- ದೆಹಲಿ ಹೋರಾಟನಿರತರ ಮೇಲೆ ದೌರ್ಜನ್ಯಕ್ಕೆ ಅಫ್ಸರ್ ಕೊಡ್ಲಿಪೇಟೆ ತೀವ್ರ ಆಕ್ರೋಶ - - -
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಗರಣವನ್ನು ಸಮಗ್ರ ತನಿಖೆಗೆ ಒಪ್ಪಿಸುವಂತೆ ಹಾಗೂ ದೆಹಲಿಯಲ್ಲಿ ತಮ್ಮ ಹಕ್ಕುಗಳಿಗಾಗಿ ಹೋರಾಟನಿರತ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ ಖಂಡಿಸಿ ಎಸ್‌ಡಿಪಿಐ, ಯಂಗ್ ಡೆಮಾಕ್ರೆಟಿಕ್ಸ್ ಸಂಘಟನೆ, ದಲಿತ ಸಂಘರ್ಷ ಸಮಿತಿ ಇತರೆ ಸಂಘಟನೆಗಳು ಪ್ರತಿಭಟನೆ ನಡೆಸಿದರು.
ನಗರದ ಶ್ರೀ ಜಯದೇವ ವೃತ್ತದಲ್ಲಿ ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ, ಜಿಲ್ಲಾಧ್ಯಕ್ಷ ಎ.ಆರ್.ತಾಹೀರ್, ಯಂಗ್ ಡೆಮಾಕ್ರೆಟಿಕ್ಸ್ ಸಂಘಟನೆಯ ಸಲೀಂ ಮಲ್ಲಿಕ್, ಡಿಎಸ್‌ಎಸ್‌ನ ಮಲ್ಲಿಕಾರ್ಜುನ ಇತರರ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಲಾಯಿತು.ಅಫ್ಸರ್ ಕೊಡ್ಲಿಪೇಟೆ ಮಾತನಾಡಿ, ನೀಟ್ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಹಗರಣ ಸಮಗ್ರ ತನಿಖೆಗೊಳಪಡಿಸಬೇಕು. ಪ್ರಕರಣದಲ್ಲಿರುವ ಎಲ್ಲ ಆರೋಪಿಗಳನ್ನು ಪತ್ತೆ ಮಾಡಿ, ಅತ್ಯಂತ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮೇಲೆ 22 ವಿದ್ಯಾರ್ಥಿಗಳ ಸಾವಿಗೆ ಕಾರಣರಾದ ಹಿನ್ನೆಲೆ ಕೊಲೆ ಆರೋಪದಡಿ ಕೇಸ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ನೀಟ್ ಹಗರಣದಿಂದಾಗಿ ಆತ್ಮಹತ್ಯೆ ಮಾಡಿಕೊಂಡ ಮಕ್ಕಳ ಕುಟುಂಬಕ್ಕೆ ನ್ಯಾಯ ಮತ್ತು ಸೂಕ್ತ ಪರಿಹಾರ ಒದಗಿಸಬೇಕು. ದೌರ್ಜನ್ಯದ ಬಗ್ಗೆ ಸ್ವತಂತ್ರವಾಗಿ ನ್ಯಾಯಾಂಗ ತನಿಖೆಗೆ ಆದೇಶಿಸಬೇಕು. ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಪ್ರತಿಭಟನಾಕಾರರ ಮೇಲೆ ದಾಖಲಿಸಿದ ಸುಳ್ಳು ಕೇಸ್‌ಗಳನ್ನು ಹಿಂಪಡೆಯಬೇಕು. ಈ ಬಗ್ಗೆ ಉದಾಸೀನ ಮಾಡಿದರೆ ತೀವ್ರ ಸ್ವರೂಪದ ಹೋರಾಟ ಇಡೀ ದೇಶಾದ್ಯಂತ ನಡೆಯಲಿದೆ ಎಂದು ಅವರು ಎಚ್ಚರಿಸಿದರು.
- - -
- ಅಫ್ಸರ್ ಕೊಡ್ಲಿಪೇಟೆ, ಎಸ್‌ಡಿಪಿಐ ಮುಖಂಡ.
-25ಕೆಡಿವಿಜಿ3, 4: ದಾವಣಗೆರೆಯಲ್ಲಿ ಶನಿವಾರ ಎಸ್‌ಡಿಪಿಐ, ಯಂಗ್ ಡೆಮಾಕ್ರೆಟ್ಸ್ ಸಂಘಟನೆ, ಡಿಎಸ್ಸೆಸ್ ಇತರೆ ಸಂಘಟನೆಗಳು ದೆಹಲಿಯ ವಿದ್ಯಾರ್ಥಿ ಹೋರಾಟ ಬೆಂಬಲಿಸಿ, ಪ್ರತಿಭಟನೆ ನಡೆಸಿದರು.