ಈದ್ಗಾ ಮೈದಾನದಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪನೆಗೆ ಎಸ್‌ಡಿಪಿಐ ವಿರೋಧ

KannadaprabhaNewsNetwork |  
Published : Sep 06, 2024, 01:10 AM IST
ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ನೀಡಿರುವ ಅನುಮತಿ ಹಿಂಪಡೆಯುವಂತೆ ಒತ್ತಾಯಿಸಿ ಗುರುವಾರ ಎಸ್‌ಡಿಪಿಐ ಕಾರ್ಯಕರ್ತರು ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿದರು. | Kannada Prabha

ಸಾರಾಂಶ

ಅಧಿಕಾರಿಗಳು ಈದ್ಗಾ ಮೈದಾನದಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪಿಸಲು ನೀಡಿರುವ ಅನುಮತಿಯನ್ನು ತಕ್ಷಣ ರದ್ದುಪಡಿಸಿ ಪಾಲಿಕೆಗೆ ಸಂಬಂಧಿಸಿದ ಬೇರೆ ಮೈದಾನದಲ್ಲಿ ಮೂರ್ತಿ ಪ್ರತಿಷ್ಠಾಪನೆಗೆ ಅನುಮನಿ ನೀಡುವಂತೆ ಒತ್ತಾಯಿಸಲಾಯಿತು.

ಹುಬ್ಬಳ್ಳಿ: ನಗರದ ಈದ್ದಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ನೀಡಿರುವ ಅನುಮತಿಯನ್ನು ಕೂಡಲೇ ಹಿಂಪಡೆಯುವಂತೆ ಒತ್ತಾಯಿಸಿ ಗುರುವಾರ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ (ಎಸ್‌ಡಿಪಿಐ) ನಗರ ಬ್ಲಾಕ್ ಕಮಿಟಿ ಅಧ್ಯಕ್ಷ ಮಲ್ಲಿಕ್ ಜಾನ್ ಕಳಸ್ ಪಾಲಿಕೆ ಆಯುಕ್ತರ ಕಚೇರಿಯ ಅಧಿಕಾರಿಗೆ ಮನವಿ ಸಲ್ಲಿಸಿದರು.

ಈದ್ಗಾ ಮೈದಾನದಲ್ಲಿ ಮುಸ್ಲಿಂ ಸಮುದಾಯದವರಿಗೆ ಪ್ರಾರ್ಥನೆ (ನಮಾಜ್) ಮಾಡಲು ಮತ್ತು ಜನವರಿ 26 ಹಾಗೂ ಆಗಸ್ಟ್ 15ರಂದು ರಾಷ್ಟ್ರಧ್ವಜಾರೋಹಣ ಮಾಡಲು ಮಾತ್ರ ಅವಕಾಶ ಇರುತ್ತದೆ. ಆದರೆ, ಇತ್ತೀಚಿನ ವರ್ಷಗಳಲ್ಲಿ ಪಾಲಿಕೆ ಅಧಿಕಾರಿಗಳು ಮೈದಾನದಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡುತ್ತಿರುವುದು ಸಮುದಾಯದ ಜನರಿಗೆ ಅಸಮಾಧಾನ ಉಂಟು ಮಾಡಿದೆ.

ವಿವಾದಾತ್ಮಕ ಮೈದಾನದಲ್ಲಿ ಪದೇ ಪದೇ ಗಣೇಶಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡುತ್ತಿರುವುದು ಎರಡೂ ಸಮುದಾಯದ ಜನರಲ್ಲಿ ವೈಷಮ್ಯ ಉಂಟಾಗಲು ದಾರಿ ಮಾಡಿಕೊಟ್ಟಂತಾಗುತ್ತದೆ. ಅಧಿಕಾರಿಗಳು ಈದ್ಗಾ ಮೈದಾನದಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪಿಸಲು ನೀಡಿರುವ ಅನುಮತಿಯನ್ನು ತಕ್ಷಣ ರದ್ದುಪಡಿಸಿ ಪಾಲಿಕೆಗೆ ಸಂಬಂಧಿಸಿದ ಬೇರೆ ಮೈದಾನದಲ್ಲಿ ಮೂರ್ತಿ ಪ್ರತಿಷ್ಠಾಪನೆಗೆ ಅನುಮನಿ ನೀಡುವಂತೆ ಒತ್ತಾಯಿಸಿದರು.

ಈ ವೇಳೆ ಎಸ್‌ಡಿಪಿಐನ ಮುಖಂಡರಾದ ಅಮನಖಾನ ಶಿವಳ್ಳಿ, ಆದಮ್‌ ಅತ್ತಾರ, ಹಮೀದ ಬಂಗಾಲಿ, ಬಶೀರ ಮುದಗಲ್ಲ, ಇಜಾಜ್‌ಶೇಖ ಸೇರಿದಂತೆ ಹಲವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು