ಕನ್ನಡಪ್ರಭ ವಾರ್ತೆ ಚಾಮರಾಜನಗರ
ನಗರದ ಜೆಎಸ್‌ಎಸ್ ಮಹಿಳಾ ಕಾಲೇಜಿನ ಸಭಾಂಗಣದಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಗ್ರಾವಿಟಿ ಸೈನ್ಸ್ ಫೌಂಡೇಶನ್ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ರಾಷ್ಟ್ರೀಯ ಬಾಹ್ಯಾಕಾಶ ದಿನ-೨೦೨೫ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಇಸ್ರೋ ವಿವಿಧ ಶಾಲೆಗಳಲ್ಲಿ ವಿಸ್ತರಣಾ ಕಾರ್ಯಕ್ರಮಗಳನ್ನು ನಡೆಸುತ್ತಿದ್ದು, ಮುಂದಿನ ತಲೆಮಾರಿನ ವಿಜ್ಞಾನಿಗಳಿಗೆ ಸ್ಫೂರ್ತಿ ನೀಡುತ್ತಿದೆ. ರಾಷ್ಟ್ರೀಯ ಬಾಹ್ಯಾಕಾಶ ದಿನ ಬಾಹ್ಯಾಕಾಶ ಅನ್ವೆಷಣೆಯಲ್ಲಿ ಭಾರತದ ಸಾಧನೆಗಳನ್ನು ಸಂಭ್ರಮಿಸಿ, ಬಾಹ್ಯಾಕಾಶ ತಂತ್ರಜ್ಞಾನದಲ್ಲಿನ ಪ್ರಗತಿಯನ್ನು ದೇಶಕ್ಕೆ ತೋರಿಸುತ್ತದೆ. ಅದರೊಡನೆ ಬಾಹ್ಯಾಕಾಶ ವಿಜ್ಞಾನ ಮತ್ತು ತಂತ್ರಜ್ಞಾನದ ಕುರಿತು ವಿದ್ಯಾರ್ಥಿಗಳಲ್ಲಿ ಆಸಕ್ತಿ ಮೂಡಿಸುವ ಗುರಿಯನ್ನೂ ಹೊಂದಲಾಗಿದೆ. ಪ್ರಸ್ತುತ ವಿಜ್ಞಾನ ಮತ್ತು ಬಾಹ್ಯಾಕಾಶ ಕ್ಷೇತ್ರದಲ್ಲಿ ಹಲವಾರು ಅವಕಾಶಗಳಿವೆ ಇದನ್ನು ಸದುಪಯೋಗಪಡಿಸಿಕೊಳ್ಳಿ ಎಂದರು.ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಡಾ. ಎನ್. ಮಹದೇವಸ್ವಾಮಿ ಮಾತನಾಡಿ, ಭಾರತದ ವಿಜ್ಞಾನ ಮತ್ತು ಬಾಹ್ಯಾಕಾಶದ ಸಾಧಣೆಯನ್ನು ಜಗತ್ತು ಅಚ್ಚರಿಯಿಂದ ನೋಡುತ್ತಿದೆ. ಆಪರೇಷನ್ ಸಿಂದೂರದ ಯಶಸ್ಸು ಭಾರತದ ರಕ್ಷಣಾ ಕೇತ್ರದ ಕಡೆಗೆ ಜಗತ್ತು ನೋಡುವಂತೆ ಮಾಡಿದೆ ಎಂದರು.
ರಾಷ್ಟ್ರ ನಿರ್ಮಾಣದಲ್ಲಿ ಯುವ ಸಮೂಹದ ಪಾತ್ರ ಅತ್ಯಂತ ಮಹತ್ವವಾಗಿದೆ. ವಿಜ್ಞಾನ ಮತ್ತು ಬಾಹ್ಯಾಕಾಶ ಕ್ಷೇತ್ರಕ್ಕೆ ಸಂಬಂಧಪಟ್ಟರಂತೆ ಬೆಂಗಳೂರು ಸೇರಿದಂತೆ ಹಲವಾರು ಪ್ರಮುಖ ನಗರಗಳಲ್ಲಿ ಸಂಶೋಧನಾ ಕೇಂದ್ರಗಳಿದ್ದು ಹಲವಾರು ಆವಕಾಶಗಳಿದ್ದು, ಕನಸ್ಸನ್ನು ಕಟ್ಟಿಕೊಂಡು ಅದನ್ನು ನನಸು ಮಾಡಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಗ್ರಾವಿಟಿ ಸೈನ್ಸ್ ಫೌಂಡೇಶನ್, ಸ್ಧಾಪಕ ಕಾರ್ಯದರ್ಶಿ ಅಭಿಷೇಕ್ ಎ. ಎಸ್. ವಿಕ್ರಮ್ ಸಾರಾಬಾಯಿ ಅವರ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಭಾರತದ ವಿಜ್ಞಾನ ಮತ್ತು ಬಾಹ್ಯಾಕಾಶ ಯೋಜನೆಗಳು ನಡೆಯುತ್ತಿದ್ದು ಇದನ್ನು ಪೇರೆಪಿಸುವ ಜೊತೆಗೆ ಮುಂದಿನ ಯುವ ವಿಜ್ಞಾನಿಗಳನ್ನು ಹುಟ್ಟು ಹಾಕುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ನಗರದಲ್ಲಿ ಆಯೋಜಿಸಲಾಗಿದೆ ಎಂದರು.
ಪಿಡಬ್ಲೂಡಿ ಕಾರ್ಯಪಾಲಕ ಇಂಜಿನಿಯರ್ ಕಿರಣ್, ಐಕ್ಯೂಎಸಿ ಸಂಚಾಲಕ ಎಂ. ಮಲ್ಲಿಕಾರ್ಜುನಸ್ವಾಮಿ ಉಪಸ್ಥಿತರಿದ್ದರು.