ರಾಜ್ಯ ಸರ್ಕಾರವೂ ಕರಡು ಅಧಿಸೂಚನೆಗೆ ವಿರೋಧ ವ್ಯಕ್ತಪಡಿಸಿದ್ದು, ಈ ಕುರಿತು ಕೇಂದ್ರ ಸರ್ಕಾರಕ್ಕೆ ಆಕ್ಷೇಪ ಸಲ್ಲಿಸುವುದಾಗಿ ತಿಳಿಸಿದೆ. ಜನರ ಸಮಸ್ಯೆ ಹಾಗೂ ಆತಂಕಗಳನ್ನು ಖುದ್ದಾಗಿ ಆಲಿಸಲು ಮುಖ್ಯಮಂತ್ರಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಪಕ್ಷಾತೀತವಾಗಿ ಸಾರ್ವಜನಿಕರು, ರೈತರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು. ಎಪಿಎಂಸಿ ಮಾಜಿ ಅಧ್ಯಕ್ಷ ಎಚ್.ಎಚ್. ಉದಯ್ ಮಾತನಾಡಿ, ವರದಿ ಜಾರಿಯಾದರೆ ಮಲೆನಾಡಿನ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ ಹಾಗೂ ಜನರ ಬದುಕಿನ ಮೇಲೆ ಪರಿಣಾಮ ಬೀರುವ ಆತಂಕವಿದೆ. ಈ ಹಿನ್ನೆಲೆಯಲ್ಲಿ ಪೀಡಿತ ಗ್ರಾಮಗಳ ಜನರು ಮುಖ್ಯಮಂತ್ರಿಗಳ ಮುಂದೆ ತಮ್ಮ ಅಹವಾಲುಗಳನ್ನು ಸಲ್ಲಿಸಿ, ವರದಿಯನ್ನು ತಿರಸ್ಕರಿಸುವಂತೆ ಮನವಿ ಮಾಡಬೇಕು ಎಂದರು.
ಕನ್ನಡಪ್ರಭ ವಾರ್ತೆ ಸಕಲೇಶಪುರ
ಕಸ್ತೂರಿರಂಗನ್ ವರದಿಯ 7ನೇ ಕರಡು ಅಧಿಸೂಚನೆಯಿಂದ ಪೀಡಿತವಾಗಲಿರುವ ಮಲೆನಾಡಿನ ಜನರ ಅಹವಾಲು ಆಲಿಸುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೆ. 20ರಂದು ಸಕಲೇಶಪುರಕ್ಕೆ ಆಗಮಿಸಲಿದ್ದು, ಈ ಹಿನ್ನೆಲೆಯಲ್ಲಿ ‘ಕಸ್ತೂರಿರಂಗನ್ ವರದಿ ತೊಲಗಿಸಿ, ಮಲೆನಾಡು ಉಳಿಸಿ’ ಬೃಹತ್ ಸಮಾವೇಶವನ್ನು ಯಶಸ್ವಿಗೊಳಿಸಲು ಕಾಂಗ್ರೆಸ್ ವತಿಯಿಂದ ಪೂರ್ವಭಾವಿ ಸಭೆ ನಡೆಸಿ ಸಿದ್ಧತೆ ಕೈಗೊಳ್ಳಲಾಯಿತು.ಸಕಲೇಶಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡ ಹಾಗೂ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಮುರುಳಿ ಮೋಹನ್ ನೇತೃತ್ವದಲ್ಲಿ ಆಲೂರಿನ ಗೃಹ ಕಚೇರಿ ಹಾಗೂ ಸಕಲೇಶಪುರದ ಗುರುವೇಗೌಡ ಕಲ್ಯಾಣ ಮಂಟಪದಲ್ಲಿ ಪ್ರತ್ಯೇಕ ಸಭೆ ನಡೆಯಿತು. ಆಲೂರು ತಾಲೂಕು, ಕಟ್ಟಾಯ ಹೋಬಳಿ ಹಾಗೂ ಸಕಲೇಶಪುರ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಮುಖಂಡರು ಮತ್ತು ಬೂತ್ ಮಟ್ಟದ ಬಿಎಲ್‌ಎ–2 ಪದಾಧಿಕಾರಿಗಳೊಂದಿಗೆ ಸಮಾವೇಶದ ಸಿದ್ಧತೆ ಕುರಿತು ಚರ್ಚಿಸಲಾಯಿತು. ಸಭೆಯಲ್ಲಿ ಮಾತನಾಡಿದ ಮುರುಳಿ ಮೋಹನ್, ಕಸ್ತೂರಿರಂಗನ್ ವರದಿಯ 7ನೇ ಕರಡು ಅಧಿಸೂಚನೆಯಲ್ಲಿ ಸಕಲೇಶಪುರ ತಾಲೂಕಿನ 34 ಗ್ರಾಮಗಳು ಸೇರ್ಪಡೆಯಾಗಿರುವ ಹಿನ್ನೆಲೆಯಲ್ಲಿ ರೈತರು ಹಾಗೂ ಮಲೆನಾಡಿನ ಜನರಲ್ಲಿ ಆತಂಕ ಉಂಟಾಗಿದೆ. ವರದಿ ಜಾರಿಯಾಗಬಾರದು ಎಂಬುದು ಸ್ಥಳೀಯರ ನಿಲುವಾಗಿದೆ ಎಂದು ಹೇಳಿದರು.ರಾಜ್ಯ ಸರ್ಕಾರವೂ ಕರಡು ಅಧಿಸೂಚನೆಗೆ ವಿರೋಧ ವ್ಯಕ್ತಪಡಿಸಿದ್ದು, ಈ ಕುರಿತು ಕೇಂದ್ರ ಸರ್ಕಾರಕ್ಕೆ ಆಕ್ಷೇಪ ಸಲ್ಲಿಸುವುದಾಗಿ ತಿಳಿಸಿದೆ. ಜನರ ಸಮಸ್ಯೆ ಹಾಗೂ ಆತಂಕಗಳನ್ನು ಖುದ್ದಾಗಿ ಆಲಿಸಲು ಮುಖ್ಯಮಂತ್ರಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಪಕ್ಷಾತೀತವಾಗಿ ಸಾರ್ವಜನಿಕರು, ರೈತರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು. ಎಪಿಎಂಸಿ ಮಾಜಿ ಅಧ್ಯಕ್ಷ ಎಚ್.ಎಚ್. ಉದಯ್ ಮಾತನಾಡಿ, ವರದಿ ಜಾರಿಯಾದರೆ ಮಲೆನಾಡಿನ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ ಹಾಗೂ ಜನರ ಬದುಕಿನ ಮೇಲೆ ಪರಿಣಾಮ ಬೀರುವ ಆತಂಕವಿದೆ. ಈ ಹಿನ್ನೆಲೆಯಲ್ಲಿ ಪೀಡಿತ ಗ್ರಾಮಗಳ ಜನರು ಮುಖ್ಯಮಂತ್ರಿಗಳ ಮುಂದೆ ತಮ್ಮ ಅಹವಾಲುಗಳನ್ನು ಸಲ್ಲಿಸಿ, ವರದಿಯನ್ನು ತಿರಸ್ಕರಿಸುವಂತೆ ಮನವಿ ಮಾಡಬೇಕು ಎಂದರು.
ಸಭೆಯಲ್ಲಿ ಸಕಲೇಶಪುರ ತಾಲೂಕು ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸಯ್ಯದ್ ಮುಫೀಸ್, ಕಾಂಗ್ರೆಸ್ ಮುಖಂಡರು, ಆಲೂರು–ಕಟ್ಟಾಯ–ಸಕಲೇಶಪುರ ವ್ಯಾಪ್ತಿಯ ಗ್ರಾಮ ಪಂಚಾಯಿತಿ ಜನಪ್ರತಿನಿಧಿಗಳು ಹಾಗೂ ಬೂತ್ ಮಟ್ಟದ ಬಿಎಲ್‌ಎ–2 ಕಾರ್ಯಕರ್ತರು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.