ಮಂಡ್ಯ ವಿವಿ ಮಹಿಳೆಯರ ತಂಡಕ್ಕೆ ದ್ವಿತೀಯ ಸ್ಥಾನ

KannadaprabhaNewsNetwork |  
Published : Jan 05, 2025, 01:32 AM IST
೪ಕೆಎಂಎನ್‌ಡಿ-೫ಕೇರಳದ ಕ್ಯಾಲಿಕಟ್‌ನಲ್ಲಿ ನಡೆದ ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯದ ಮಹಿಳೆಯರ ಖೋ-ಖೋ ಪಂದ್ಯಾವಳಿಯಲ್ಲಿ ಮಂಡ್ಯ ವಿಶ್ವವಿದ್ಯಾಲಯದ ಮಹಿಳೆಯರ ತಂಡ ದ್ವಿತೀಯ ಸ್ಥಾನ ಗಳಿಸಿರುವುದು. | Kannada Prabha

ಸಾರಾಂಶ

ಕೇರಳದ ಕ್ಯಾಲಿಕಟ್‌ನಲ್ಲಿ ನಡೆದ ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯ ಖೋ-ಖೋ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ ಪಡೆದ ತಂಡದ ಆಟಗಾರ್ತಿ ಕೆ.ಆರ್.ತೇಜಸ್ವಿನಿ ಅವರು ಉತ್ತಮ ಆಕ್ರಮಣಗಾರ್ತಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಪ್ರಸಕ್ತ ಸಾಲಿನ ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯದ ಮಹಿಳೆಯರ ಖೋ-ಖೋ ಪಂದ್ಯಾವಳಿಯಲ್ಲಿ ಮಂಡ್ಯ ವಿಶ್ವವಿದ್ಯಾಲಯದ ಮಹಿಳೆಯರ ತಂಡ ದ್ವಿತೀಯ ಸ್ಥಾನ ಗಳಿಸಿ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಪಂದ್ಯಾವಳಿಗೆ ಅರ್ಹತೆ ಪಡೆದುಕೊಂಡಿದೆ.

ಕೇರಳದ ಕ್ಯಾಲಿಕಟ್‌ನಲ್ಲಿ ನಡೆದ ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯ ಖೋ-ಖೋ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ ಪಡೆದ ತಂಡದ ಆಟಗಾರ್ತಿ ಕೆ.ಆರ್.ತೇಜಸ್ವಿನಿ ಅವರು ಉತ್ತಮ ಆಕ್ರಮಣಗಾರ್ತಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಕ್ರೀಡಾಪಟುಗಳಾದ ತೇಜಸ್ವಿನಿ ಕೆ.ಆರ್, ಚೈತ್ರ, ಅರ್ಪಿತ ಆರ್, ಮೇಘನ ಎಸ್, ಮೋನಿಕಾ ಎಲ್, ವಿನುತ ಎಸ್, ಅಕ್ಷತ ಕೆ, ವರಲಕ್ಷ್ಮಿ ಕೆ.ಪಿ, ಚಂದನ ಕೆ.ಆರ್, ಮಾನ್ಯಗೌಡ ಜಿ.ಎಸ್, ಪುನೀತ ಕೆ.ಎಸ್, ಅಂಕಿತ ಜಿ.ಟಿ ಅವರು ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದು, ತಂಡ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಲು ಕಾರಣರಾಗಿದ್ದಾರೆ.

ವಿವಿ ಕುಲಪತಿ ಪ್ರೊ.ಕೆ.ಶಿವಚಿತ್ತಪ್ಪ, ಕುಲಸಚಿವರಾದ ಬಿ.ಎನ್.ವೀಣಾ, ಯೋಗಾನರಸಿಂಹಚಾರಿ, ದೈಹಿಕ ಶಿಕ್ಷಣ ಮತ್ತು ಕ್ರೆಡಾ ವಿಭಾಗದ ನಿರ್ದೇಶಕ ವಿ.ಶ್ರೆನಿವಾಸ್, ವ್ಯವಸ್ಥಾಪಕ ಎನ್.ಶಿವಕುಮಾರ್ ಅವರು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿರುವ ತಂಡದ ಆಟಗಾರರನ್ನು ಪ್ರಶಂಸಿಸಿದ್ದಾರೆ.

