ಕನ್ನಡಪ್ರಭ ವಾರ್ತೆ ಮುಧೋಳ
ಶನಿವಾರ ನಗರದ ಬಿಜಿಎಂಐಟಿ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಎಸ್.ಆರ್.ಕಂಠಿ ಮಹಾವಿದ್ಯಾಲಯದ ಐಕ್ಯೂಎಸಿ ಅಡಿಯಲ್ಲಿ ನೂತನವಾಗಿ ಪ್ರಾರಂಭಗೊಂಡ ಸಮಗ್ರ ಶಿಕ್ಷಕರ ಶಿಕ್ಷಣ ಯೋಜನೆ (ಐಟಿಇಪಿ) ಬಿಎ, ಬಿ.ಎಡ್ (ಮಿಡಲ್), ಬಿಎಸ್ಸಿ,ಬಿ.ಎಡ್ (ಸೆಕಂಡರಿ) ಶಿಕ್ಷಕರ ತರಬೇತಿ ವಿಭಾಗವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕೇಂದ್ರ ಸರ್ಕಾರ ದೇಶದಲ್ಲಿ ಒಂದೇ ರೀತಿಯ ಶಿಕ್ಷಣ ಪದ್ಧತಿ ಜಾರಿಗೆ ಬರಲಿ ಎಂಬ ಸದುದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರು, ಎನ್ಇಪಿ ಜಾರಿಗೆ ತಂದರು. ಆದರೆ, ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಇಲ್ಲಿಯೂ ರಾಜಕೀಯ ಮಾಡುವುದರ ಮೂಲಕ ವಿದ್ಯಾರ್ಥಿಗಳನ್ನು ಗೊಂದಲಕ್ಕೆ ಒಳಗಾಗುವಂತೆ ಮಾಡಿದ್ದಾರೆ. ರಾಜ್ಯ ಸರ್ಕಾರ ಎಸ್ಇಪಿ ರದ್ದುಪಡಿಸಿ ಎನ್ಇಪಿ ಒಪ್ಪಿಕೊಳ್ಳಬೇಕು. ಎನ್ಇಪಿ ಒಪ್ಪಿಕೊಳ್ಳುವಂತೆ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಬೇಕು. ಇದರಿಂದ ಅಸಮಾನತೆ ಹೋಗಲಾಡಿಸಲು ಸಾಧ್ಯ ಎಂದರು.ಬಾಗಲಕೋಟ ಬಿವಿವಿ ಸಂಘದ ಕಾರ್ಯಾಧ್ಯಕ್ಷ ಡಾ.ವೀರಣ್ಣ ಚರಂತಿಮಠ ಅವರು, ಬಿವಿವಿ ಸಂಘದಡಿಯಲ್ಲಿ ಪ್ರಸ್ತುತ 190 ಹೆಚ್ಚು ಶಿಕ್ಷಣ ಸಂಸ್ಥೆಗಳಿವೆ. ಈ ಸಂಸ್ಥೆಗಳಲ್ಲಿ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಜತೆಗೆ ಸಂಸ್ಕಾರ ಮತ್ತು ಸಂಸ್ಕೃತಿಯನ್ನು ನೀಡಲಾಗುತ್ತದೆ. ಡಾ.ವೀರಣ್ಣ ಚರಂತಿಮಠ ಅವರು ಶಿಸ್ತು, ಸ್ವಚ್ಛತೆ, ದಕ್ಷತೆ ಮತ್ತು ಬದ್ಧತೆಗೆ ಪ್ರಥಮ ಆದ್ಯತೆ ನೀಡುತ್ತಾರೆ. ಅವರು ತಮಗಾಗಿ ಏನನ್ನೂ ಮಾಡಿಕೊಳ್ಳಲಿಲ್ಲ. ಶಿಕ್ಷಣದ ಮೂಲಕ ಸಮಾಜಕ್ಕೆ ದೊಡ್ಡ ಆಸ್ತಿ ಮಾಡಿದ್ದಾರೆ. ಅವರು ಮಾಡಿರುವ ಕಾರ್ಯವು ಸೂರ್ಯಚಂದ್ರರು ಇರುವವರೆಗೂ ಶಾಶ್ವತವಾಗಿರುತ್ತದೆ. ಮುಧೋಳ ತಾಲೂಕಿನಲ್ಲಿ ವಿವಿಧ ಶಿಕ್ಷಣ ಸಂಸ್ಥೆಗಳನ್ನು ತೆರೆಯುವ ಮೂಲಕ ಈ ಭಾಗದ ವಿದ್ಯಾರ್ಥಿಗಳಿಗೆ ವಿದ್ಯಾದಾನ ಮಾಡುತ್ತಿದ್ದಾರೆ ಎಂದು ಬಣ್ಣಿಸಿದರು.
ಬಿವಿವಿ ಸಂಘದ ಗೌರವ ಕಾರ್ಯದರ್ಶಿ ಮಹೇಶ ಎನ್. ಅಥಣಿ ಹಾಜರಿದ್ದರು. ಬಿವಿವಿ ಸಂಘದ ಕಾಲೇಜುಗಳ ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷ ಗುರುಬಸವ ಎಸ್. ಸೂಳಿಭಾವಿ ಸ್ವಾಗತಿಸಿದರು. ಐಟಿಇಪಿ ಸಂಯೋಜಕ ಡಾ.ಎಂ.ಕೆ.ಗವಿಮಠ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಾಚಾರ್ಯ ಡಾ.ಎಂ.ಆರ್.ಜರಕುಂಟಿ ವಂದಿಸಿದರು. ಉಪನ್ಯಾಸಕರಾದ ಆರ್.ಆರ್.ಮಾಲಿಪಾಟೀಲ ಮತ್ತು ಪಿ.ಡಿ.ಕುಂಬಾರ ನಿರೂಪಿಸಿದರು. ವಿದ್ಯಾರ್ಥಿಗಳು ನಾಡಗೀತೆ, ವಂದೇ ಮಾತರಂ, ರಾಷ್ಟ್ರಗೀತೆ ಹಾಡಿದರು.
-ಗೋವಿಂದ ಕಾರಜೋಳ, ಸಂಸದ