ಜೀವನ ಸಂಸ್ಕಾರ ನೀಡುವ ಸಂಸ್ಥೆ ಎಸ್‌ಡಿಎಂಸಿ: ರಾಜೇಂದ್ರ ಭಟ್

KannadaprabhaNewsNetwork |  
Published : Nov 25, 2026, 02:30 AM IST
ಎಸ್ ಡಿ ಎಂ | Kannada Prabha

ಸಾರಾಂಶ

ವಿದ್ಯಾರ್ಥಿಗಳಿಗೆ ಕೇವಲ ಶೈಕ್ಷಣಿಕ ಜ್ಞಾನವನ್ನಷ್ಟೇ ಅಲ್ಲದೆ, ಜೀವನ ಶಿಕ್ಷಣ ಹಾಗೂ ಉತ್ತಮ ಸಂಸ್ಕಾರವನ್ನು ನೀಡುವ ಸಂಸ್ಥೆ ಎಸ್‌ ಡಿಎಂ ಶಿಕ್ಷಣ ಸಂಸ್ಥೆ. ಬಾಹ್ಯ ಸೌಂದರ್ಯಕ್ಕಿಂತ ಆಂತರಿಕ ಸೌಂದರ್ಯಕ್ಕೆ ಆದ್ಯತೆ ನೀಡುವ ಮೂಲಕ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಪೂರಕ ವಾತಾವರಣವನ್ನು ಇಲ್ಲಿ ಕಲ್ಪಿಸಲಾಗಿದೆ ಎಂದು ಶಿಕ್ಷಕ ಹಾಗೂ ರಾಷ್ಟ್ರಮಟ್ಟದ ವ್ಯಕ್ತಿತ್ವ ವಿಕಸನ ತರಬೇತುದಾರ ರಾಜೇಂದ್ರ ಭಟ್ ಕೆ. ಹೇಳಿದರು.

ಬೆಳ್ತಂಗಡಿ : ವಿದ್ಯಾರ್ಥಿಗಳಿಗೆ ಕೇವಲ ಶೈಕ್ಷಣಿಕ ಜ್ಞಾನವನ್ನಷ್ಟೇ ಅಲ್ಲದೆ, ಜೀವನ ಶಿಕ್ಷಣ ಹಾಗೂ ಉತ್ತಮ ಸಂಸ್ಕಾರವನ್ನು ನೀಡುವ ಸಂಸ್ಥೆ ಎಸ್‌ ಡಿಎಂ ಶಿಕ್ಷಣ ಸಂಸ್ಥೆ. ಬಾಹ್ಯ ಸೌಂದರ್ಯಕ್ಕಿಂತ ಆಂತರಿಕ ಸೌಂದರ್ಯಕ್ಕೆ ಆದ್ಯತೆ ನೀಡುವ ಮೂಲಕ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಪೂರಕ ವಾತಾವರಣವನ್ನು ಇಲ್ಲಿ ಕಲ್ಪಿಸಲಾಗಿದೆ ಎಂದು ಶಿಕ್ಷಕ ಹಾಗೂ ರಾಷ್ಟ್ರಮಟ್ಟದ ವ್ಯಕ್ತಿತ್ವ ವಿಕಸನ ತರಬೇತುದಾರ ರಾಜೇಂದ್ರ ಭಟ್ ಕೆ. ಹೇಳಿದರು.

ಉಜಿರೆಯ ಇಂದ್ರಪ್ರಸ್ಥ ಸಭಾಂಗಣದಲ್ಲಿ ಮಂಗಳವಾರ ಎಸ್‌ ಡಿಎಂ ಶಿಕ್ಷಣ ಸಂಸ್ಥೆಗಳ ವತಿಯಿಂದ ಆಯೋಜಿಸಲಾದ ಧರ್ಮಾಧಿಕಾರಿ ಹಾಗೂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಡಿ. ವೀರೇಂದ್ರ ಹೆಗ್ಗಡೆ ಜನ್ಮದಿನಾಚರಣೆ ಪ್ರಯುಕ್ತ ವಿದ್ಯಾರ್ಥಿವೇತನ ವಿತರಣಾ ಸಮಾರಂಭದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.ವಿದ್ಯಾರ್ಥಿವೇತನ ವಿತರಿಸಿ, ಅಧ್ಯಕ್ಷತೆ ವಹಿಸಿದ್ದ ಎಸ್‌ ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಮಾತನಾಡಿ, ವಿದ್ಯಾರ್ಥಿವೇತನದ ಸದುಪಯೋಗ ಪಡೆದುಕೊಂಡು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಶುಭ ಹಾರೈಸಿದರು.

ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ಸಂಯೋಜಕ ಪ್ರೊ. ಎಸ್.ಎನ್. ಕಾಕತ್ಕರ್, ಎಸ್‌ ಡಿಎಂ ಪದವಿ ಪೂರ್ವ ಕಾಲೇಜಿನ ಪ್ರಿನ್ಸಿಪಾಲ್ ಪ್ರಮೋದ್ ಕುಮಾರ್ ಬಿ., ವೈಸ್ ಪ್ರಿನ್ಸಿಪಾಲ್ ಡಾ. ರಾಜೇಶ್ ಬಿ., ವಸತಿ ಪದವಿ ಪೂರ್ವ ಕಾಲೇಜಿನ ಪ್ರಿನ್ಸಿಪಾಲ್ ಸುನೀಲ್ ಪಂಡಿತ್, ವೈಸ್ ಪ್ರಿನ್ಸಿಪಾಲ್ ಮನೀಶ್ ಕುಮಾರ್ ಇದ್ದರು.

ಉಪನ್ಯಾಸಕಿಯರಾದ ವೈದೇಹಿ ಎಸ್. ಮತ್ತು ನಿಹಾರಿಕಾ ಜಿ.ಎನ್. ನಿರ್ವಹಿಸಿದರು.45 ಲಕ್ಷ ರು. ವಿದ್ಯಾರ್ಥಿವೇತನ

ಎಸ್ಸೆಸ್ಸೆಲ್ಸಿ ಹಾಗೂ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.95ಕ್ಕಿಂತ ಹೆಚ್ಚು ಅಂಕ ಗಳಿಸಿದ ಸುಮಾರು 324 ವಿದ್ಯಾರ್ಥಿಗಳಿಗೆ ಒಟ್ಟು ಸುಮಾರು 45 ಲಕ್ಷ ರೂ. ವಿದ್ಯಾರ್ಥಿವೇತನ ನೀಡಿ ಗೌರವಿಸಲಾಯಿತು.

ಹೆಗ್ಗಡೆ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ರಸಪ್ರಶ್ನೆ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಸಾಗರಿಕಾ ಅವರು ನಾನು ಕಂಡಂತೆ ಪೂಜ್ಯರು ಎಂಬ ವಿಷಯದ ಕುರಿತು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೊಬೈಲ್ ಬಳಕೆ ದುಷ್ಪರಿಣಾಮ ಎಚ್ಚರ ವಹಿಸಿ: ಮಾರುತಿ ಬಾಗಡೆ
ಕಾವೇರಿ ಸಂರಕ್ಷಣೆಗೆ ಯೋಜನೆ ರೂಪಿಸಿ: ರವಿಶಂಕರ್ ಗುರೂಜಿ