ಆಯುರ್ವೇದ ಕ್ಷೇತ್ರದಲ್ಲಿನ ಅವಕಾಶ ಬಳಸಿಕೊಳ್ಳಿ

KannadaprabhaNewsNetwork |  
Published : Oct 25, 2026, 03:15 AM IST
ಆರ್‌ಕೆಎಂ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಘಟಿಕೋತ್ಸವ ಸಮಾರಂಭ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ಜಗತ್ತಿನಾದ್ಯಂತ ತಡೆಗಟ್ಟುವ ಆರೋಗ್ಯ ಸೇವೆಗಳಿಗೆ ಭಾರತವನ್ನು ನಿರೀಕ್ಷೆಯಿಂದ ನೋಡಲಾಗುತ್ತಿದೆ. ಈ ಕ್ಷೇತ್ರದಲ್ಲಿ ಅಗತ್ಯವಿರುವ ಜ್ಞಾನ ಮತ್ತು ಕೌಶಲಗಳು ಆಯುರ್ವೇದ ವೃತ್ತಿಪರರಲ್ಲಿದ್ದು, ಜಾಗತಿಕ ಆರೋಗ್ಯ ಸವಾಲುಗಳಿಗೆ ಪರಿಹಾರಗಳನ್ನು ಒದಗಿಸುವ ಸಾಮರ್ಥ್ಯ ಅವರಿಗಿದೆ ಎಂದು ಹುಬ್ಬಳ್ಳಿಯ ಸಂಜೀವಿನಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ಮುಖ್ಯ ಆಡಳಿತಾಧಿಕಾರಿಗಳಾದ ಡಾ.ಶ್ರೀನಿವಾಸ ಬನ್ನಿಗೋಳ ಅಭಿಪ್ರಾಯಪಟ್ಟರು.

ಕನ್ನಡಪ್ರಭ ವಾರ್ತೆ ವಿಜಯಪುರ

ಜಗತ್ತಿನಾದ್ಯಂತ ತಡೆಗಟ್ಟುವ ಆರೋಗ್ಯ ಸೇವೆಗಳಿಗೆ ಭಾರತವನ್ನು ನಿರೀಕ್ಷೆಯಿಂದ ನೋಡಲಾಗುತ್ತಿದೆ. ಈ ಕ್ಷೇತ್ರದಲ್ಲಿ ಅಗತ್ಯವಿರುವ ಜ್ಞಾನ ಮತ್ತು ಕೌಶಲಗಳು ಆಯುರ್ವೇದ ವೃತ್ತಿಪರರಲ್ಲಿದ್ದು, ಜಾಗತಿಕ ಆರೋಗ್ಯ ಸವಾಲುಗಳಿಗೆ ಪರಿಹಾರಗಳನ್ನು ಒದಗಿಸುವ ಸಾಮರ್ಥ್ಯ ಅವರಿಗಿದೆ ಎಂದು ಹುಬ್ಬಳ್ಳಿಯ ಸಂಜೀವಿನಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ಮುಖ್ಯ ಆಡಳಿತಾಧಿಕಾರಿಗಳಾದ ಡಾ.ಶ್ರೀನಿವಾಸ ಬನ್ನಿಗೋಳ ಅಭಿಪ್ರಾಯಪಟ್ಟರು.

ನಗರದ ಆರ್‌ಕೆಎಂ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸ್ನಾತಕೋತ್ತರ ಸಂಶೋಧನಾ ಕೇಂದ್ರದ ಘಟಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಪದವೀಧರರು ವೈದ್ಯಕೀಯ ಅಭ್ಯಾಸ, ಸಂಶೋಧನೆ, ಜಾಗತಿಕ ಆರೋಗ್ಯ ಸೇವೆಗಳು ಹಾಗೂ ಆಯುರ್ವೇದ ಉದ್ಯಮಶೀಲತೆಯ ಕ್ಷೇತ್ರಗಳಲ್ಲಿನ ಅವಕಾಶಗಳನ್ನು ಬಳಸಿಕೊಳ್ಳಬೇಕು. ಜಾಗತಿಕ ಮಟ್ಟದಲ್ಲಿ ತಡೆಗಟ್ಟುವ ಆರೋಗ್ಯ ಸೇವೆಗಳಿಗೆ ಹೆಚ್ಚುತ್ತಿರುವ ಬೇಡಿಕೆ ಕುರಿತು ತಿಳಿಸಿದರು.

