ದೇಶ ಭವಿಷ್ಯ ನಿರ್ಮಿಸುವಲ್ಲಿ ಸ್ಕೌಟ್ಸ್ ಗೈಡ್ಸ್ ಶಿಕ್ಷಣ ಸಹಕಾರಿ: ದಿನೇಶ ಕೆ. ಶೆಟ್ಟಿ

KannadaprabhaNewsNetwork | Published : Feb 27, 2025 12:36 AM

ಸಾರಾಂಶ

ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ವಿಶೇಷವಾಗಿ ಮಕ್ಕಳಿಗೆ ಶಿಸ್ತು, ಸಂಯಮ, ದೇಶಭಕ್ತಿ, ಉದಾರ ಮನೋಭಾವಗಳನ್ನು ಬೆಳೆಸುವಲ್ಲಿ ಕಾರ್ಯಪ್ರವೃತ್ತವಾಗಿದೆ. ದೇಶಕ್ಕೆ ಉಜ್ವಲ ಭವಿಷ್ಯ ನಿರ್ಮಿಸುವಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಚಟುವಟಿಕೆಗಳು ಸಹಕಾರಿಯಾಗಿವೆ ಕೊಂಡಜ್ಜಿ ಬಸಪ್ಪ ಸ್ಥಳೀಯ ಸಂಸ್ಥೆ ಅಧ್ಯಕ್ಷ, ದೂಡಾ ಅಧ್ಯಕ್ಷ ದಿನೇಶ ಕೆ. ಶೆಟ್ಟಿ ಹೇಳಿದ್ದಾರೆ.

- ಕಾಸಲ್ ಶ್ರೀನಿವಾಸ ಶೆಟ್ಟಿ ಪಾರ್ಕ್‌ನಲ್ಲಿ ರ‍್ಯಾಲಿಗೆ ಚಾಲನೆ - - - ದಾವಣಗೆರೆ: ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ವಿಶೇಷವಾಗಿ ಮಕ್ಕಳಿಗೆ ಶಿಸ್ತು, ಸಂಯಮ, ದೇಶಭಕ್ತಿ, ಉದಾರ ಮನೋಭಾವಗಳನ್ನು ಬೆಳೆಸುವಲ್ಲಿ ಕಾರ್ಯಪ್ರವೃತ್ತವಾಗಿದೆ. ದೇಶಕ್ಕೆ ಉಜ್ವಲ ಭವಿಷ್ಯ ನಿರ್ಮಿಸುವಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಚಟುವಟಿಕೆಗಳು ಸಹಕಾರಿಯಾಗಿವೆ ಕೊಂಡಜ್ಜಿ ಬಸಪ್ಪ ಸ್ಥಳೀಯ ಸಂಸ್ಥೆ ಅಧ್ಯಕ್ಷ, ದೂಡಾ ಅಧ್ಯಕ್ಷ ದಿನೇಶ ಕೆ. ಶೆಟ್ಟಿ ಹೇಳಿದರು.

