ವಿದ್ಯಾರ್ಥಿಗಳಲ್ಲಿ ಜ್ಞಾನ ವೃದ್ಧಿಗೆ ಸ್ಕೌಟ್ಸ್-ಗೈಡ್ಸ್ ಜಾಂಬೋರೇಟ್ ಸಹಕಾರಿ

KannadaprabhaNewsNetwork | Published : Jan 18, 2025 12:45 AM

ಸಾರಾಂಶ

Scouts-Guides Jamboree helps in enhancing knowledge among students

-ಸಚಿವ ಶರಣಬಸಪ್ಪ ದರ್ಶನಾಪುರ ಅಭಿಮತ । ಕಲ್ಯಾಣ ಕರ್ನಾಟಕ ವಿಭಾಗದ ಸ್ಕೌಟ್ಸ್ ಮತ್ತು ಗೈಡ್ಸ್ ಜಾಂಬೋರೇಟ್ ಉದ್ಘಾಟನೆ

----

ಕನ್ನಡಪ್ರಭ ವಾರ್ತೆ ಯಾದಗಿರಿ

ಸ್ಕೌಟ್ಸ್ ಮತ್ತು ಗೈಡ್ಸ್ ಜಾಂಬೋರೇಟ್‌ಗಳಿಂದ ವಿದ್ಯಾರ್ಥಿಗಳಲ್ಲಿನ ಆತ್ಮವಿಶ್ವಾಸ ಹೆಚ್ಚಲು ಸಹಕಾರಿಯಾಗಲಿದೆ ಎಂದು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವ ಶರಣಬಸಪ್ಪ ದರ್ಶನಾಪುರ ಹೇಳಿದರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಕಲ್ಯಾಣ ಕರ್ನಾಟಕ ವಿಭಾಗದ ಸ್ಕೌಟ್ಸ್ ಮತ್ತು ಗೈಡ್ಸ್ ಜಾಂಬೋರೇಟ್ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, ಸ್ಕೌಟ್ಸ್ ಮತ್ತು ಗೈಡ್ಸ್ ಜಾಂಬೋರೇಟ್ ಗಳಂತಹ ಚಟುವಟಿಕೆಗಳಿಂದ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ವೃದ್ಧಿಯಾಗುವ ಜೊತೆಗೆ ಜ್ಞಾನ, ಸುಪ್ತ ಪ್ರತಿಭೆ ಅನಾವರಣಕ್ಕೆ ನೆರವಾಗಲಿದೆ ಎಂದು ಹೇಳಿದರು.

ವಿದ್ಯಾರ್ಥಿಗಳು ಈ ಅವಕಾಶವನ್ನು ಸದ್ಬಳಕೆ ಮಾಡಿಕೊಂಡು ತಮ್ಮ ನಿಜ ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಇನ್ನೂ ಹೆಚ್ಚು ಸಹಕಾರಿ ಎಂದು ಅವರು ಸಮಾಜ ಸೇವೆಗೆ ನೆರವಾಗುವ ಸ್ಕೌಟ್ಸ್ ಮತ್ತು ಗೈಡ್ಸ್ ತಂಡದ ಕಾರ್ಯ ಶ್ಲಾಘನೀಯವಾಗಿದೆ ಎಂದು ಹೇಳಿದರು.

ಮಾಜಿ ಗೃಹ ಸಚಿವ ಹಾಗೂ ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಪ್ರಧಾನ ಆಯುಕ್ತ ಪಿ.ಜಿ.ಆರ್.ಸಿಂಧ್ಯ ಮಾತನಾಡಿ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಸ್ಮರಣೀಯ ಸೇವೆಯನ್ನು ಬಾಪುಗೌಡ ದರ್ಶನಾಪುರ ಅವರು ಸಲ್ಲಿಸಿದ್ದು, ಅವರು ಸದಾ ಸ್ಮರಣೀಯರಾಗಿದ್ದಾರೆ. ಸ್ಕೌಟ್ಸ್ ಮತ್ತು ಗೈಡ್ಸ್ ಯುದ್ಧ ಕಾಲದಲ್ಲಿ ಕೊರೋನಾ ಕಾಲದಲ್ಲಿ ರಾಜ್ಯ ಸರ್ಕಾರಕ್ಕೆ ಕೈ ಜೋಡಿಸಿ ಸೇವೆ ಸಲ್ಲಿಸಿದೆ, ಧೈರ್ಯ ಹಾಗೂ ಶಾಂತಿಗಾಗಿ ಹೋರಾಟ ಮಾಡಿದ್ದಾರೆ.

ಮಾನವೀಯ ಸೇವಾ ಭಾವನೆ ಬೆಳೆಸಲು, ದೇವರಲ್ಲಿ, ದೇಶದಲ್ಲಿ ನಂಬಿಕೆ ಇಟ್ಟು ಕೆಲಸ ನಿರ್ವಹಿಸಲು ಪ್ರೇರೇಪಿಸುವ ಉದ್ದೇಶದಿಂದ ಇಂತಹ ಜಾಂಬೋರೇಟ್ ಏರ್ಪಡಿಸಲಾಗುತ್ತಿದೆ. ಇದಕ್ಕಾಗಿ ನಿರಂತರ ಸಹಾಯಹಸ್ತ ಚಾಚಿದ ಕೊಡುಗೈ ದಾನಿಗಳಿಗೆ, ಜಿಲ್ಲಾಡಳಿತಕ್ಕೆ ಅಭಿನಂದಿಸುವುದಾಗಿ ತಿಳಿಸಿದರು.

ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ್ ಅಧ್ಯಕ್ಷತೆವಹಿಸಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವನೆ ಸ್ಕೌಟ್ಸ್ ಮತ್ತು ಗೈಡ್ಸ್ ದಿಂದ ಬೆಳೆಯುತ್ತಿದ್ದು, ಇದಕ್ಕೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಕಾರ್ಯಕ್ರಮದ ಆರಂಭದಲ್ಲಿ ರಾಷ್ಟ್ರ ಧ್ವಜಾರೋಹಣ, ಸ್ಕೌಟ್ಸ್ ಮತ್ತು ಗೈಡ್ಸ್ ಧ್ವಜಾರೋಹಣ ನೆರವೇರಿಸಿ ಗೌರವ ಸಲ್ಲಿಸಲಾಯಿತು. ಸಂವಿಧಾನದ ಪೀಠಿಕೆ ವಾಚನ ಮಾಡಲಾಯಿತು. ವಿದ್ಯಾರ್ಥಿಗಳಿಗೆ ಬ್ಯಾಗ್ ಮತ್ತು ಕ್ಯಾಪ್ ಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ವಿನಾಯಕ ಮಾಲಿಪಾಟೀಲ್, ಪ್ರಭಾರಿ ಜಿಲ್ಲಾಧಿಕಾರಿ ಲವೀಶ್ ಒರಡಿಯಾ,ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೋಳ, ಡಿಡಿಪಿಐಸಿ. ಮುಧೋಳ, ಕ್ರೀಡಾಧಿಕಾರಿ ರಾಜು ಬಾವಿಹಳ್ಳಿ, ಡಾನ್ ಬಾಸ್ಕೋ ಶಾಲೆಯ ಫಾದರ್ ಸರ್ಜಿ ಜಾರ್ಜ್, ಹೆಚ್.ಎಮ್. ಸಿದ್ದರಾಮ ಸ್ವಾಮಿ, ರಾಮನಗೌಡ ಮುದ್ನಾಳ, ಮಹೇಶ್ ರೆಡ್ಡಿ ಮುದ್ನಾಳ, ಬಸವರಾಜ ಮಾಮನಿ, ನಾಗರತ್ನ, ಡಾ. ಶರಣಭೂಪಾಲ ರೆಡ್ಡಿ, ಹಿರಿಯ ಪತ್ರಕರ್ತ ಪ್ರೊ. ಸಿ. ಎಂ.ಪಟ್ಟೇದಾರ್, ರಾಘವೇಂದ್ರ ಅಳ್ಳಳ್ಳಿ, ಬಸವರಾಜ ಬೋರಡ್ಡಿ ಉಪಸ್ಥಿತರಿದ್ದರು. ಸ್ಕೌಟ್ಸ್ ಮತ್ತು ಗೈಡ್ಸ್ ಕಲ್ಯಾಣ ಕರ್ನಾಟಕ ಉಸ್ತುವಾರಿ ಮಲ್ಲೇಶ್ವರಿ ಜುಜಾರೆ ಸ್ವಾಗತಿಸಿದರು. ಜಿಲ್ಲಾ ಸಂಸ್ಥೆ ಅಧ್ಯಕ್ಷ ಸುರೇಶ್ ಸಜ್ಜನ್ ಮಾತನಾಡಿದರು.

-----

17ವೈಡಿಆರ್‌11 : ಯಾದಗಿರಿ ಜಿಲ್ಲಾ ಕ್ರೀಡಾಂಗಣದಲ್ಲಿ ಕಲ್ಯಾಣ ಕರ್ನಾಟಕ ವಿಭಾಗದ ಸ್ಕೌಟ್ಸ್ ಮತ್ತು ಗೈಡ್ಸ್ ಜಾಂಬೋರೇಟ್ ಕಾರ್ಯಕ್ರಮವನ್ನು ಸಚಿವ ದರ್ಶನಾಪುರ ಉದ್ಘಾಟಿಸಿದರು.

---

17ವೈಡಿಆರ್‌12 : ಯಾದಗಿರಿ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಕಲ್ಯಾಣ ಕರ್ನಾಟಕ ವಿಭಾಗದ ಸ್ಕೌಟ್ಸ್ ಮತ್ತು ಗೈಡ್ಸ್ ಜಾಂಬೋರೇಟ್ ಕಾರ್ಯಕ್ರಮದಲ್ಲಿ ಕಲ್ಯಾಣ ಕರ್ನಾಟಕ ವಿಭಾಗದ ಏಳು ಜಿಲ್ಲೆಗಳ ವಿಶೇಷತೆ ಹೊಂದಿರುವ ವಸ್ತುಪ್ರದರ್ಶನ ಮಳಿಗೆಗಳನ್ನು ಸಚಿವ ದರ್ಶನಾಪುರ ವೀಕ್ಷಿಸಿದರು.

Share this article