ಕಾವ್ರಾಡಿ ಪಂಚಾಯಿತಿ ಕಾರ್ಯದರ್ಶಿ ಬಂಧಿಸಿದ ಲೋಕಾಯುಕ್ತ

KannadaprabhaNewsNetwork | Updated : Nov 11 2023, 01:20 AM IST

ಸಾರಾಂಶ

ಲೋಕಾಯುಕ್ತ ಬಲೆಗೆ ಪಂಚಾಯಿತಿ ಕಾರ್ಯದರ್ಶಿ

ಕನ್ನಡಪ್ರಭ ವಾರ್ತೆ ಕುಂದಾಪುರ

ಬಸವ ವಸತಿ ಯೋಜನೆಗೆ ಸಂಬಂಧಿಸಿ ಲಂಚ ಸ್ವೀಕರಿಸುತ್ತಿದ್ದ ಕಾವ್ರಾಡಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿಯನ್ನು ಉಡುಪಿ ಲೋಕಾಯುಕ್ತ ಪೊಲೀಸರು ಶುಕ್ರವಾರ ವಶಕ್ಕೆ ಪಡೆದಿದ್ದಾರೆ.

ಕಾವ್ರಾಡಿ ಗ್ರಾ.ಪಂ. ಕಾರ್ಯದರ್ಶಿ ಗೋಪಾಲ ದೇವಾಡಿಗ ಲೋಕಾಯುಕ್ತ ಪೊಲೀಸರ ವಶದಲ್ಲಿರುವ ಅಧಿಕಾರಿ.

ಕಾವ್ರಾಡಿಯ ಜಾವೇದ್ ಎಂಬವರು ಬಸವ ವಸತಿ ಯೋಜನೆಯಡಿ ಪಂಚಾಯಿತಿಗೆ ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಗೋಪಾಲ ದೇವಾಡಿಗ 15 ಸಾವಿರ ರು. ಲಂಚ ನೀಡುವಂತೆ ಬೇಡಿಕೆ ಮುಂದಿಟ್ಟಿದ್ದರು. ಲಂಚ ನೀಡಲು ಇಷ್ಟ ಇಲ್ಲದ ಜಾವೇದ್, ಈ ಬಗ್ಗೆ ಉಡುಪಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಪ್ರಕರಣ ದಾಖಲಿಸಿಕೊಂಡ ಲೋಕಾಯುಕ್ತ ಪೊಲೀಸರು, ಜಾವೇದ್ ಅವರಿಂದ 15 ಸಾವಿರ ರು. ಲಂಚ ಸ್ವೀಕರಿಸುತ್ತಿದ್ದ ಕಾರ್ಯದರ್ಶಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಲೋಕಾಯುಕ್ತ ಎಸ್ಪಿ ಸೈಮನ್ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಕೆ.ಸಿ. ಪ್ರಕಾಶ್ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಮಂಜುನಾಥ್ ಹಾಗೂ ರಫೀಕ್ ಮತ್ತು ಸಿಬ್ಬಂದಿ ನಾಗೇಶ್ ಉಡುಪ, ನಾಗರಾಜ್, ರಾಘವೇಂದ್ರ, ಮಲ್ಲಿಕಾ, ರೋಹಿತ್, ಪ್ರಸನ್ನ ದೇವಾಡಿಗ, ಅಬ್ದುಲ್ ಜಲಾಲ್, ರವೀಂದ್ರ ಗಾಣಿಗ ರಮೇಶ್, ಸೂರಜ್, ಸುಧೀರ್, ಸತೀಶ್ ಆಚಾರ್ಯ ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

Share this article