ಕಿರಗಂದೂರಿನಲ್ಲಿ ನಿಷೇಧಿತ ಪಿಒಪಿ ಗಣೇಶ ಮೂರ್ತಿಗಳ ವಶ

KannadaprabhaNewsNetwork | Published : Jul 23, 2024 12:39 AM

ಸಾರಾಂಶ

ಉತ್ತರ ಭಾರತದಿಂದ ಕಾರ್ಮಿಕರನ್ನು ಕರೆತಂದು ಅವರಿಂದ ಪಿಒಪಿ ಗಣೇಶಮೂರ್ತಿಗಳನ್ನು ತಯಾರಿಸಲಾಗುತ್ತಿತ್ತು. ದಾಳಿಯ ವಿಷಯ ತಿಳಿದು ಪಿಒಪಿ ಗಣೇಶ ಮೂರ್ತಿ ತಯಾರಿಸುತ್ತಿದ್ದವರು ಸ್ಥಳದಿಂದ ಪರಾರಿಯಾಗಿದ್ದರು. ನಿರ್ಮಾಣ ಹಂತದಲ್ಲಿದ್ದ ಮೂರ್ತಿಗಳನ್ನು ಅಧಿಕಾರಿಗಳು ವಶಕ್ಕೆ ಪಡೆದರು.

ಕನ್ನಡಪ್ರಭ ವಾರ್ತೆ ಮಂಡ್ಯ

ತಾಲೂಕಿನ ಕಿರಗಂದೂರು ಗ್ರಾಮದ ಶೆಡ್ಡೊಂದರಲ್ಲಿ ನಿಷೇಧಿತ ಪಿಒಪಿ ಗಣೇಶಮೂರ್ತಿಗಳನ್ನು ತಯಾರಿಸುತ್ತಿದ್ದ ವೇಳೆ ಪರಿಸರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ.

ಉತ್ತರ ಭಾರತದಿಂದ ಕಾರ್ಮಿಕರನ್ನು ಕರೆತಂದು ಅವರಿಂದ ಪಿಒಪಿ ಗಣೇಶಮೂರ್ತಿಗಳನ್ನು ತಯಾರಿಸಲಾಗುತ್ತಿತ್ತು. ದಾಳಿಯ ವಿಷಯ ತಿಳಿದು ಪಿಒಪಿ ಗಣೇಶ ಮೂರ್ತಿ ತಯಾರಿಸುತ್ತಿದ್ದವರು ಸ್ಥಳದಿಂದ ಪರಾರಿಯಾಗಿದ್ದರು. ನಿರ್ಮಾಣ ಹಂತದಲ್ಲಿದ್ದ ಮೂರ್ತಿಗಳನ್ನು ಅಧಿಕಾರಿಗಳು ವಶಕ್ಕೆ ಪಡೆದರು.

ಪರಿಸರ ಇಲಾಖೆ ಅಧಿಕಾರಿ ಭವ್ಯಾ ಮಾತನಾಡಿ, ಪರಿಸರ ಮಾಲಿನ ನಿಯಂತ್ರಣದ ಕಾಯ್ದೆ ಪ್ರಕಾರ ಪಿಒಪಿ ಗಣೇಶವನ್ನು ತಯಾರಿಸಿದಂತೆ ಸುಪ್ರೀಂ ಕೋರ್ಟ್‌ ಆದೇಶ ನೀಡಿದೆ, ಯಾವುದೇ ವಿಷಯುಕ್ತ ರಾಸಾಯನಿಕ ಬಣ್ಣವನ್ನು ಬಳಸಬಾರದು ಎಂಬುದನ್ನು ತಿಳಿಸಿದೆ. ಅದರಂತೆ ಪಿಒಪಿ ಗಣೇಶ ಮೂರ್ತಿಗಳನ್ನು ತಯಾರಿಸುತ್ತಿದ್ದ ಸ್ಥಳಕ್ಕೆ ಅಧಿಕಾರಿಗಳ ತಂಡದಿಂದ ದಾಳಿ ನಡೆಸಿ ಎಲ್ಲಾ ಪಿಒಪಿ ಗಣೇಶ ಮೂರ್ತಿಗಳನ್ನು ವಶಕ್ಕೆ ಪಡೆಯಲಾಗಿದೆ, ಜೊತೆಗೆ ಮುಂದಿನ ಕ್ರಮವನ್ನು ಕಾನೂನಿನ ಪ್ರಕಾರ ತೆಗೆದುಕೊಳ್ಳಲಾಗುವುದು ಎಂದರು.

ಜು.೨೫ಕ್ಕೆ ಕೆ.ವಿ.ಶಂಕರಗೌಡ ಶಿಕ್ಷಣ ಪ್ರಶಸ್ತಿ ಪ್ರದಾನ

ಕನ್ನಡಪ್ರಭ ವಾರ್ತೆ ಮಂಡ್ಯಅಸೋಸಿಯೇಷನ್ ಆಫ್ ಲಯನ್ಸ್ ಕ್ಲಬ್ ಇಂಟರ್‌ನ್ಯಾಷನಲ್, ನಂಜಮ್ಮ ಮೋಟೇಗೌಡ ಚಾರಿಟಬಲ್ ಟ್ರಸ್ಟ್ ವತಿಯಿಂದ ಜು.೨೫ರಂದು ಮಧ್ಯಾಹ್ನ ೩ ಗಂಟೆಗೆ ನಗರದ ರೈತ ಸಭಾಂಗಣದಲ್ಲಿ ನಿತ್ಯ ಸಚಿವ ಕೆ.ವಿ.ಶಂಕರೇಗೌಡ ಶಿಕ್ಷಣ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಕ್ಲಬ್ಸ್‌ನ ಜಿಲ್ಲಾ ರಾಜ್ಯಪಾಲ ಕೆ.ಟಿ. ಹನುಮಂತು ತಿಳಿಸಿದರು.

ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ ಕುಲಪತಿ ಪ್ರೊ. ಶರಣಪ್ಪ ವಿ ಅಲ್ಸೆ ಅವರು ಕನಕಪುರ ಗ್ರಾಮ ವಿದ್ಯಾ ಪ್ರಚಾರಕ ಸಂಘಕ್ಕೆ ಪ್ರಶಸ್ತಿ ಪ್ರದಾನ ಮಾಡುವರು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.ನಂಜಮ್ಮ ಮೋಟೇಗೌಡ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಕೆ.ಟಿ. ಶ್ರೀಕಂಠೇಗೌಡ ಅಧ್ಯಕ್ಷತೆ ವಹಿಸುವರು. ಲಯನ್ಸ್ ಕ್ಲಬ್ ಅಂತಾರಾಷ್ಟ್ರೀಯ ನಿರ್ದೇಶಕ ನಾಗರಾಜು ವಿ.ಭೈರಿ, ಪಿಇಟಿ ಅಧ್ಯಕ್ಷ ಕೆ.ಎಸ್.ವಿಜಯ್‌ಆನಂದ್, ಆರ್‌ಎಪಿಸಿಎಂಎಸ್ ಅಧ್ಯಕ್ಷ ಯು.ಸಿ.ಶೇಖರ್, ಒಂದನೇ ಉಪ ರಾಜ್ಯಪಾಲ ಎಚ್.ಮಾದೇಗೌಡ, ಎರಡನೇ ರಾಜ್ಯಪಾಲ ಕೆ.ಆರ್. ಶಶಿಧರ್ ಈಚಗೆರೆ, ಪ್ರತಿಭಾಂಜಲಿ ಸುಗಮ ಸಂಗೀತ ಅಕಾಡೆಮಿ ಅಧ್ಯಕ್ಷ ಪ್ರೊ.ಡೇವಿಡ್ ಪ್ರತಿಭಾಂಜಲಿ ಇತರರು ಸಮಾರಂಭದಲ್ಲಿ ಭಾಗವಹಿಸುವರು ಎಂದರು.

ಕ್ಲಬ್‌ನ ಚಂದ್ರಶೇಖರ್, ಕಾರಸವಾಡಿ ಮಹದೇವು, ರತ್ನಮ್ಮ, ಡೇವಿಡ್ ಇತರರು ಗೋಷ್ಠಿಯಲ್ಲಿದ್ದರು.

Share this article