ. ರಾಮನ್ ರವರು ಭಾರತೀಯ ವಿಜ್ಞಾನ ಕ್ಷೇತ್ರದಲ್ಲಿ ಅವರ ಕೊಡುಗೆ ಮಹತ್ತರವಾಗಿದೆ ಎಂದರು.