ಸ್ಕೌಟ್ಸ್, ಗೈಡ್ಸ್ ವಿದ್ಯಾರ್ಥಿಗಳಿಗೆ ಪರಿಸರ ವೀಕ್ಷಣೆ, ಮಾಹಿತಿ ಕಾರ್ಯಾಗಾರ

KannadaprabhaNewsNetwork |  
Published : Dec 17, 2023, 01:45 AM IST
 ಚಿತ್ರ.1: ಸ್ಕೌಟ್ಸ್,ಗೈಡ್ಸ್, ಕಬ್ಸ್, ಬುಲ್ ಬುಲ್ ದಳಗಳ ವಿದ್ಯಾರ್ಥಿಗಳು ಸಾಹಸ ಕ್ರೀಡೆಯಲ್ಲಿ ತೊಡಗಿಸಿಕೊಂಡಿರುವುದು.  2: ಕಾವೇರಿ ನಿಸರ್ಗಧಾಮದ ವನರಕ್ಷಕರು ಅರಣ್ಯ ಹಾಗೂ ಪರಿಸರದ ಬಗ್ಗೆ ಮಾಹಿತಿ ನೀಡುತ್ತೀರುವುದು. | Kannada Prabha

ಸಾರಾಂಶ

ಸಂತ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆಯ ಸ್ಕೌಟ್ಸ್, ಗೈಡ್ಸ್, ಕಬ್ಸ್ ಹಾಗೂ ಬುಲ್ ಬುಲ್ ದಳಗಳ ವಿದ್ಯಾರ್ಥಿಗಳಿಗೆ ಪರಿಸರ ವೀಕ್ಷಣೆ ಮತ್ತು ಮಾಹಿತಿ ಕಾರ್ಯಾಗಾರವನ್ನು ಕುಶಾಲನಗರದ ಕಾವೇರಿ ನಿಸರ್ಗಧಾಮದಲ್ಲಿ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ

ಸಂತ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆಯ ಸ್ಕೌಟ್ಸ್, ಗೈಡ್ಸ್, ಕಬ್ಸ್ ಹಾಗೂ ಬುಲ್ ಬುಲ್ ದಳಗಳ ವಿದ್ಯಾರ್ಥಿಗಳಿಗೆ ಪರಿಸರ ವೀಕ್ಷಣೆ ಮತ್ತು ಮಾಹಿತಿ ಕಾರ್ಯಾಗಾರವನ್ನು ಕುಶಾಲನಗರದ ಕಾವೇರಿ ನಿಸರ್ಗಧಾಮದಲ್ಲಿ ನಡೆಸಲಾಯಿತು.ಕುಶಾಲನಗರದ ಕಾವೇರಿ ನಿಸರ್ಗಧಾಮದಲ್ಲಿ ಪರಿಸರ ವೀಕ್ಷಣೆ ಮತ್ತು ಮಾಹಿತಿ ಕಾರ್ಯಾಗಾರದ ಕಾರ್ಯಕ್ರಮವನ್ನು ಭಾರತ್ ಸ್ಕೌಟ್ಸ್, ಗೈಡ್ಸ್‌ನ ಸಂಘಟಕರಾದ ದಮಯಂತಿ, ಧ್ವಜಾರೋಹಣ ನೇರವೇರಿಸಿ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಸ್ಕೌಟ್ಸ್ ಮತ್ತು ಗೈಡ್ಸ್‌ನ ಧ್ಯೇಯೋದ್ದೇಶಗಳ ಬಗ್ಗೆ ತಿಳಿಸಿ, ವಿದ್ಯಾರ್ಥಿಗಳು ಕಲಿಕೆಯೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಮುಖ್ಯ. ಅದೇ ರೀತಿ ಸಮಾಜದಲ್ಲಿ ಸಂಕಷ್ಟದಲ್ಲಿರುವ ಜನತೆಗೆ ಸೇವೆಯನ್ನು ಸಲ್ಲಿಸುವ ಮೂಲಕ ಸೇವಾ ಮನೋಬಾವನೆಯನ್ನು ವಿದ್ಯಾರ್ಥಿ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಕಿವಿಮಾತು ಹೇಳಿದರು.

ಕಾವೇರಿ ನಿಸರ್ಗಧಾಮದ ವನರಕ್ಷಕರು ಅರಣ್ಯ ಹಾಗೂ ಪರಿಸರದ ಬಗ್ಗೆ ಮಾಹಿತಿ ನೀಡಿದರು.

ನಂತರ 4 ದಳಗಳ ಸದಸ್ಯರು ವಿವಿಧ ಚಟುವಟಿಕೆಗಳಾದ ಪರಿಸರ ವೀಕ್ಷಣೆ, ಸಾಹಸ ಕ್ರೀಡೆ ಮೂಲಕ ಮನರಂಜಿಸಿ ಉತ್ತಮ ಮೌಲ್ಯಗಳ ವಿಚಾರದ ಕುರಿತು ಮಾಹಿತಿಯನ್ನು ನೀಡಲಾಯಿತು.

ಈ ಸಂದರ್ಭ ಶಾಲಾ ಮುಖ್ಯೋಪಾಧ್ಯಯಿನಿ ವೀರಾ ಡಿಸೋಜ, ಗೈಡ್ಸ್‌ನ ಶಿಕ್ಷಕಿ ಪ್ರೀತಿ ಜಾಯ್ಸ್ ಡಿಕುನ್ನಾ, ಸ್ಕೌಟ್ಸ್ ಮಹೇಶ್, ಕಬ್ಸ್, ಬುಲ್ ಬುಲ್ ದಳದ ಶಿಕ್ಷಕಿ ಯೀವಾ ಬೆನ್ನಿಸ್, ದಳಗಳ ನಾಯಕರು ಹಾಗೂ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗ್ಯಾರಂಟಿಗಳ ಜತೆಗೆ ಹಲವು ಹೊಸ ಯೋಜನೆಗಳೂ ಉಂಟು
ಕೇರಳ ರೀತಿ ಮನೆಯಲ್ಲೇ ರೋಗಿಗಳಿಗೆ ಆರೈಕೆ