ಸಮುದಾಯದ ಸಹಕಾರದೊಂದಿಗೆ ಗುಣಾತ್ಮಕ ಶಿಕ್ಷಣ ನೀಡಲು ಬದ್ಧ: ಶಿವಕುಮಾರ್

ಕನ್ನಡಪ್ರಭ ವಾರ್ತೆ ದೇವಲಾಪುರ

ಸಮುದಾಯದ ಸಹಕಾರದೊಂದಿಗೆ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಉತ್ತೇಜನ ನೀಡಲು ಶಿಕ್ಷಕರು ಬದ್ಧವಾಗಿದ್ದಾರೆ ಎಂದು ಮುಖ್ಯ ಶಿಕ್ಷಕ ಶಿವಕುಮಾರ್ ತಿಳಿಸಿದರು.

ನಾಗಮಂಗಲ ತಾಲೂಕಿನ ದೇವಲಾಪುರ ಹೋಬಳಿಯ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ನಡೆದ ಶಾಲಾ ವಾರ್ಷಿಕೋತ್ಸವ, ಪೋಷಕರ ಪೂರ್ವಭಾವಿ ಸಭೆ ಹಾಗೂ ಪೋಷಕರಿಗೆ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.

ಗ್ರಾಮೀಣ ಪ್ರದೇಶಗಳಲ್ಲಿ ಮಕ್ಕಳ ಶೈಕ್ಷಣಿಕ ಗುಣಮಟ್ಟ ಉತ್ತೇಜಿಸಲು ಶಿಕ್ಷಕರೊಂದಿಗೆ ಪೋಷಕರು ವಿಚಾರ ವಿನಿಮಯ ಮಾಡಿಕೊಂಡು ಹೊಸ ಬದಲಾವಣೆಗೆ ಸಹಕಾರ ನೀಡಬೇಕು ಕೋರಿದರು.

ಸಮಾರಂಭದಲ್ಲಿ ಆಡಳಿತ ಮಂಡಳಿ ಅಧ್ಯಕ್ಷ ಡಿ.ಕೆ ಸುರೇಶ್ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಜವರೇಗೌಡ, ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ವಾಸು, ಪತ್ರಕರ್ತ ದೇ.ರಾ.ಜಗದೀಶ್, ಸಮಿತಿ ಮಹಿಳಾ ಸದಸ್ಯರು ಹಾಗೂ ಕೆಪಿಎಸ್ಸಿ ಶಾಲೆ ಶಿಕ್ಷಕರು ಹಾಜರಿದ್ದರು. ಶಿಕ್ಷಕ ತೋಂಟರಾಧ್ಯ ಸ್ವಾಗತಿಸಿ, ಶಿಕ್ಷಕರಾದ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ಮಂಜೇಗೌಡ ವಂದಿಸಿದರು.

PREV

Recommended Stories

ನೀಲಿ ಮೊಟ್ಟೆ ಇಟ್ಟ ಚನ್ನಗಿರಿಯ ನಾಟಿ ಕೋಳಿ: ಸ್ಥಳೀಯರಲ್ಲಿ ತೀವ್ರ ಕುತೂಹಲ
ಸಿಗಂದೂರಿನಲ್ಲಿ ವಾಟರ್ ಏರೋಡ್ರೋಮ್: ವಿಮಾನ ಟೇಕಾಫ್‌, ಲ್ಯಾಂಡಿಂಗ್‌! ಪ್ರವಾಸೋದ್ಯಮಕ್ಕೆ ಹೊಸ ಹೆಜ್ಜೆ?