ಜಿಲ್ಲೆಯಲ್ಲಿ ದ್ವಿತೀಯ ಪಿಯು ಪರೀಕ್ಷೆ ಆರಂಭ

KannadaprabhaNewsNetwork |  
Published : Mar 02, 2025, 01:17 AM IST
ಪಿಯುಸಿ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ ಡಿಸಿ, ಎಸ್ಪಿ | Kannada Prabha

ಸಾರಾಂಶ

ಜಿಲ್ಲೆಯಲ್ಲಿ ಶನಿವಾರದಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, 35 ಪರೀಕ್ಷಾ ಕೇಂದ್ರಗಳಲ್ಲೂ ಪರೀಕ್ಷೆ ಸುಸೂತ್ರವಾಗಿ ನಡೆಯಿತು.

ಕನ್ನಡಪ್ರಭ ವಾರ್ತೆ, ತುಮಕೂರುಜಿಲ್ಲೆಯಲ್ಲಿ ಶನಿವಾರದಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, 35 ಪರೀಕ್ಷಾ ಕೇಂದ್ರಗಳಲ್ಲೂ ಪರೀಕ್ಷೆ ಸುಸೂತ್ರವಾಗಿ ನಡೆಯಿತು. ಜಿಲ್ಲೆಯ ತುಮಕೂರು ಹಾಗೂ ಮಧುಗಿರಿ ಈ ಎರಡು ವಿಭಾಗಗಳಲ್ಲೂ 25768 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ಯಾವುದೇ ರೀತಿಯ ಅಡಚಣೆಗಳಿಲ್ಲದೆ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಸುಲಲಿತವಾಗಿ ನಡೆಯಿತು. ಜಿಲ್ಲೆಯ ತುಮಕೂರು ತಾಲೂಕಿನಲ್ಲಿ 13, ಕೊರಟಗೆರೆ ತಾಲೂಕಿನಲ್ಲಿ 1, ಗುಬ್ಬಿ, ಚಿಕ್ಕನಾಯಕನಹಳ್ಳಿ, ತುರುವೇಕೆರೆ, ಮಧುಗಿರಿ ತಾಲೂಕಿನಲ್ಲಿ ತಲಾ 2, ಕುಣಿಗಲ್, ತಿಪಟೂರು, ಪಾವಗಡ ತಾಲೂಕಿನಲ್ಲಿ ತಲಾ 3, ಸಿರಾ ತಾಲೂಕಿನಲ್ಲಿ 4 ಸೇರಿ ಒಟ್ಟು 35 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದು, ಎಲ್ಲ ಪರೀಕ್ಷಾ ಕೇಂದ್ರಗಳಲ್ಲೂ ನಕಲು, ಅಕ್ರಮಗಳನ್ನು ತಡೆಯುವ ಉದ್ದೇಶದಿಂದ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ.ನಗರದಲ್ಲಿರುವ ಪರೀಕ್ಷಾ ಕೇಂದ್ರಗಳಾದ ಸರ್ಕಾರಿ ಜೂನಿಯರ್ ಕಾಲೇಜು, ಎಂಪ್ರೆಸ್ ಕಾಲೇಜು, ಸಿದ್ಧಗಂಗಾ ಮಹಿಳಾ ಪದವಿ ಪೂರ್ವ ಕಾಲೇಜು, ಕಾಳಿದಾಸ ಪ.ಪೂ. ಕಾಲೇಜು ಸೇರಿದಂತೆ ಜಿಲ್ಲೆಯಾದ್ಯಂತ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಪೋಷಕರೊಂದಿಗೆ ಬೆಳಿಗ್ಗೆ 8 ಗಂಟೆಗೆ ಆಗಮಿಸಿ ತಮ್ಮ ನೋಂದಣಿ ಸಂಖ್ಯೆ ಇರುವ ಕೊಠಡಿಗಳ ನಂಬರ್‌ಗಾಗಿ ಮುಗಿಬಿದ್ದಿದ್ದ ದೃಶ್ಯಗಳು ಕಂಡು ಬಂದವು. ಡಿಸಿ-ಎಸ್ಪಿ ಪರಿಶೀಲನೆ.....ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಗಳಾದ ಸರ್ಕಾರಿ ಜೂನಿಯರ್ ಕಾಲೇಜು ಸೇರಿದಂತೆ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಶುಭಕಲ್ಯಾಣ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಪರೀಕ್ಷಾ ಕೊಠಡಿಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ಕೊಠಡಿಯಲ್ಲಿ ಬೆಳಕಿನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆಯನ್ನು ಪರಿಶೀಲಿಸಿದರು.ಜಿಲ್ಲೆಯಲ್ಲಿ ಪ್ರಸಕ್ತ ವರ್ಷ 24,378 ಹೊಸ ವಿದ್ಯಾರ್ಥಿಗಳು, 318 ಪುನರಾವರ್ತಿತ, 1067 ಖಾಸಗಿ ಹಾಗೂ 5 ಫಲಿತಾಂಶ ಸುಧಾರಣೆ ವಿದ್ಯಾರ್ಥಿಗಳು ಸೇರಿ ಒಟ್ಟು 25768 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, ಈ ಪೈಕಿ 9088 ವಿಜ್ಞಾನ, 10217 ವಾಣಿಜ್ಯ ಹಾಗೂ 5977 ಕಲಾ ವಿಭಾಗದ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಡಾ. ಬಾಲಗುರುಮೂರ್ತಿ ತಿಳಿಸಿದ್ದಾರೆ.ಪರೀಕ್ಷಾ ವೇಳಾಪಟ್ಟಿ ಮಾ. 3 ರಂದು ಗಣಿತ, ಶಿಕ್ಷಣ ಶಾಸ್ತ್ರ, ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ, ಮಾ.4 ರಂದು ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್; ಮಾ. 5 ರಂದು ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ: ಮಾ. 7 ರಂದು ಇತಿಹಾಸ, ಭೌತಶಾಸ್ತ್ರ, ಮಾ. 10 ರಂದು ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹವಿಜ್ಞಾನ, ಮಾ. 12 ರಂದು ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲಗಣಿತ, ಮಾ. 13 ರಂದು ಅರ್ಥಶಾಸ್ತ್ರ, ಮಾ. 15 ರಂದು ಇಂಗ್ಲೀಷ್, ಮಾ. 17 ರಂದು ಭೂಗೋಳ ಶಾಸ್ತ್ರ, ಮಾ. 18 ರಂದು ಜೀವಶಾಸ್ತ್ರ, ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ ಹಾಗೂ ಗಣಕ ವಿಜ್ಞಾನ, ಮಾ. 19 ರಂದು ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್‌ನೆಸ್, ಮಾ.20 ರಂದು ಹಿಂದಿ ಪರೀಕ್ಷೆ ನಡೆಯಲಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