ಕನ್ನಡಪ್ರಭ ವಾರ್ತೆ ಅರಸೀಕೆರೆ
ತಾಲೂಕು ಮಟ್ಟದ ಸಭೆಗಳ ಭಾಗವಾಗಿ ನಗರದ ಶ್ರೀರಾಮ ಮಂದಿರದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಸಮ್ಮೇಳನದ ಅಂಗವಾಗಿ ಒಂದು ಕೋಟಿ ಗಾಯಿತ್ರಿ ಜಪಯಜ್ಞ ಮತ್ತು ಹತ್ತು ಲಕ್ಷ ಗಾಯಿತ್ರಿ ಹೋಮ ನಡೆಸುವ ಸಂಕಲ್ಪ ಮಾಡಲಾಗಿದೆ. ಈ ಸಮ್ಮೇಳನವನ್ನು ಡಿಸೆಂಬರ್ 27 ಮತ್ತು 28ರಂದು ಮಲೆನಾಡು ಎಂಜಿನಿಯರಿಂಗ್ ಕಾಲೇಜಿನ ಸಿಲ್ವರ್ ಜ್ಯೂಬಿಲಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಹೇಳಿದರು.
27ರಂದು ನಡೆಯುವ ಹೋಮದ ಪೂರ್ಣಾಹುತಿಗೆ ಚಿಂತಾಮಣಿ ಮಠದ ಶ್ರೀ ಶಿವಾನಂದ ಭಾರತಿ ಸ್ವಾಮೀಜಿ ಉಪಸ್ಥಿತರಿರಲಿದ್ದಾರೆ. ಎರಡು ದಿನಗಳ ಕಾರ್ಯಕ್ರಮವನ್ನು ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಎಸ್. ಗುರುನಾಥ್ ಅವರ ನೇತೃತ್ವದಲ್ಲಿ ನಡೆಸಲಾಗುತ್ತದೆ. 28ರಂದು ನಡೆಯುವ ಸಮಾರೋಪ ಸಮಾರಂಭಕ್ಕೆ ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ದೇವಾಲಯದ ಧರ್ಮದರ್ಶಿ ಶ್ರೀ ಭೀಮೇಶ್ವರ ಜೋಶಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.ಸಮ್ಮೇಳನದ ಉದ್ಘಾಟನಾ ಕಾರ್ಯಕ್ರಮಕ್ಕೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆಯ ನಿಕಟಪೂರ್ವ ಅಧ್ಯಕ್ಷ ಅಶೋಕ ಹಾರನಹಳ್ಳಿ ಆಗಮಿಸಲಿದ್ದಾರೆ. ಸಮಾರೋಪ ಸಮಾರಂಭಕ್ಕೆ ಜಿಲ್ಲೆಯ ಸಂಸದರು ಹಾಗೂ ಎಲ್ಲ ಶಾಸಕರು ಆಹ್ವಾನಿತರಾಗಿದ್ದಾರೆ. ಈ ಸಮ್ಮೇಳನವು ಸಮಾಜದ ಸಂಘಟನೆಗೆ ಬಲ ನೀಡುವಂಥದ್ದು ಎಂದು ಹೇಳಿದರು.
ನವೆಂಬರ್ 3ರಿಂದ ಒಂದು ಕೋಟಿ ಗಾಯಿತ್ರಿ ಜಪಯಜ್ಞ ಪ್ರಾರಂಭವಾಗಲಿದ್ದು, ಯುವಕರನ್ನು ಹೆಚ್ಚಾಗಿ ತೊಡಗಿಸಲು ಮನವಿ ಮಾಡಲಾಗಿದೆ. ಮನೆಗಳಲ್ಲಿ ನಿತ್ಯ ಗಾಯಿತ್ರಿ ಜಪ ಮಾಡುವವರೂ ಹೆಚ್ಚುವರಿ ಜಪ ಮಾಡುವ ಮೂಲಕ ಯಜ್ಞ ಯಶಸ್ವಿಗೊಳಿಸಲು ಸಹಕರಿಸಬೇಕೆಂದು ಕೋರಿದರು. ಸಮ್ಮೇಳನಕ್ಕೆ 3 ಸಾವಿರಕ್ಕೂ ಹೆಚ್ಚು ಸಮಾಜ ಬಾಂಧವರು ಆಗಮಿಸುವ ನಿರೀಕ್ಷೆಯಿದೆ.
ಬ್ರಾಹ್ಮಣ ಮಹಾಸಭಾ ಜಿಲ್ಲಾ ಪ್ರತಿನಿಧಿ ವೆಂಕಟೇಶ್, ಅರಸೀಕೆರೆ ತಾಲೂಕು ಬ್ರಾಹ್ಮಣ ಸಂಘದ ಅಧ್ಯಕ್ಷ ರವಿಕುಮಾರ್, ಜಿಲ್ಲಾ ಬ್ರಾಹ್ಮಣ ಸಭೆಯ ಉಪಾಧ್ಯಕ್ಷ ಗುರುಮೂರ್ತಿ, ಕಾರ್ಯದರ್ಶಿ ಸುರೇಶ್, ನಿರ್ದೇಶಕ ಪ್ರಸಾದ್, ಅರಸೀಕೆರೆ ತಾಲೂಕು ಬ್ರಾಹ್ಮಣ ಸಂಘದ ಗೌರವಾಧ್ಯಕ್ಷ ಕೆ. ರಮೇಶ್, ಉಪಾಧ್ಯಕ್ಷ ಕಲ್ಯಾಡಿ ಹಿರಿಯಣ್ಣಯ್ಯ, ನಿರ್ದೇಶಕರು, ಗಾಯತ್ರಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕೆ. ಹರೀಶ್, ವ್ಯವಸ್ಥಾಪಕ ಮಂಜುನಾಥ್, ಶ್ರೀ ಚಂದ್ರಶೇಖರ ಭಾರತಿ ವಿದ್ಯಾಸಂಸ್ಥೆಯ ನಿರ್ದೇಶಕ ಗೋಪಾಲ್, ಚಿಕ್ಕಗಿರಿ ರಂಗನಾಥಸ್ವಾಮಿ ದೇವಾಲಯ ಸಮಿತಿ ಕಾರ್ಯದರ್ಶಿ ಅಶೋಕ್, ನಿರ್ದೇಶಕ ಟಿ. ಆರ್. ನಾಗರಾಜ್, ಪಾಕತಜ್ಞರ ಸಂಘದ ಅಧ್ಯಕ್ಷ ರಾಘವೇಂದ್ರ ಹಾಗೂ ಇತರರು ಉಪಸ್ಥಿತರಿದ್ದರು.