ಸ್ಕೌಟ್ಸ್, ಗೈಡ್ಸ್ ಮಕ್ಕಳಲ್ಲಿ ಜೀವನ ಕೌಶಲ್ಯ ವೃದ್ಧಿಸುತ್ತದೆ

KannadaprabhaNewsNetwork |  
Published : Sep 27, 2024, 01:22 AM IST
26ಎಚ್ಎಸ್ಎನ್14 : ಭೈರಾಪುರದ ಬೆಥೆಸ್ಥ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಸ್ಕೌಟ್ಸ್ ಹಾಗೂ ಗೈಡ್ಸ್ ಮಕ್ಕಳ ತೃತೀಯ ಸೋಪಾನ ಪರೀಕ್ಷಾ ಶಿಬಿರದಲ್ಲಿ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು. | Kannada Prabha

ಸಾರಾಂಶ

ಭಾರತ್ ಸ್ಕೌಟ್ಸ್, ಗೈಡ್ಸ್ ಮಕ್ಕಳಲ್ಲಿ ಶಿಸ್ತುಬದ್ಧ ಜೀವನ ರೂಪಿಸುವುದರ ಜೊತೆಗೆ ಅವರಲ್ಲಿ ಜೀವನ ಕೌಶಲ್ಯಗಳನ್ನು ವೃದ್ಧಿಸುತ್ತದೆ ಎಂದು ಹಾಸನ ಜಿಲ್ಲಾ ಕಾರ್ಯದರ್ಶಿ ಸುರೇಶ್ ಗುರೂಜಿ ಅಭಿಪ್ರಾಯಪಟ್ಟರು. ಮಕ್ಕಳ ಸಂಖ್ಯೆ ಅಧಿಕವಾಗಿದ್ದಾಗ ಜಿಲ್ಲಾ ಹಂತದ ಪರೀಕ್ಷಾ ಶಿಬಿರಗಳನ್ನು ಸ್ಥಳೀಯ ಸಂಸ್ಥೆಗಳು ಹಮ್ಮಿಕೊಳ್ಳುವುದರಿಂದ ಆಯಾಯ ತಾಲೂಕಿನ ಮಕ್ಕಳಿಗೆ ಅನುಕೂಲವಾಗುತ್ತದೆ. ಕೊಟ್ರೇಶ್ ಎಸ್. ಉಪ್ಪಾರ್‌ ಆಲೂರು ತಾಲೂಕು ಕಾರ್ಯದರ್ಶಿಯಾದ ನಂತರ ತಾಲೂಕಿನಲ್ಲಿ ಸ್ಕೌಟ್ಸ್, ಗೈಡ್ಸ್ ತುಂಬಾ ಕ್ರಿಯಾಶೀಲವಾಗಿ ನಡೆಯುತ್ತಿದೆ. ಯುನೀಟ್ ಹಾಗೂ ಮಕ್ಕಳ ಸಂಖ್ಯೆಯೂ ಸಾಕಷ್ಟು ಅಭಿವೃದ್ಧಿಯಾಗಿದೆ ಎಂದರು.

ಕನ್ನಡಪ್ರಭ ವಾರ್ತೆ ಆಲೂರು

ಭಾರತ್ ಸ್ಕೌಟ್ಸ್, ಗೈಡ್ಸ್ ಮಕ್ಕಳಲ್ಲಿ ಶಿಸ್ತುಬದ್ಧ ಜೀವನ ರೂಪಿಸುವುದರ ಜೊತೆಗೆ ಅವರಲ್ಲಿ ಜೀವನ ಕೌಶಲ್ಯಗಳನ್ನು ವೃದ್ಧಿಸುತ್ತದೆ ಎಂದು ಹಾಸನ ಜಿಲ್ಲಾ ಕಾರ್ಯದರ್ಶಿ ಸುರೇಶ್ ಗುರೂಜಿ ಅಭಿಪ್ರಾಯಪಟ್ಟರು.

