- ಪ್ರವಾದಿ ಮುಹಮ್ಮದ್ (ಸ) ಜನ್ಮದಿನ ಅಂಗವಾಗಿ ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕ ಆಯೋಜನೆ - - - ಕನ್ನಡಪ್ರಭ ವಾರ್ತೆ ಹರಿಹರ
ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಾದ್ಯಂತ ಜಮಾಅತೆ ಇಸ್ಲಾಮೀ ಹಿಂದ್ ವತಿಯಿಂದ ಸೀರತ್ ಅಭಿಮಾನ ನಡೆಯಲಿದೆ. ಅದರಂತೆ ನಗರದಲ್ಲಿ ''''ಕ್ರಾಂತಿಯ ಜ್ಯೋತಿ: ಪ್ರವಾದಿ ಮುಹಮ್ಮದ್(ಸ)'''' ಶೀರ್ಷಿಕೆಯಡಿ ಅಭಿಯಾನ ನಡೆಸಲಾಗುವುದು. ಪ್ರವಾದಿ ಮುಹಮ್ಮದ್ ಅವರು ಜಗತ್ತಿನಲ್ಲಿ ತಂದ ಸಮಗ್ರ ಕ್ರಾಂತಿಯು ಸತ್ಯ, ನ್ಯಾಯ, ಕರುಣೆ, ಮಾನವ ಸಮಾನತೆ, ಮಾನವ ಘನತೆ ಹಾಗೂ ಮಾನವ ಕುಲದ ಏಕತೆ ಮೇಲೆ ಸ್ಥಾಪಿತವಾಗಿದೆ ಎಂದರು.
ಅಭಿಯಾನದ ಪ್ರಯುಕ್ತ, ಖ್ಯಾತ ಸಾಹಿತಿ ಹಾಗೂ ಗ್ರಂಥಕರ್ತ ಯೋಗೇಶ್ ಮಾಸ್ಟರ್ ಅವರು ಬರೆದ ''''''''ಮಾನವ ಮನಸ್ಸಿನ ಕೃಷಿಕ–ಮನದೊಡೆಯ ಪ್ರವಾದಿ ಮುಹಮ್ಮದ್(ಸ)'''''''' ಹಾಗೂ ವಾರ್ತಾ ಭಾರತಿ ದಿನಪತ್ರಿಕೆ ಪ್ರಧಾನ ಸಂಪಾದಕ ಅಬ್ದುಸಲಾಂ ಪುತ್ತಿಗೆ ಅವರು ಬರೆದ ''''''''ಸಮಗ್ರ ಕ್ರಾಂತಿಯ ಜ್ಯೋತಿ ಬೆಳಗಿದ ಪೈಗಂಬರ್ ಮುಹಮ್ಮದ್ (ಸ)'''''''' ಎಂಬ ಎರಡು ಕೃತಿಗಳನ್ನು ಬಿಡುಗಡೆ ಮಾಡಲಾಗುವುದು. ಅಭಿಯಾನದ ಪ್ರಯುಕ್ತ ರಾಜ್ಯಾದ್ಯಂತ ವೈಯಕ್ತಿಕ ಭೇಟಿ, ''''''''ಕ್ರಾಂತಿಯ ಜ್ಯೋತಿ ಪ್ರವಾದಿ ಮುಹಮ್ಮದ್(ಸ)'''''''' ಎಂಬ ಶೀರ್ಷಿಕೆಯಡಿ ವಿಚಾರಗೋಷ್ಠಿಗಳು, ಸಾರ್ವಜನಿಕ ಸಮಾವೇಶಗಳು, ಸಂವಾದ ಕಾರ್ಯಕ್ರಮ, ಚರ್ಚಾಗೋಷ್ಠಿಗಳು, ಸೀರತ್ ಪ್ರವಚನ, ಸೀರತ್ ಎಕ್ಸಿಬಿಶನ್, ಸಮಾಜ ಸೇವಾ ಚಟುವಟಿಕೆಗಳು, ಸೌಹಾರ್ದ ಸಂದೇಶ ರ್ಯಾಲಿಗಳು ಹೀಗೆ ದೈವಿಧ್ಯಮಯ ಕಾರ್ಯಕ್ರಮಗಳು ನಡೆಯಲಿದೆ ಎಂದು ವಿವರಿಸಿದರು.ಕಾರ್ಯಕ್ರಮದ ಸಾನ್ನಿಧ್ಯವನ್ನು ದಾವಣಗೆರೆ ವಿರಕ್ತ ಮಠದ ಡಾ. ಬಸವಪ್ರಭು ಸ್ವಾಮಿಗಳು ಹಾಗೂ ಸಂತ ಅಲೋಷಿಯಸ್ ಕಾಲೇಜಿನ ಪ್ರಾಂಶುಪಾಲ ಫಾದರ್ ಎಸ್.ಜೆ. ಜೀವನ್ ವಹಿಸಲಿದ್ದಾರೆ. ಉಪನ್ಯಾಸ ಹಾಗೂ ಆಶೀರ್ವಚನ ಜಮಾಅತೆ ಇಸ್ಲಾಮಿ ಹಿಂದ್ ರಾಜ್ಯ ಕಾರ್ಯದರ್ಶಿ ಮಾಡಲಿದ್ದಾರೆ. ಶಾಸಕ ಬಿ.ಪಿ. ಹರೀಶ್ ಉದ್ಘಾಟನೆ ಮಾಡಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಕಾರ್ಮಿಕ ಮುಖಂಡ ಎಚ್.ಕೆ. ಕೊಟ್ರಪ್ಪ ವಹಿಸಲಿದ್ದಾರೆ. ಪುಸ್ತಕ ಬಿಡುಗಡೆಯನ್ನು ದಾವಣಗೆರೆ ಹಿರಿಯ ಸಾಹಿತಿ ದಾದಾಪೀರ್ ನವಲೇಹಾಳ್, ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕರಾದ ಎಸ್.ರಾಮಪ್ಪ, ಎಚ್.ಎಸ್. ಶಿವಶಂಕರ್, ಮರಾಠ ಅಭಿವೃದ್ಧಿ ನಿಗಮದ ಅಧ್ಯಕ್ಷ ಮರಿಯೋಜಿ ರಾವ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ನಂದಿಗಾವಿ ಶ್ರೀನಿವಾಸ್, ಡಾ.ಗುಲಾಂ ನಬಿ, ವೈ.ಜಿ. ಅಬ್ದುಲ್ ಖಯ್ಯೂಂ, ರಾಬಿತಾ ಎ. ಮಿಲ್ಲಾತ್ ಸಮಿತಿ ಅಧ್ಯಕ್ಷ ಸೈಯದ್ ಮುನಿರ್ ಇತರರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.
- - -
* ಅಪ್ಪಟ ಮಾನವೀಯ ಕ್ರಾಂತಿಕಾರ ಪ್ರವಾದಿ ಮುಹಮ್ಮದ್
- - -
ಹರಿಹರ ನಗರದ ಪತ್ರಿಕಾ ಭವನದಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ಅಧ್ಯಕ್ಷ ಅಬ್ದುಲ್ ಖಯ್ಯೂಂ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.