ಕಾಂಗ್ರೆಸ್ ವಿರುದ್ದ ಎಸ್‌ಡಿಪಿಐ ಪ್ರತಿಭಟನೆ

KannadaprabhaNewsNetwork | Published : Oct 3, 2023 6:00 PM

ಸಾರಾಂಶ

ಹೊಸ ಮದ್ಯದಂಗಡಿಗಳನ್ನು ತೆರೆಯಲು ಸರ್ಕಾರ ಅವಕಾಶ ಮಾಡಿಕೊಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮದ್ಯ ಭಾಗ್ಯ ಕೊಡುತ್ತಿದ್ದಾರೆಂದು ಆರೋಪಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಅಫ್ ಇಂಡಿಯಾ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು
ಕಾಂಗ್ರೆಸ್ ಸರ್ಕಾರ ಗಾಂಧಿ ಜಯಂತಿ ಆಚರಿಸದಂತೆ ಅಬ್ರಾರ್ ಅಹಮದ್ ಆಗ್ರಹ ಕನ್ನಡಪ್ರಭ ವಾರ್ತೆ ಚಾಮರಾಜನಗರ ಹೊಸ ಮದ್ಯದಂಗಡಿಗಳನ್ನು ತೆರೆಯಲು ಸರ್ಕಾರ ಅವಕಾಶ ಮಾಡಿಕೊಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮದ್ಯ ಭಾಗ್ಯ ಕೊಡುತ್ತಿದ್ದಾರೆಂದು ಆರೋಪಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಅಫ್ ಇಂಡಿಯಾ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಭುವನೇಶ್ವರಿ ವೃತ್ತದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಅಬ್ರಾರ್ ಅಹಮದ್ ಅವರ ನೇತೃತ್ವದಲ್ಲಿ ಭಿತ್ತಿ ಪತ್ರ ಹಿಡಿದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಮದ್ಯಪಾನ ವಿರೋಧಿಯಾಗಿದ್ದ ಮಹಾತ್ಮ ಗಾಂಧಿ ಅವರ ಜಯಂತಿ ಆಚರಿಸಲು ಕಾಂಗ್ರೆಸ್ ಜನಪ್ರತಿನಿಧಿಗಳಿಗೆ ಯಾವುದೇ ನೈತಿಕತೆ ಇಲ್ಲ, ಸಿದ್ದರಾಮಯ್ಯ ಗಾಂಧಿ ಅವರಿಗೆ ಮಾಲಾರ್ಪಣೆ ಮಾಡಬಾರದು, ಕಾಂಗ್ರೆಸ್ ಕಚೇರಿಗಳಲ್ಲಿ ಗಾಂಧಿ ಜಯಂತಿ ಆಚರಿಸಿ ಮಹಾತ್ಮನಿಗೆ ಅಗೌರವ ಸಲ್ಲಿಸಬಾರದು ಎಂದು ಒತ್ತಾಯಿಸಿದರು. ಅಬ್ರಾರ್ ಅಹಮದ್ ಮಾತನಾಡಿ, ರಾಜ್ಯ ಕಾಂಗ್ರೆಸ್ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಹೆಚ್ಚುವರಿ ಮದ್ಗದಂಗಡಿಗಳನ್ನು ತೆರೆಯಲು ಮುಂದಾಗಿರುವುದು ಖಂಡನೀಯವಾಗಿದೆ. ಇಂತಹ ಮದ್ಯಪಾನಕ್ಕೆ ಉತ್ತೇಜನ ನೀಡುತ್ತಿರುವ ಸಿದ್ದರಾಮಯ್ಯ ಸರ್ಕಾರಕ್ಕೆ ಗಾಂಧಿ ಜಯಂತಿ ಆಚರಿಸುವ ಯಾವುದೇ ನೈತಿಕತೆ ಇಲ್ಲ ಎಂದರು. ಗೃಹಲಕ್ಷ್ಮೀ ಮೂಲಕ ಮಹಿಳೆಯರಿಗೆ 2 ಸಾವಿರ ರು..‌ ಕೊಡುತ್ತೇವೆಂದು ಹೇಳುತ್ತಾರೆ. ಮತ್ತೊಂದೆಡೆ ಹೆಚ್ಚುವರಿಯಾಗಿ ಸಾವಿರ ಮದ್ಯದಂಗಡಿ ತೆರೆಯಲು ಮುಂದಾಗಿದ್ದಾರೆ, ಮದ್ಯಪಾನವನ್ನು ಸಂಪೂರ್ಣವಾಗಿ ಕರ್ನಾಟಕದಲ್ಲಿ ನಿಷೇಧಿಸಲು ಮೂಲಕ ಗಾಂಧಿಯವರ ಅವರ ಕನಸನ್ನು ನನಸು ಮಾಡುಬೇಕು ಎಂದರು. ನಗರಸಭಾ ಸದಸ್ಯ ಖಲೀಲ್ ಉಲ್ಲಾ, ಎಸ್ ಡಿ ಪಿಐ ಉಪಾಧ್ಯಕ್ಷ ಸಿ.ಎಸ್.ಸೈಯದ್ ಆರೀಪ್, ಜಿಲ್ಲಾ ಖಜಾಂಚಿ ನಯಾಜ್ ಉಲ್ಲಾ, ಜಿಲ್ಲಾ ಸಮಿತಿ ಸದಸ್ಯ ನಸ್ರುಲ್ಲಾ, ಮುಖಂಡರಾದ ಬಂಗಾರಸ್ವಾಮಿ, ರಾಮಸಮುದ್ರ ಸುರೇಶ್, ನಿಜಧ್ವನಿಗೋವಿಂದರಾಜು ಭಾಗವಹಿಸಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಮದ್ಯಭಾಗ್ಯ ಕೊಡುತ್ತಿದ್ದಾರೆಂದು ಆರೋಪಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಅಫ್ ಇಂಡಿಯಾ ವತಿಯಿಂದ ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

Share this article