ಅವರು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಹಾಸನ ಹಾಗೂ ಸ್ಥಳೀಯ ಸಂಸ್ಥೆ ಆಲೂರು ಸಹಯೋಗದಲ್ಲಿ ಆಲೂರು ತಾಲೂಕು ಭೈರಾಪುರದ ಬೆಥೆಸ್ಥ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಸ್ಕೌಟ್ಸ್ ಹಾಗೂ ಗೈಡ್ಸ್ ಮಕ್ಕಳ ತೃತೀಯ ಸೋಪಾನ ಪರೀಕ್ಷಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ಜಿಲ್ಲಾ ಹಂತದ ಪರೀಕ್ಷಾ ಶಿಬಿರದಲ್ಲಿ ತೃತೀಯ ಸೋಪಾನ ಪರೀಕ್ಷೆಗೆ ಸಂಬಂಧಿಸಿದಂತೆ ಲಿಖಿತ ಹಾಗೂ ಮೌಖಿಕ ಪ್ರಶ್ನೆಗಳನ್ನು ಕೇಳಲಾಗುವುದು. ಸಮರ್ಥವಾಗಿ ಉತ್ತರಿಸಿ ಉತ್ತೀರ್ಣರಾಗಿ ರಾಜ್ಯ ಸಂಸ್ಥೆ ಹಮ್ಮಿಕೊಳ್ಳುವ ರಾಜ್ಯ ಪುರಸ್ಕಾರ್‌ ಪರೀಕ್ಷಾ ಶಿಬಿರಕ್ಕೆ ಇನ್ನೂ ಹೆಚ್ಚಿನ ರೀತಿಯಲ್ಲಿ ಸಿದ್ಧತೆ ಮಾಡಿಕೊಳ್ಳಬೇಕು. ಮಕ್ಕಳ ಸಂಖ್ಯೆ ಅಧಿಕವಾಗಿದ್ದಾಗ ಜಿಲ್ಲಾ ಹಂತದ ಪರೀಕ್ಷಾ ಶಿಬಿರಗಳನ್ನು ಸ್ಥಳೀಯ ಸಂಸ್ಥೆಗಳು ಹಮ್ಮಿಕೊಳ್ಳುವುದರಿಂದ ಆಯಾಯ ತಾಲೂಕಿನ ಮಕ್ಕಳಿಗೆ ಅನುಕೂಲವಾಗುತ್ತದೆ. ಕೊಟ್ರೇಶ್ ಎಸ್. ಉಪ್ಪಾರ್‌ ಆಲೂರು ತಾಲೂಕು ಕಾರ್ಯದರ್ಶಿಯಾದ ನಂತರ ತಾಲೂಕಿನಲ್ಲಿ ಸ್ಕೌಟ್ಸ್, ಗೈಡ್ಸ್ ತುಂಬಾ ಕ್ರಿಯಾಶೀಲವಾಗಿ ನಡೆಯುತ್ತಿದೆ. ಯುನೀಟ್ ಹಾಗೂ ಮಕ್ಕಳ ಸಂಖ್ಯೆಯೂ ಸಾಕಷ್ಟು ಅಭಿವೃದ್ಧಿಯಾಗಿದೆ ಎಂದರು.

ಜಿಲ್ಲಾ ಸಹಾಯಕ ಆಯುಕ್ತ ಎಂ. ಬಾಲಕೃಷ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಕ್ಕಳು ಧರಿಸುವ ಸಮವಸ್ತ್ರವೇ ಸಮಾಜದಲ್ಲಿ ಗೌರವ ತಂದುಕೊಡುತ್ತದೆ. ಸಮವಸ್ತ್ರಕ್ಕೆ ತಕ್ಕಂತೆ ನಮ್ಮ ನಡೆನುಡಿಯೂ ಸಹ ಇರಬೇಕು. ಗುರುಹಿರಿಯರಿಗೆ ಗೌರವಿಸುವುದಲ್ಲದೇ ಮಾನವೀಯ ಮೌಲ್ಯಗಳನ್ನು ರೂಢಿಸಿಕೊಂಡು ಆದರ್ಶಮಯವಾಗಿ ಬದುಕಬೇಕು. ಸ್ಕೌಟ್ಸ್, ಗೈಡ್ಸ್ ಮಕ್ಕಳಲ್ಲಿ ಶಿಸ್ತು, ಸಂಯಮ, ಶಾಂತಿ, ಸಹಕಾರ ಮನೋಧೋರಣೆ, ಸಹನಾಶೀಲತೆ ಮುಂತಾದ ಮಹತ್ತರ ಅಂಶಗಳನ್ನು ಬಿತ್ತುತ್ತದೆ. ನಮ್ಮ ಸಂಸ್ಥೆಯ ಮುಖ್ಯ ಧ್ಯೇಯವಾಕ್ಯವೇ ಸದಾ ಸಿದ್ಧವಾಗಿರು. ಅಂದರೆ ಸಮಾಜದ ಅಭ್ಯುದಯಕ್ಕಾಗಿ ಸೇವೆ ಸಲ್ಲಿಸಲು ಮಕ್ಕಳನ್ನು ಸನ್ನದ್ಧಗೊಳಿಸುತ್ತದೆ ಎಂದರು.

