ಮಡಿಕೇರಿ : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರಗಳ ಚುನಾವಣೆ-2024 ಕ್ಕೆ ಸಂಬಂಧಿಸಿದಂತೆ ಸ್ವೀಕೃತವಾದ ನಾಮಪತ್ರಗಳ ಪರಿಶೀಲನಾ ಕಾರ್ಯವು ಶುಕ್ರವಾರ(ಮೇ 17) ನಡೆಯಿತು.
ನೈರುತ್ಯ ಪದವೀಧರರ ಕ್ಷೇತ್ರಕ್ಕೆ11 ಮಂದಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, 11 ನಾಮಪತ್ರಗಳು ಅಂಗೀಕೃತವಾಗಿವೆ. ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ 10 ಮಂದಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, 9 ನಾಮಪತ್ರಗಳು ಅಂಗೀಕೃತವಾಗಿವೆ. 01 ನಾಮಪತ್ರ ತಿರಸ್ಕೃತಗೊಂಡಿದೆ. ಎಂ.ಸತೀಶ್ ಕಾರಂತ್, ಪಕ್ಷೇತರ ಅಭ್ಯರ್ಥಿ ಅವರು ನಮೂನೆ-26 ನೋಟರಿ ಅಫಿಡವಿಟ್ ಹಾಗೂ ವಿಧಾನಸಭಾ ಮತದಾರರ ಪಟ್ಟಿಯ ದೃಢೀಕೃತ ಪ್ರತಿಯನ್ನು ಸಲ್ಲಿಸದಿರುವುದರಿಂದ ತಿರಸ್ಕೃತಗೊಂಡಿರುತ್ತದೆ.
ಮೇ 20 ರಂದು ಮಧ್ಯಾಹ್ನ 3 ಗಂಟೆಯವರೆಗೆ ನಾಮಪತ್ರಗಳನ್ನು ಹಿಂಪಡೆಯಲು ಅವಕಾಶವಿರುತ್ತದೆ ಎಂದು ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರಾದ ಡಾ.ಜಿ.ಸಿ.ಪ್ರಕಾಶ್ ಅವರು ತಿಳಿಸಿದ್ದಾರೆ.