ಏ.೩೦ರಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ: ಜಿಲ್ಲಾಧಿಕಾರಿ ಡಾ.ಕುಮಾರ

KannadaprabhaNewsNetwork |  
Published : Apr 28, 2026, 01:30 AM IST
೨೭ಕೆಎಂಎನ್‌ಡಿ-೩ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪಿಯುಸಿ ಪೂರಕ ಪರೀಕ್ಷೆಯನ್ನು ಸುವ್ಯವಸ್ಥಿತವಾಗಿ ನಡೆಸುವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿದರು. | Kannada Prabha

ಸಾರಾಂಶ

ಮಂಡ್ಯ ಜಿಲ್ಲೆಯಲ್ಲಿ ೨೮೭೭ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಬರೆಯಲಿದ್ದಾರೆ. ಬೆಳಗ್ಗೆ ೧೦ ರಿಂದ ೧ ಗಂಟೆಯವರೆಗೆ ಹಾಗೂ ೧೩ರಿಂದ ಬೆಳಗ್ಗೆ ೧೦ ರಿಂದ ೧ ಗಂಟೆ ಮತ್ತು ಮಧ್ಯಾಹ್ನ ೨ ಗಂಟೆಯಿಂದ ೪.೧೫ರವರೆಗೆ ನಡೆಯಲಿದ್ದು, ಯಾವುದೇ ಲೋಪವುಂಟಾಗದಂತೆ ನಿಗಾ ವಹಿಸಬೇಕು.

ಕನ್ನಡಪ್ರಭ ವಾರ್ತೆ ಮಂಡ್ಯ

ಏ.೩೦ರಿಂದ ಮೇ ೧೩ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಗೆ ಯಾವುದೇ ಲೋಪ ಉಂಟಾಗದಂತೆ ಪಾರದರ್ಶಕವಾಗಿ ನಡೆಯಬೇಕು ಜಿಲ್ಲಾಧಿಕಾರಿ ಡಾ. ಕುಮಾರ ಸಲಹೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪಿಯುಸಿ ಪೂರಕ ಪರೀಕ್ಷೆಯನ್ನು ಸುವ್ಯವಸ್ಥಿತವಾಗಿ ನಡೆಸುವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯಲ್ಲಿ ೨೮೭೭ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಬರೆಯಲಿದ್ದಾರೆ. ಬೆಳಗ್ಗೆ ೧೦ ರಿಂದ ೧ ಗಂಟೆಯವರೆಗೆ ಹಾಗೂ ೧೩ರಿಂದ ಬೆಳಗ್ಗೆ ೧೦ ರಿಂದ ೧ ಗಂಟೆ ಮತ್ತು ಮಧ್ಯಾಹ್ನ ೨ ಗಂಟೆಯಿಂದ ೪.೧೫ರವರೆಗೆ ನಡೆಯಲಿದ್ದು, ಯಾವುದೇ ಲೋಪವುಂಟಾಗದಂತೆ ನಿಗಾ ವಹಿಸುವಂತೆ ಸೂಚಿಸಿದರು.

ಜಿಲ್ಲೆಯ ೭ ಪರೀಕ್ಷಾ ಕೇಂದ್ರಗಳಲ್ಲಿ ಪೂರಕ ಪರೀಕ್ಷೆ ನಡೆಯಲಿದೆ. ಪರೀಕ್ಷೆ ಸಮಯದಲ್ಲಿ ಪರೀಕ್ಷಾ ಕೇಂದ್ರ ೨೦೦ ಮೀಟರ್ ವ್ಯಾಪ್ತಿಯಲ್ಲಿ ಜೆರಾಕ್ಸ್ ಹಾಗೂ ಸೈಬರ್ ಕೇಂದ್ರಗಳನ್ನು ಮುಚ್ಚಲಾಗುವುದು. ಜಿಲ್ಲಾ ಖಜಾನೆಯಿಂದ ಪ್ರಶ್ನೆ ಪತ್ರಿಕೆಯನ್ನು ಸಾಗಿಸುವಾಗ ಬೀಗಿ ಭದ್ರತೆ ಒದಗಿಸಲಾಗುವುದು ಎಂದರು.

ಪ್ರಶ್ನೆಪತ್ರಿಕೆ ಸಾಗುವ ೭ ಮಾರ್ಗದಲ್ಲಿ ರೂಟ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಪ್ರಶ್ನೆಪತ್ರಿಕೆ ಸಾಗಿಸುವ ವಾಹನಗಳಿಗೆ ಕಡ್ಡಾಯವಾಗಿ ಜಿಪಿಎಸ್ ಅಳವಡಿಸಿರಬೇಕು. ಜಿಲ್ಲಾಧಿಕಾರಿ ಕಚೇರಿಯಲ್ಲಿ ವೆಬ್ ಕಾಸ್ಟಿಂಗ್ ನಡೆಯಲಿದ್ದು ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದರು.