ಮಲ್ಲಿಕಾರ್ಜುನ ವಿದ್ಯಾವರ್ಧಕ ಸಂಘದ ಆರ್‌ಕೆಎಂ ಸಮೂಹ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿ ಶಂಭುಲಿಂಗಯ್ಯ ಕರ್ಪೂರಮಠ ಮಾತನಾಡಿ, ಪದವಿ ಪ್ರದಾನವು ಕೇವಲ ಶೈಕ್ಷಣಿಕ ಸಾಧನೆಯಲ್ಲ, ಬದಲಾಗಿ ಹೊಸ ವೃತ್ತಿಪರ ಜವಾಬ್ದಾರಿಯ ಆರಂಭವಾಗಿದೆ. ಪದವೀಧರರು ವೈದ್ಯಕೀಯ ಕ್ಷೇತ್ರದಲ್ಲಿ ಶ್ರೇಷ್ಠತೆ, ನಿರಂತರ ಕಲಿಕೆ, ನೈತಿಕ ವೈದ್ಯಕೀಯ ಅಭ್ಯಾಸ, ವೈಜ್ಞಾನಿಕ ಸಂಶೋಧನೆ ಹಾಗೂ ಉದ್ಯಮಶೀಲತೆಯತ್ತ ಗಮನ ಹರಿಸಬೇಕು. ಆಯುರ್ವೇದ ಚಿಕಿತ್ಸಾ ಸೇವೆಗಳು, ಕ್ಷೇಮ ಕೇಂದ್ರಗಳು, ಔಷಧೀಯ ಸಸ್ಯೋದ್ಯಮ ಮತ್ತು ಅಂತಾರಾಷ್ಟ್ರೀಯ ಕ್ಷೇಮ ಸೇವೆಗಳಲ್ಲಿನ ಉದಯೋನ್ಮುಖ ಅವಕಾಶಗಳನ್ನು ಅರಿಯಬೇಕು. ವೃತ್ತಿಪರ ಸಾಮರ್ಥ್ಯವನ್ನು ಬೆಳೆಸಿಕೊಳ್ಳುವುದರ ಜೊತೆಗೆ ರೋಗಿಗಳ ಸುರಕ್ಷತೆ ಮತ್ತು ನೈತಿಕ ಮೌಲ್ಯಗಳನ್ನು ಕಾಪಾಡಿಕೊಳ್ಳಬೇಕು ಎಂದರು.

ಸಮಾರಂಭದಲ್ಲಿ ಗೌರವ ಅತಿಥಿ ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸೆನೆಟ್ ಸದಸ್ಯ ಡಾ.ಜಗದೀಶ ಕೊನರೆಡ್ಡಿ, ಡಾ.ಚಂದ್ರಶೇಖರ ಕುಪ್ಪಿ, ಪ್ರಾಂಶುಪಾಲ ಡಾ.ಎನ್.ಎಂ.ರುದ್ರಗೌಡರ, ಅಮಿತ್.ಎಚ್, ಪಿಯು ವಿಜ್ಞಾನ ಕಾಲೇಜಿನ ಪ್ರಾಂಶುಪಾಲೆ ಮೇಧಾ ಕರ್ಪೂರಮಠ, ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಮಖಂಡಿ ಸಕ್ಕರೆ ಕಾರ್ಖಾನೆಯಲ್ಲಿ ಗೂಂಡಾಗಿರಿ: ರೈತರ ಆರೋಪ
ಇಂದು ಕಿತ್ತೂರು ಉತ್ಸವದಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಭಾಗಿ