- ಅಧಿಕಾರಿಗಳು ಪಾರದರ್ಶಕ ಪರೀಕ್ಷೆ ನಡೆಸಲು ಅಗತ್ಯ ಕ್ರಮ ಜರುಗಿಸಬೇಕು: ಸೂಚನೆ
ಕನ್ನಡಪ್ರಭ ವಾರ್ತೆ ದಾವಣಗೆರೆ ಜಿಲ್ಲೆಯಲ್ಲಿ ಮುಂಬರುವ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆ-2 ಅನ್ನು ಅತ್ಯಂತ ಸುಗಮವಾಗಿ ಮತ್ತು ಪಾರದರ್ಶಕವಾಗಿ ನಡೆಸಲು ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಅವರು ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆ-2ರ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಏ.30ರಿಂದ ಮೇ 13ರವರೆಗೆ ಜಿಲ್ಲೆಯ ವಿವಿಧ ದಿನಾಂಕಗಳಂದು ಪರೀಕ್ಷೆ ನಡೆಯಲಿದೆ. ಪರೀಕ್ಷೆ ನಡೆಯುವ ದಿನದಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ 144ನೇ ಸೆಕ್ಷನ್ ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪರೀಕ್ಷೆ ನಡೆಯುವ ದಿನದಂದು ಆಯಾ ವಿಷಯಗಳ ಉಪನ್ಯಾಸಕರನ್ನು ಮೇಲ್ವಿಚಾರಕರನ್ನಾಗಿ ನೇಮಿಸಬಾರದು ಎಂಬ ನಿಯಮ ಕಟ್ಟುನಿಟ್ಟಾಗಿ ಪಾಲಿಸುವಂತೆ ತಿಳಿಸಿದರು. ದೋಷರಹಿತ ಪರೀಕ್ಷೆಗಾಗಿ ಜಿಲ್ಲಾಡಳಿತ ಪೂರ್ಣ ಪ್ರಮಾಣದಲ್ಲಿ ಸಜ್ಜಾಗಿದ್ದು, ಎಲ್ಲ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಸೂಚನೆ ನೀಡಿದರು.ಒಟ್ಟು 2995 ವಿದ್ಯಾರ್ಥಿಗಳು:
7 ಪರೀಕ್ಷಾ ಕೇಂದ್ರ, ಎಲ್ಲೆಲ್ಲಿ, ಎಷ್ಟೆಷ್ಟು?:
ಪರೀಕ್ಷಾ ಕೇಂದ್ರದ ಒಳಗೆ ಮೊಬೈಲ್ ಫೋನ್ ಹಾಗೂ ಎಲೆಕ್ಟ್ರಾನಿಕ್ ಉಪಕರಣಗಳನ್ನು ನಿಷೇಧಿಸಲಾಗಿದೆ. ಪ್ರತಿ ಕೇಂದ್ರಕ್ಕೂ ಒಬ್ಬೊಬ್ಬ ವೀಕ್ಷಕರನ್ನು ನೇಮಿಸಲಾಗಿದ್ದು, ಸಿಸಿಟಿವಿ ಕಣ್ಗಾವಲು ಇರಲಿದೆ. ಅನಗತ್ಯವಾಗಿ ಕೇಂದ್ರದ ಆವರಣಕ್ಕೆ ಬರುವವರ ಮೇಲೆ ನಿಗಾ ಇಡಲು ಮತ್ತು ಪರೀಕ್ಷೆ ಮುಗಿಯುವವರೆಗೆ ಮುಖ್ಯ ದ್ವಾರಗಳನ್ನು ಬಂದ್ ಮಾಡುವಂತೆ ಸೂಚಿಸಲಾಗಿದೆ ಎಂದು ಸಭೆಗೆ ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಜಿಪಂ ಯೋಜನಾ ನಿರ್ದೇಶಕಿ ರೇಷ್ಮಾ ಕೌಸರ್, ವಿವಿಧ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರು ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
(ಬಾಕ್ಸ್)
ಏ.30 ಕನ್ನಡ ಅರೇಬಿಕ್, ಮೇ 2ರಂದು ಐಚ್ಚಿಕ ಕನ್ನಡ, ತರ್ಕಶಾಸ್ತ್ರ, ಲೆಕ್ಕಶಾಸ್ತ್ರ ಮತ್ತು ರಸಾಯನ ಶಾಸ್ತ್ರ. ಮೇ 4ರಂದು ಇಂಗ್ಲಿಷ್, ಮೇ 5ರಂದು ವ್ಯವಹಾರ ಅಧ್ಯಯನ, ಭೌತಶಾಸ್ತ್ರ ಮತ್ತು ಶಿಕ್ಷಣಶಾಸ್ತ್ರ. ಮೇ 6ರಂದು ಅರ್ಥಶಾಸ್ತ್ರ ಮತ್ತು ಜೀವಶಾಸ್ತ್ರ, ಮೇ 7ರಂದು ಇತಿಹಾಸ, ಗಣಿತ ಮತ್ತು ಗೃಹವಿಜ್ಞಾನ ಮೇ 8ರಂದು ರಾಜ್ಯಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ ಮತ್ತು ಗಣಕ ಶಾಸ್ತ್ರ. ಮೇ 9ರಂದು ಭೂಗೋಳಶಾಸ್ತ್ರ, ಮನಃಶಾಸ್ತ್ರ, ಭೂಗರ್ಭ ಶಾಸ್ತ್ರ ಮತ್ತು ಮೂಲಗಣಿತ, ಮೇ 11ರಂದು ಸಮಾಜ ಶಾಸ್ತ್ರ ಮತ್ತು ಸಂಖ್ಯಾಶಾಸ್ತ್ರ ಮೇ 12ರಂದು ಹಿಂದಿ, ಮೇ 13ರಂದು ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ ಮತ್ತು ಫ್ರೆಂಚ್ ಪರೀಕ್ಷೆಗಳು ನಡೆಯಲಿವೆ. ಈ ಎಲ್ಲ ಪರೀಕ್ಷೆಗಳೂ ಬೆಳಗ್ಗೆ 10 ಗಂಟೆಗೆ ಪ್ರಾರಂಭವಾಗಿ ಮಧ್ಯಾಹ್ನ 1.00 ಗಂಟೆಗೆ ನಡೆಯಲಿವೆ.
- - -
-28ಕೆಡಿವಿಜಿ31:ದಾವಣಗೆರೆಯಲ್ಲಿ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಅಧ್ಯಕ್ಷತೆಯಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2ರ ಪೂರ್ವಭಾವಿ ಸಭೆ ನಡೆಯಿತು.