ದ್ವಿತೀಯ ಪಿಯು ಪರೀಕ್ಷೆ: ಮೊದಲ ಪರೀಕ್ಷೆ ಸುಗಮ

KannadaprabhaNewsNetwork |  
Published : Mar 01, 2026, 01:45 AM IST
ಜಿಲ್ಲಾ ಕೇಂದ್ರ ಚಾಮರಾಜನಗರ ಪರೀಕ್ಷಾ ಕೆಂದ್ರದಲ್ಲಿ ವಿದ್ಯಾರ್ಥಿಗಳು | Kannada Prabha

ಸಾರಾಂಶ

ದ್ವಿತೀಯ ಪಿಯುಸಿ ಪರೀಕ್ಷೆಗಳು ಶನಿವಾರದಿಂದ ಜಿಲ್ಲೆಯಲ್ಲಿ ಪ್ರಾರಂಭವಾಗಿದ್ದು, ಮೊದಲ ದಿನ ಕನ್ನಡ ಭಾಷೆಯ ಪರೀಕ್ಷೆ ಜಿಲ್ಲೆಯ ಒಟ್ಟು ಒಟ್ಟು ೧೭ ಪರೀಕ್ಷಾ ಕೇಂದ್ರಗಳಲ್ಲಿ ಸುಗಮವಾಗಿ ನಡೆಯಿತು.

- ಕನ್ನಡ ಪರೀಕ್ಷೆಗೆ ೬೧೭೩ ಹಾಜರು, ೧೨೦ ಗೈರು

---

ಕನ್ನಡಪ್ರಭ ವಾರ್ತೆ ಚಾಮರಾಜನಗರ

ದ್ವಿತೀಯ ಪಿಯುಸಿ ಪರೀಕ್ಷೆಗಳು ಶನಿವಾರದಿಂದ ಜಿಲ್ಲೆಯಲ್ಲಿ ಪ್ರಾರಂಭವಾಗಿದ್ದು, ಮೊದಲ ದಿನ ಕನ್ನಡ ಭಾಷೆಯ ಪರೀಕ್ಷೆ ಜಿಲ್ಲೆಯ ಒಟ್ಟು ಒಟ್ಟು ೧೭ ಪರೀಕ್ಷಾ ಕೇಂದ್ರಗಳಲ್ಲಿ ಸುಗಮವಾಗಿ ನಡೆಯಿತು.

ಮೊದಲ ದಿನ ಕನ್ನಡ ವಿಷಯ ಪರೀಕ್ಷೆ ನಡೆಯಿತು. ಒಟ್ಟು ೬೨೯೩ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, ಕನ್ನಡ ವಿಷಯ ಪರೀಕ್ಷೆಗೆ ೬೧೭೩ ವಿದ್ಯಾರ್ಥಿಗಳು ಹಾಜರಾಗಿದ್ದು ೧೨೦ ವಿದ್ಯಾರ್ಥಿಗಳು ಗೈರಾಗಿದ್ದಾರೆ ಎಂದು ಪಿಯು ಡಿಡಿ ಪುಟ್ಟಗೌರಮ್ಮ ಮಾಹಿತಿ ನೀಡಿದರು.

ಪರೀಕ್ಷೆ ಬರೆಯಲು ಆಗಮಿಸಿದ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಲ್ಲಿ ಅಂತಿಮ ಹಂತದ ಕಸರತ್ತಿನಲ್ಲಿ ತೊಡಗಿದ್ದ ದೃಶ್ಯ ಕಂಡುಬಂದಿತು.

ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಶ್ರೀರೂಪಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜು, ಪಿಯು ಡಿಡಿ ಪುಟ್ಟಗೌರಮ್ಮ ಅವರು ಭೇಟಿ ನೀಡಿ ಪರಿಶೀಲಿಸಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಬಳಿ ಮಾಹಿತಿ ಪಡೆದುಕೊಂಡರು.

---

೨೮ಸಿಎಚ್‌ಎನ್೧

ಮೊದಲ ದಿನದ ಪರೀಕ್ಷೆಯಂದು ವಿದ್ಯಾರ್ಥಿಗಳು ತಮ್ಮ ಕೊಠಡಿ ಸಂಖ್ಯೆಯನ್ನು ಸೂಚನಾ ಫಲಕದಲ್ಲಿ ಹುಡುಕುತ್ತಿರುವುದು ಕಂಡುಬಂದಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚನ್ನಗಿರಿ ತಾಲೂಕಿನ 5 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ
ಜಿಲ್ಲೆಯಲ್ಲಿ ಮೊದಲ ದಿನ ಪಿಯುಸಿ ಪರೀಕ್ಷೆ ಸುಗಮ