- ಚನ್ನಗಿರಿಯಲ್ಲಿ ವಿದ್ಯಾರ್ಥಿಗಳಿಗೆ 2 ದಿನಗಳ ಪರಿಕ್ಷಾ ತಯಾರಿ ಶಿಬಿರ
ಚನ್ನಗಿರಿ: ತಾಲೂಕಿನ ಪ್ರೌಢಶಾಲೆಗಳಲ್ಲಿ 10ನೇ ತರಗತಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಬರುವ ವಾರ್ಷಿಕ ಪರೀಕ್ಷೆಯಲ್ಲಿ 625ಕ್ಕೆ 625 ಅಂಕಗಳನ್ನು ಪಡೆಯುವ ಎಲ್ಲ ವಿದ್ಯಾರ್ಥಿಗಳಿಗೂ ಕ್ಷೇತ್ರದ ಶಾಸಕ ಬಸವರಾಜು ವಿ. ಶಿವಗಂಗಾ ₹1 ಲಕ್ಷ ಬಹುಮಾನ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಅದರಂತೆ ವಿದ್ಯಾರ್ಥಿಗಳು ಉತ್ತಮವಾಗಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದು ಬಹುಮಾನಗಳನ್ನು ಪಡೆದು ಸಾಧನೆ ಮೆರೆಯಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಲ್.ಜಯಪ್ಪ ಹೇಳಿದರು. ಶುಕ್ರವಾರ ಪಟ್ಟಣದ ಸರ್ಕಾರಿ ಬಾಲಿಕಾ ಪ್ರೌಢಶಾಲೆ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಎರಡು ದಿನಗಳ ಪರಿಕ್ಷಾ ತಯಾರಿ ಶಿಬಿರ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶಗಳನ್ನು ಹೆಚ್ಚಿಸುವ ಸಲುವಾಗಿ 2ನೇ ಹಂತದಲ್ಲಿ ನಡೆಸಿದ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಈ ತರಬೇತಿ ಶಿಬಿರ ನಡೆಸಲಾಗುತ್ತಿದೆ ಎಂದರು.
ಅಂಗ್ಲ ಮಾಧ್ಯಮ ಮತ್ತು ಕನ್ನಡ ಮಾಧ್ಯಮಗಳ ಬೇರೆ ಬೇರೆಯಾಗಿ ಕ್ಲಿಷ್ಟಕರ ಸಮಸ್ಯೆಗಳನ್ನು ಬಿಡಿಸುವ ಕ್ರಮದ ಬಗ್ಗೆ ಈ ತರಬೇತಿ ನಡೆಯಲಿದೆ. ಚನ್ನಗಿರಿ ತಾಲೂಕಿಗೆ ಉತ್ತಮ ಫಲಿತಾಂಶ ಬರುವ ನಿಟ್ಟಿನಲ್ಲಿ ವಿದ್ಯಾರ್ಥಿಗಳನ್ನು ತಯಾರು ಮಾಡಲಾಗುತ್ತಿದೆ ಎಂದರು.ಕ್ಷೇತ್ರ ಸಮನ್ವಯ ಅಧಿಕಾರಿ ಡಾ. ಎಸ್.ಶಂಕರಪ್ಪ ವಿಷಯವಾರು ಸಂಪನ್ಮೂಲ ಶಿಕ್ಷಕರಾದ ರಾಜಶೇಖರ್, ಸುಷ್ಮಾ, ಷಣ್ಮುಖ, ದಾವಣಗೆರೆ ದ್ಯಾಮೇಶ್, ರಮೇಶ್, ಶಶಿಕುಮಾರ್, ವೆಂಕಟೇಶ್, ದ್ಯಾಮೇಶ್ ಶಿಬಿರವನ್ನು ನಡೆಸಿಕೊಟ್ಟರು.
- - --6ಕೆಸಿಎನ್‌ಜಿ4:
ಶಿಬಿರವನ್ನು ಚನ್ನಗಿರಿ ತಾಲೂಕು ಬಿಇಒ ಎಲ್.ಜಯಪ್ಪ ಉದ್ಘಾಟಿಸಿದರು.