ಬೆಳ್ತಂಗಡಿ: ಆರೋಗ್ಯದೆಡಗಿನ ಕಾಳಜಿ ನಮ್ಮ ಮೊದಲ ಆದ್ಯತೆಯಾಗಬೇಕು. ಕ್ರೀಡಾ ಚಟುವಟಿಕೆಗಳಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ಆರೋಗ್ಯದ ಫಿಟ್ನೆಸ್ ನಮ್ಮ ಮಾನಸಿಕ ಮತ್ತು ದೈಹಿಕ ಚೈತನ್ಯವನ್ನು ಸದಾ ಹೆಚ್ಚಿಸುತ್ತದೆ ಎಂದು ಮಡಂತ್ಯಾರ್‌ನ ಸೇಕ್ರೆಡ್ ಹಾರ್ಟ್ ಕಾಲೇಜಿನ ದೈಹಿಕ ನಿರ್ದೇಶಕ ಡಾ. ಪ್ರಕಾಶ್ ಡಿಸೋಜ ಅಭಿಪ್ರಾಯಪಟ್ಟರು.
ಎಸ್‌ಡಿಎಂ ಐಟಿ ಕಾಲೇಜಿನ ಪ್ರಾಂಶುಪಾಲ ಡಾ. ಅಶೋಕ್ ಕುಮಾರ್ ಅಧ್ಯಕ್ಷತೆ ವಹಿಸಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳಿಂದ ಕ್ರೀಡಾ ಪಥಸಂಚಲನ ಮತ್ತು ಕ್ರೀಡಾ ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮ ನಡೆಯಿತು.
ವೇದಿಕೆಯಲ್ಲಿ ಎಸ್‌ಡಿಎಂ ಸ್ಪೋರ್ಟ್ಸ್ ಕ್ಲಬ್ ಕಾರ್ಯದರ್ಶಿ ರಮೇಶ್, ಎಸ್‌ಡಿಎಂ ಐಟಿ ವಿಭಾಗದ ದೈಹಿಕ ಶಿಕ್ಷಣ ಉಪನ್ಯಾಸ ಪ್ರಭಾಕರ್ ಸೇರಿದಂತೆ ಉಪನ್ಯಾಸಕರು, ವಿದ್ಯಾರ್ಥಿಗಳು ಮತ್ತು ಕ್ರೀಡಾಪಟುಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ಅನರ್ಘ್ಯ ಮತ್ತು ಅಪೇಕ್ಷ ನಿರೂಪಿಸಿದರು. ದ್ಯಾರ್ಥಿನಿ ವನಿಶ್ರೀ ವಂದಿಸಿದರು.