ಪಾರ್ಶ್ವವಾಯುಗೆ ತಕ್ಷಣ ಚಿಕಿತ್ಸೆ ಪಡೆಯಿರಿ: ಬಾಲಪ್ಪ ನಾಯಕ

KannadaprabhaNewsNetwork |  
Published : Oct 30, 2026, 01:30 AM IST
ಫೋಟೋ:29ಕೆಪಿಎಸ್ಎನ್ಡಿ2:  | Kannada Prabha

ಸಾರಾಂಶ

ವಿಶ್ವ ಪಾರ್ಶ್ವವಾಯು ತಡೆಗಟ್ಟುವ ದಿನಾಚರಣೆಯ ಅಂಗವಾಗಿ ಸಾರ್ವಜನಿಕರಲ್ಲಿ ಪಾರ್ಶ್ವವಾಯು ಕುರಿತು ಅರಿವು ಮೂಡಿಸುವ ಜಾಗೃತಿ ಕಾರ್ಯಕ್ರಮ ಗುರುವಾರ ಸನ್ರೈಸ್ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳ ಸಹಯೋಗದಲ್ಲಿ ತಾಲೂಕಿನ ಜವಳಗೇರಾ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ನಡೆಯಿತು.

ಸಿಂಧನೂರು:ವಿಶ್ವ ಪಾರ್ಶ್ವವಾಯು ತಡೆಗಟ್ಟುವ ದಿನಾಚರಣೆಯ ಅಂಗವಾಗಿ ಸಾರ್ವಜನಿಕರಲ್ಲಿ ಪಾರ್ಶ್ವವಾಯು ಕುರಿತು ಅರಿವು ಮೂಡಿಸುವ ಜಾಗೃತಿ ಕಾರ್ಯಕ್ರಮ ಗುರುವಾರ ಸನ್ರೈಸ್ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳ ಸಹಯೋಗದಲ್ಲಿ ತಾಲೂಕಿನ ಜವಳಗೇರಾ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ನಡೆಯಿತು.

ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಾಲಪ್ಪ ನಾಯಕ ಅವರು, ಮುಖ ಒಂದು ಕಡೆ ವಾಲುವುದು, ಒಂದು ಕೈ ಅಥವಾ ಕಾಲಿನಲ್ಲಿ ಹಠಾತ್ ದೌರ್ಬಲ್ಯ ಕಾಣಿಸಿಕೊಳ್ಳುವುದು ಹಾಗೂ ಮಾತನಾಡಲು ತೊಂದರೆಯಾಗುವುದು ಪಾರ್ಶ್ವವಾಯುವಿನ ಪ್ರಮುಖ ಲಕ್ಷಣಗಳಾಗಿವೆ. ಇಂತಹ ಲಕ್ಷಣಗಳು ಕಂಡುಬಂದಲ್ಲಿ ವಿಳಂಬ ಮಾಡದೆ ತಕ್ಷಣ ಆಸ್ಪತ್ರೆಗೆ ಕರೆದೊಯ್ಯಬೇಕು. ಸಮಯಕ್ಕೆ ಸರಿಯಾಗಿ ಚಿಕಿತ್ಸೆ ದೊರೆತರೆ ಜೀವ ಉಳಿಸುವುದರ ಜೊತೆಗೆ ಅಂಗವೈಕಲ್ಯದ ಅಪಾಯವನ್ನೂ ಕಡಿಮೆ ಮಾಡಬಹುದು ಎಂದರು.

ನಂತರ ನರ್ಸಿಂಗ್ ವಿದ್ಯಾರ್ಥಿ ಮಲ್ಲಿಕಾರ್ಜುನ ಮಾತನಾಡಿ, ಅಧಿಕ ರಕ್ತದೊತ್ತಡ, ಮಧುಮೇಹ, ಧೂಮಪಾನ, ದೈಹಿಕ ಚಟುವಟಿಕೆಯ ಕೊರತೆ ಹಾಗೂ ಅನಾರೋಗ್ಯಕರ ಜೀವನಶೈಲಿ ಪಾರ್ಶ್ವವಾಯುವಿನ ಅಪಾಯವನ್ನು ಹೆಚ್ಚಿಸಬಹುದು. ಆದ್ದರಿಂದ ನಿಯಮಿತ ಆರೋಗ್ಯ ತಪಾಸಣೆ, ಸಮತೋಲಿತ ಆಹಾರ, ಪ್ರತಿದಿನ ದೈಹಿಕ ಚಟುವಟಿಕೆ ಮತ್ತು ವೈದ್ಯರ ಸಲಹೆಯಂತೆ ಚಿಕಿತ್ಸೆ ಪಡೆಯುವ ಮೂಲಕ ಪಾರ್ಶ್ವವಾಯುವಿನ ಅಪಾಯವನ್ನು ಕಡಿಮೆ ಮಾಡಿಕೊಳ್ಳಬಹುದು ಎಂದು ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು.

ಸನ್ರೈಸ್ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಪಾರ್ಶ್ವವಾಯುವಿನ ಲಕ್ಷಣಗಳು, ತಡೆಗಟ್ಟುವ ಕ್ರಮಗಳು ಮತ್ತು ತುರ್ತು ಚಿಕಿತ್ಸೆಯ ಮಹತ್ವದ ಕುರಿತು ಜನರಲ್ಲಿ ಜಾಗೃತಿ ಮೂಡಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೇಪ್‌ ಮಾಡಿದ್ದಕ್ಕಾಗಿ ಅಪಹರಣ ಮೂಲಕ ಪ್ರತೀಕಾರ
ಉತ್ತರ ಪಾಲಿಕೆಯಲ್ಲಿ 18 ಜಂಕ್ಷನ್‌ ಗುರುತು