ಚನ್ನಪಟ್ಟಣ: ಕಾಶ್ಮಿರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ ದಾಳಿಯನ್ನು ಖಂಡಿಸಿ ನಗರದ ಶೇರ್ವಾ ವೃತ್ತದಲ್ಲಿ ಎಸ್‌ಡಿಪಿಐನಿಂದ ಪ್ರತಿಭಟನೆ ನಡೆಸಲಾಯಿತು.
ಈ ವೇಳೆ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಮುಸ್ಲಿಂ ಧರ್ಮಗುರು ಹಫೀಜ್ ಏಜಾಜ್, ಕಾಶ್ಮಿರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ ದಾಳಿ ಖಂಡನೀಯ. ಉಗ್ರರು ನಡೆಸಿದ ಈ ಪೈಶಾಚಿಕ ಕೃತ್ಯದಿಂದ ಸಾಕಷ್ಟು ಕುಟುಂಬಗಳು ಅನಾಥವಾಗಿವೆ ಎಂದು ಬೇಸರ ವ್ಯಕ್ತಪಡಿಸಿದರು.
ಫಹಲ್ಗಾಮ್‌ನಲ್ಲಿ ಹೇಯ ಕೃತ್ಯ ನಡೆಸಿದ ಉಗ್ರರನ್ನು ಹುಡುಕಿ ಸದೆಬಡಿಯಬೇಕು. ಕಾಶ್ಮೀರದಲ್ಲಿ ಉಗ್ರಗಾಮಿಗಳ ಚಟುವಟಿಕೆಗಳನ್ನು ಸಂಪೂರ್ಣವಾಗಿ ಹತ್ತಿಕ್ಕಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು. ದೇಶದಲ್ಲಿ ಸಾಮರಸ್ಯ ಕೆಡಡುವ ಇಂತಹ ಸಮಾಜದ್ರೋಹಿ ಕೃತ್ಯಗಳಿಗೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದರು.ಈ ವೇಳೆ ಎಸ್‌ಡಿಪಿಐ ತಾಲೂಕು ಅಧ್ಯಕ್ಷ ಮೊಹಮದ್ ಫಾಜೀಲ್, ಕಾರ್ಯದರ್ಶಿ ರೋಷನ್ ಜಮೀರ್, ಮುಕ್ರಂ, ಸಿಕಂದರ್, ಸೇರಿದಂತೆ ಹಲವರು ಹಾಜರಿದ್ದರು.
ಪೋಟೊ೨೬ಸಿಪಿಟಿ೧:ಚನ್ನಪಟ್ಟಣ ಶೇರ್ವಾ ವೃತ್ತದ ಬಳಿ ಕಾಶ್ಮೀರದ ಫಹಲ್ಗಾಮ್‌ನಲ್ಲಿ ಉಗ್ರರ ದಾಳಿ ಖಂಡಿಸಿ ಎಸ್‌ಡಿಪಿಐ ಕಾರ್ಯಕರ್ತರು ಮೇಣದ ಬತ್ತಿ ಹಿಡಿದು ಪ್ರತಿಭಟನೆ ನಡೆಸಿದರು.