ಜಿಲ್ಲಾ ಸ್ಕೌಟ್ಸ್ ತರಬೇತಿ ಆಯುಕ್ತ ಎಂ. ಎಸ್. ಪ್ರಕಾಶ್ ಮಾತನಾಡಿ, ಸ್ಕೌಟ್ಸ್ ಮತ್ತು ಗೈಡ್ಸ್ ಹುಟ್ಟಿದ್ದೇ ಬಾಲಕ ಹಾಗೂ ಬಾಲಕಿಯರಿಗಾಗಿ. ಕಬ್, ಬುಲ್‌ಬುಲ್, ಸ್ಕೌಟ್, ಗೈಡ್, ರೋವರ್‌ ಹಾಗೂ ರೇಂಜರ್‌ ಎಂಬ ವಿವಿಧ ವಯೋಮಾನದ ಹಂತದ ಮಕ್ಕಳಿಗೆ ಜೀವನ ಕೌಶಲಗಳನ್ನು ಕಲಿಸುವುದರ ಜೊತೆಗೆ ಸಾಮಾಜಿಕ ಜವಾಬ್ದಾರಿಯ ಅರಿವನ್ನುಂಟುಮಾಡಿ ಉತ್ತಮ ನಾಗರಿಕರನ್ನಾಗಿ ರೂಪಿಸುವುದೇ ಸ್ಕೌಟ್ಸ್‌ ಮತ್ತು ಗೈಡ್ಸ್‌ ಮುಖ್ಯ ಗುರಿಯಾಗಿದೆ ಎಂದರು.

ವೇದಿಕೆಯಲ್ಲಿ ರಾಜ್ಯ ಸಂಘಟನಾ ಸಹಾಯಕ ಆಯುಕ್ತೆ ಎಚ್. ಎಂ. ಪ್ರಿಯಾಂಕ, ಜಿಲ್ಲಾ ಖಜಾಂಚಿ ರಮೇಶ್, ಹಿರಿಯ ಗೈಡರ್‌ ಎಚ್.ಜಿ.ಕಾಂಚನಮಾಲ, ತಾಲೂಕು ಕಾರ್ಯದರ್ಶಿ ಎಂ. ಬಾಲಕೃಷ್ಣ, ಸ್ಕೌಟ್ಸ್‌ ಮಾಸ್ಟರ್ ಪಿ. ಚಂದ್ರು, ಲೇಡಿ ಸ್ಕೌಟ್ಸ್‌ ಮಾಸ್ಟರ್‌ ಕಾವ್ಯ, ಗೈಡ್ ಕ್ಯಾಪ್ಟನ್‌ಗಳಾದ ಶಿಲ್ಪಕೃತಿ ಹಾಗೂ ಶೃತಿ ಸೇರಿದಂತೆ ಬೆಥಸ್ಥ ಶಾಲೆಯ ೬೭ ವಿದ್ಯಾರ್ಥಿಗಳು, ಮರಸು ಹೊಸಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ೩೪ ವಿದ್ಯಾರ್ಥಿಗಳು ತಾಳೂರು ಶಾಲೆಯ ೪ ವಿದ್ಯಾರ್ಥಿಗಳು ಪರೀಕ್ಷಾ ಶಿಬಿರದಲ್ಲಿ ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಲ್ಲಮಾವಟಿ ಭಗವತಿ ದೇವಸ್ಥಾನದಲ್ಲಿ ಶಡಾಧರ ಪೂಜಾ ಸಂಪನ್ನ
ಕಡಿಮೆ ಬೆಳೆ ವಿಮಾ ಮೊತ್ತ ಸರಿಪಡಿಸಿ ಮರು ಪಾವತಿಗೆ ಆಗ್ರಹ