ಕನ್ನಡಪ್ರಭ ವಾರ್ತೆ ತುಮಕೂರು
ಜಿಲ್ಲೆಯ 35 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆಯನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.ಪರೀಕ್ಷಾ ಕೇಂದ್ರಗಳ ವಿವರ: ದ್ವಿತೀಯ ಪಿಯುಸಿ ಪರೀಕ್ಷೆಯು ಮಾರ್ಚ್ 1 ರಿಂದ 22ರವರೆಗೆ ನಡೆಯಲಿದ್ದು, ಯಾವುದೇ ಪರೀಕ್ಷಾ ಅಕ್ರಮ ನಡೆಯದಂತೆ ಎಲ್ಲ 35 ಪರೀಕ್ಷಾ ಕೇಂದ್ರಗಳಿಗೆ ಮುಖ್ಯ ಅಧೀಕ್ಷಕರನ್ನು ನೇಮಿಸಲಾಗಿದ್ದು, ಪರೀಕ್ಷಾ ಕೇಂದ್ರಗಳ ವಿವರ ಇಂತಿದೆ.
ತುಮಕೂರಿನ ಬಿಹೆಚ್ ರಸ್ತೆ ಸಿದ್ಧಗಂಗಾ ಬಾಲಕರ ಪದವಿ ಪೂರ್ವ ಕಾಲೇಜು, ಸರ್ಕಾರಿ ಪದವಿ ಪೂರ್ವ ಕಾಲೇಜು, ಸಿದ್ಧಗಂಗಾ ಬಾಲಕಿಯರ ಪದವಿ ಪೂರ್ವ ಕಾಲೇಜು; ಪಿಬಿ ರಸ್ತೆಯ ಶ್ರೀ ಸಿದ್ಧಗಂಗಾ ಪದವಿ ಪೂರ್ವ ಕಾಲೇಜು; ಸರ್ಕಾರಿ ಎಂಪ್ರೆಸ್ ಬಾಲಕಿಯರ ಪದವಿ ಪೂರ್ವ ಕಾಲೇಜು; ಹೊರಪೇಟೆಯ ಸರ್ವೋದಯ ಪದವಿ ಪೂರ್ವ ಕಾಲೇಜು ಹಾಗೂ ಬಾಪೂಜಿ ಪದವಿ ಪೂರ್ವ ಕಾಲೇಜು; ಎಸ್‌ಐಟಿ ಬಡಾವಣೆಯ ವಿದ್ಯಾವಾಹಿನಿ ಪದವಿ ಪೂರ್ವ ಕಾಲೇಜು ಹಾಗೂ ವಾಸವಿ ಪದವಿ ಪೂರ್ವ ಕಾಲೇಜು; ಕಾಳಿದಾಸ ಪದವಿ ಪೂರ್ವ ಕಾಲೇಜು; ಸೋಮೇಶ್ವರ ಬಡಾವಣೆಯ ಇಂದಿರಾ ಪದವಿ ಪೂರ್ವ ಕಾಲೇಜು; ಬೆಳ್ಳಾವಿಯ ಸರ್ಕಾರಿ ಪದವಿ ಪೂರ್ವ ಕಾಲೇಜು, ನಾಗವಲ್ಲಿಯ ಸರ್ಕಾರಿ ಪದವಿ ಪೂರ್ವ ಕಾಲೇಜು.ತಿಪಟೂರಿನ ಕಲ್ಪತರು ಪದವಿ ಪೂರ್ವ ಕಾಲೇಜು, ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಹಾಗೂ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು. ತುರುವೇಕೆರೆಯ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ವಿವೇಕಾನಂದ ಪದವಿ ಪೂರ್ವ ಕಾಲೇಜು. ಶಿರಾ ತಾಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜು, ಶ್ರೀ ಕೆ. ಮಲ್ಲಣ್ಣ ಸ್ಮಾರಕ ರಂಗನಾಥ ಪದವಿ ಪೂರ್ವ ಕಾಲೇಜು, ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಹಾಗೂ ಪಟ್ಟನಾಯಕನಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜು. ಮಧುಗಿರಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಶ್ರೀ ರಾಘವೆಂದ್ರ ಪದವಿ ಪೂರ್ವ ಕಾಲೇಜು; ಕೊರಟಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು. ಪಾವಗಡ ಸರ್ಕಾರಿ ಪದವಿ ಪೂರ್ವ ಕಾಲೇಜು, ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜು, ಹಾಗೂ ಶಾಂತಿ ಎಸ್.ಎಸ್.ಕೆ. ಪದವಿ ಪೂರ್ವ ಕಾಲೇಜು.
ಕುಣಿಗಲ್ ತಾಲೂಕಿನ ಸರ್ಕಾರಿ ಎಂ.ಜಿ. ಪದವಿ ಪೂರ್ವ ಕಾಲೇಜು, ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಹಾಗೂ ಎಡೆಯೂರಿನ ಶ್ರೀ ಸಿದ್ದಲಿಂಗೇಶ್ವರ ಪದವಿ ಪೂರ್ವ ಕಾಲೇಜು. ಗುಬ್ಬಿ ತಾಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ನಿಟ್ಟೂರಿನ ಶ್ರೀ ವಿನಾಯಕ ಪದವಿ ಪೂರ್ವ ಕಾಲೇಜು. ಚಿಕ್ಕನಾಯಕನಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜು, ಹುಳಿಯಾರು ಹೋಬಳಿ ಕೆಂಕೆರೆಯ ಸರ್ಕಾರಿ ಪದವಿ ಪೂರ್ವ ಕಾಲೇಜು.