ತ್ರಾಸಿ ಬೀಚ್ ಫೋಟೋ ಹಂಚಿಕೊಂಡು ಮಾಲ್ಡೀವ್ಸ್‌ಗೆ ತಿರುಗೇಟು ನೀಡಿದ ಸೆಹ್ವಾಗ್!

KannadaprabhaNewsNetwork |  
Published : Jan 09, 2024, 02:00 AM IST
ಮರವಂತೆ ಸುಂದರ ಕಟಲು ಕಿನಾರೆ | Kannada Prabha

ಸಾರಾಂಶ

ಲಕ್ಷದ್ವೀಪ, ಅಂಡಮಾನ್ ನಿಕೋಬಾರ್ ಸೇರಿದಂತೆ ಹಲವು ಪ್ರವಾಸಿ ತಾಣಗಳ ಕುರಿತು ಸೆಲೆಬ್ರೆಟಿಗಳು ಟ್ವೀಟ್ ಮಾಡಿದ್ದಾರೆ. ಇದೀಗ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಕರ್ನಾಟಕದ ಉಡುಪಿಯ ತ್ರಾಸಿ ಬೀಚ್ ಫೋಟೋ ಹಂಚಿಕೊಂಡು ಮಾಲ್ಡೀವ್ಸ್‌ಗೆ ತಿರುಗೇಟು ನೀಡಿದ್ದಾರೆ.

ಕನ್ನಡಪ್ರಭ ವಾರ್ತೆ ಕುಂದಾಪುರ

ಮಾಲ್ಡೀವ್ಸ್ ಸಚಿವರ ಹೇಳಿಕೆ, ನಿಂದನೆ ಬೆನ್ನಲ್ಲೇ ಭಾರತದ ಸೆಲೆಬ್ರೆಟಿಗಳು, ಕ್ರಿಕೆಟಿಗರು ಭಾರತದ ಲಕ್ಷದ್ವೀಪ ಸೇರಿದಂತೆ ಇತರ ಪ್ರವಾಸೋದ್ಯಮ ಕುರಿತು ಸರಣಿ ಟ್ವೀಟ್ ಮಾಡುತ್ತಿದ್ದಾರೆ. ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಭಾರತದ ಸುಂದರ ಬೀಚ್‌ ಫೋಟೋ ಹಂಚಿಕೊಂಡು ಮಾಲ್ಡೀವ್ಸ್‌ಗೆ ತಿರುಗೇಟು ನೀಡಿದ್ದು, ಸೆಹ್ವಾಗ್ ಉಡುಪಿಯ ತ್ರಾಸಿ ಬೀಚ್ ಫೋಟೋವನ್ನೂ ಹಂಚಿಕೊಂಡಿದ್ದಾರೆ.

ಲಕ್ಷದ್ವೀಪ, ಅಂಡಮಾನ್ ನಿಕೋಬಾರ್ ಸೇರಿದಂತೆ ಹಲವು ಪ್ರವಾಸಿ ತಾಣಗಳ ಕುರಿತು ಸೆಲೆಬ್ರೆಟಿಗಳು ಟ್ವೀಟ್ ಮಾಡಿದ್ದಾರೆ. ಇದೀಗ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಕರ್ನಾಟಕದ ಉಡುಪಿಯ ತ್ರಾಸಿ ಬೀಚ್ ಫೋಟೋ ಹಂಚಿಕೊಂಡು ಮಾಲ್ಡೀವ್ಸ್‌ಗೆ ತಿರುಗೇಟು ನೀಡಿದ್ದಾರೆ.ಉಡುಪಿಯ ತ್ರಾಸಿ ಬೀಚ್, ಪಾಂಡಿಚೇರಿಯ ಪ್ಯಾರಡೈಸ್ ಬೀಚ್, ಅಂಡಮಾನ್ ನಿಕೋಬಾರ್‌ನ ನೈಲ್ ಹಾಗೂ ಹ್ಯಾವ್ಲಾಕ್ ಬೀಚ್ ಫೋಟೋಗಳನ್ನು ಸೆಹ್ವಾಗ್ ಹಂಚಿಕೊಂಡಿದ್ದಾರೆ. ಭಾರತದಲ್ಲಿ ಹಲವರು ಅನ್ವೇಷಿಸಿದ ಸ್ಥಳಗಳಿವೆ. ಈ ತಾಣಗಳಿಗೆ ಮೂಲಸೌಕರ್ಯ ಒದಗಿಸಿದರೆ ಯಾವುದಕ್ಕೂ ಕಡಿಮೆ ಇಲ್ಲ. ಪರಿಸ್ಥಿತಿಯನ್ನು ಅವಕಾಶವಾಗಿ ಪರಿವರ್ತಿಸುವುದು ಭಾರತಕ್ಕೆ ತಿಳಿದಿದೆ. ಮಾಲ್ಡೀವ್ಸ್ ಸಚಿವರು ಭಾರತ ಹಾಗೂ ಪ್ರಧಾನ ಮಂತ್ರಿಯನ್ನು ನಿಂದಿಸಿರುವ ಈ ಸಂದರ್ಭವನ್ನು ಉತ್ತಮ ಅವಕಾಶವಾಗಿ ಬಳಸಿಕೊಂಡು ನಮ್ಮ ಸುಂದರ ಪ್ರವಾಸಿ ತಾಣಗಳಿಗೆ ಮೂಲಭೂತ ಸೌಕರ್ಯ ನೀಡಿ ಆರ್ಥಿಕತೆಯ ವೇಗ ಹೆಚ್ಚಿಸಬೇಕಿದೆ ಎಂದು ಸೆಹ್ವಾಗ್ ಟ್ವೀಟ್ ಮಾಡಿದ್ದಾರೆ.ಉಡುಪಿ ನಿಜಕ್ಕೂ ಅದ್ಭುತ.ಅತ್ಯಂತ ಸುಂದರ ಕಡಲತೀರ, ಪ್ರಾಚೀನ ದೇವಾಲಯ ಹಾಗೂ ಅತ್ಯುತ್ತಮ ಆಹಾರದಿಂದ ಉಡುಪಿ ಅಚ್ಚುಮೆಚ್ಚು ಎಂದಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿ ರಾಂ ಜಿ ವಿರೋಧಕ್ಕೆ ರೈತರಿಗೆ ಸಿಎಂ ಕರೆ
ನೀವೂ ಸಿಎಂ ಆಗಬೇಕು : ಡಿಕೆಗೆ ಪೂಜಾರಿ ಹಾರೈಕೆ