ಸಿಸಿಟಿವಿ ಕಣ್ಗಾವಲು:

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಸಿಸಿಟಿವಿ ಕಣ್ಗಾವಲಿನಲ್ಲಿ ನಡೆಯಲಿದ್ದು ಕ್ಯಾಮೆರಾಗಳನ್ನು ಪರೀಕ್ಷಾ ಕೊಠಡಿಗಳಿಗೆ ಈಗಾಗಲೇ ಅಳವಡಿಸಲಾಗಿದೆ. ೭ ಪರೀಕ್ಷಾ ಕೇಂದ್ರ ಕೊಠಡಿಯಲ್ಲಿ ಸಿಸಿಟಿವಿ ಕಡ್ಡಾಯವಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಪರೀಕ್ಷೆ ಸಮಯದಲ್ಲಿ ಸಿಸಿಟಿವಿಗಳಲ್ಲಿ ತಾಂತ್ರಿಕ ದೋಷ ಉಂಟಾಗುತ್ತದೆ ಕ್ರಮ ವಹಿಸಬೇಕು. ಪರೀಕ್ಷೆ ನಡೆಯುವ ಸಮಯದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಬೇಕು ಎಂದು ಸೂಚಿಸಿದರು.

ಪರೀಕ್ಷಾ ಕೇಂದ್ರಗಳಲ್ಲಿ ಮೂಲ ಸೌಕರ್ಯ ಕಲ್ಪಿಸಿ:

ಕುಡಿಯುವ ನೀರು, ಸೂಕ್ತ ಆಸನ ವ್ಯವಸ್ಥೆ ಹಾಗೂ ಪರೀಕ್ಷಾ ಕೊಠಡಿಯಲ್ಲಿ ಗಡಿಯಾರದ ಜೊತೆಗೆ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು. ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಆರೋಗ್ಯ ಸಿಬ್ಬಂದಿ, ಪೊಲೀಸ್ ಬಂದೋಬಸ್ತ್ ಹಾಗೂ ನಿರಂತರ ವಿದ್ಯುತ್ ಸರಬರಾಜು ಮಾಡಬೇಕು. ಗ್ರಾಮೀಣ ಭಾಗದಿಂದ ಮಕ್ಕಳು ಬರುವುದರಿಂದ ಬಸ್‌ಗಳು ಪರೀಕ್ಷಾ ದಿನದಂದು ವಿಳಂಬವಾಗದಂತೆ ಕ್ರಮ ವಹಿಸುವಂತೆ ಹೇಳಿದರು.

ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಮೊಬೈಲ್ ಹಾಗೂ ಸ್ಮಾರ್ಟ್ ಡಿವೈಸ್‌ಗಳನ್ನು ಕೊಠಡಿಗೆ ತರಲು ಬೀಡಬೇಡಿ. ಪರೀಕ್ಷೆ ಮೇಲ್ವಿಚಾರಣೆಗೆ ನೇಮಿಸಿರುವ ಶಿಕ್ಷಕರು ಮಾರ್ಗ ಸೂಚಿಗೆ ಬದ್ಧರಾಗಿ ಕರ್ತವ್ಯ ಪಾಲಿಸಬೇಕು. ಪರೀಕ್ಷೆ ನಡೆಯುವ ಸಂದರ್ಭದಲ್ಲಿ ಚಿತ್ರೀಕರಣ ಮಾಡಲು ಯಾರಿಗೂ ಅನುಮತಿ ನೀಡಬಾರದು ಎಂದರು.

ಸಭೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ಚಲುವಯ್ಯ, ಆರ್‌ಸಿಹೆಚ್ ಅಧಿಕಾರಿ ಕೆ.ಪಿ.ಅಶ್ವಥ್, ನಗರ ಸಭೆಯ ಪರಿಸರ ಅಭಿಯಂತರರು ರುದ್ರೇಗೌಡ, ಜಿಲ್ಲಾ ಖಜಾನೆಯ ಉಪ ನಿರ್ದೇಶಕಿ ವರಲಕ್ಷ್ಮೀ, ಕುಟುಂಬ ಕಲ್ಯಾಣಾಧಿಕಾರಿ ಬೆಟ್ಟಸ್ವಾಮಿ, ವಿವಿಧ ಕಾಲೇಜಿನ ಪ್ರಾಂಶುಪಾಲರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಗುವಂತೆ ಭಕ್ತರನ್ನು ಕಾಣುತ್ತಿದ್ದ ಸಿದ್ದಗಂಗಾ ಶ್ರೀಗಳು: ಜಗದೀಶ್‌ ಶೆಟ್ಟರ್
ಒಂಟಿ ಸಲಗ ಸೆರೆಹಿಡಿದ ಅರಣ್ಯ ಸಿಬ್ಬಂದಿ