ನಗರದ ಕಾಸಲ್ ಶ್ರೀನಿವಾಸ ಶೆಟ್ಟಿ ಪಾರ್ಕ್‌ನಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಜಿಲ್ಲಾ ಸಂಸ್ಥೆ ವತಿಯಿಂದ ಸಂಸ್ಥಾಪಕರ ದಿನಾಚರಣೆ, ಚಿಂತನಾ ದಿನ ಅಂಗವಾಗಿ ಶನಿವಾರ ನಡೆದ ಜಿಲ್ಲಾಮಟ್ಟದ ರ‍್ಯಾಲಿ ಹಾಗೂ ಚಿತ್ರಕಲಾ ಸ್ಪರ್ಧೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಗಳು ಅಂತರ ರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚು ಪ್ರಸಿದ್ಧಿ ಪಡೆದಿವೆ. ಇದರಿಂದಾಗಿ ಹೆಚ್ಚು ಹೆಚ್ಚು ಮಕ್ಕಳು ಭಾಗವಹಿಸಿ, ಶಿಕ್ಷಣ ಪಡೆಯಬೇಕು. ಪ್ರತಿ ಶಾಲಾ- ಕಾಲೇಜು ಮಟ್ಟದಲ್ಲಿಯೇ ಸ್ಕೌಟ್ಸ್ ಮತ್ತು ಗೈಡ್ಸ್ ಸಕ್ರಿಯವಾಗಿ ಭಾಗವಹಿಸುವಲ್ಲಿ ಗಮನಹರಿಸುವುದು ಉತ್ತಮ. ಸ್ಥಳೀಯವಾಗಿ ಪ್ರಶಸ್ತಿ ಪಡೆದ ಮಕ್ಕಳು ಮುಂದಿನ ದಿನಗಳಲ್ಲಿ ರಾಷ್ಟ್ರಮಟ್ಟದ ಪ್ರಶಸ್ತಿಗೆ ಭಾಜನರಾಗುವಂತೆ ಸಲಹೆ ನೀಡಿದರು.

ಮಹಾನಗರ ಪಾಲಿಕೆ ಸದಸ್ಯ ಮಂಜುನಾಥ ಗಡಿಗುಡಾಳ್ ವಿದ್ಯಾರ್ಥಿಗಳಿಗೆ ಶುಭಕೋರಿದರು. ಜಿಲ್ಲಾ ಮುಖ್ಯ ಆಯುಕ್ತ ಮುರುಘರಾಜೇಂದ್ರ ಚಿಗಟೇರಿ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಜಿಲ್ಲಾ ಆಯುಕ್ತ ಎ.ಪಿ.ಷಡಕ್ಷರಪ್ಪ, ಕಾರ್ಯದರ್ಶಿ ರತ್ನ, ಜಿಲ್ಲಾ ಉಪಾಧ್ಯಕ್ಷೆ ಶಾಂತಾ ಯಾವಗಲ್, ಜಿಲ್ಲಾ ಉಪಾಧ್ಯಕ್ಷ ಎ.ಮಹಾಲಿಂಗಪ್ಪ, ಗೈಡ್ ತರಬೇತಿ ಆಯುಕ್ತೆ ತುಳಸಿಮಣಿ, ಜಿಲ್ಲಾ ಸಹಾಯಕ ಆಯುಕ್ತರಾದ ಎನ್.ಕೆ.ಕೊಟ್ರೇಶ, ಹಾಲಪ್ಪ, ಟಿ.ಎಂ.ರವೀಂದ್ರ ಸ್ವಾಮಿ, ಶಶಿರೇಖಾ, ನಿಂಗರಾಜ, ಮುಸ್ತಫ, ತ್ಯಾಗರಾಜ, ಹನುಮಂತಪ್ಪ ಉಳ್ಳಾಗಡ್ಡಿ, ಶಶಿಧರ, ಪಲ್ಲವಿ, ಮಧು, ಮಂಜುಳ, ಅಶ್ವಿನಿ, ಶೀಲಾವತಿ, ಜಾಸ್ಮಿನ್, ಪುಷ್ಪವತಿ, ಮಾನಸ, ನಸೀಮ, ದೀಪಿಕಾ ಇತರರು ಇದ್ದರು.

- - - -22ಕೆಡಿವಿಜಿ36: ದಾವಣಗೆರೆಯಲ್ಲಿ ಸ್ಕೌಟ್ಸ್ ಅಂಡ್ ಗೈಡ್ಸ್ ಸಂಸ್ಥೆ ಸಂಸ್ಥಾಪಕರ ದಿನಾಚರಣೆಯ ರ‍್ಯಾಲಿಗೆ ದಿನೇಶ ಕೆ. ಶೆಟ್ಟಿ ಚಾಲನೆ ನೀಡಿದರು.

Share this article