ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ರಕ್ತಚಂದನ ವಶ

KannadaprabhaNewsNetwork |  
Published : Feb 07, 2025, 12:32 AM IST
ಫೋಟೋ: 6 ಹೆಚ್‌ಎಸ್‌ಕೆ 1ಹೊಸಕೋಟೆ ತಾಲೂಕಿನ ತಿರುಮಲಶೆಟ್ಟಿಹಳ್ಳಿ ಪೊಲೀಸರು ಹಾಗೂ ಆಂಧ್ರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಕಟ್ಟಿಗೇನಹಳ್ಳಿ ನೀಲಗಿರಿ ತೋಪಿನಲ್ಲಿ ಸಂಗ್ರಹಿಸಿದ್ದ ರಕ್ತಚಂದನ ತುಂಡುಗಳನ್ನು ವಶಕ್ಕೆ ಪಡೆದಿದ್ದಾರೆ. | Kannada Prabha

ಸಾರಾಂಶ

ಹೊಸಕೋಟೆ: ತಾಲೂಕಿನ ತಿರುಮಲಶೆಟ್ಟಿಹಳ್ಳಿ ಪೋಲಿಸರು ಮತ್ತು ಆಂಧ್ರ ಪೋಲಿಸರು ಜಂಟಿ ಕಾರ್ಯಾಚರಣೆ ನಡೆಸಿ ಕೋಟ್ಯಂತರ ರು. ಮೌಲ್ಯದ 180 ರಕ್ತ ಚಂದನದ ತುಂಡುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಹೊಸಕೋಟೆ: ತಾಲೂಕಿನ ತಿರುಮಲಶೆಟ್ಟಿಹಳ್ಳಿ ಪೋಲಿಸರು ಮತ್ತು ಆಂಧ್ರ ಪೋಲಿಸರು ಜಂಟಿ ಕಾರ್ಯಾಚರಣೆ ನಡೆಸಿ ಕೋಟ್ಯಂತರ ರು. ಮೌಲ್ಯದ 180 ರಕ್ತ ಚಂದನದ ತುಂಡುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಆಂಧ್ರಪ್ರದೇಶದ ತಿರುಪತಿಯಲ್ಲಿ ರಕ್ತ ಚಂದನಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಲಾಗಿತ್ತು. ಆರೋಪಿಗಳು ನೀಡಿರುವ ಮಾಹಿತಿ ಆಧಾರಿಸಿ ಹೊಸಕೋಟೆ ತಾಲೂಕಿನ ತಿರುಮಲಶೆಟ್ಟಿಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶೋಧ ಕಾರ್ಯ ನಡೆಸಿದರು.

ತಿರುಮಲಶೆಟ್ಟಿಹಳ್ಳಿ ಪೊಲೀಸರು ಮತ್ತು ಆಂಧ್ರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಹೊಸಕೋಟೆ ತಾಲೂಕಿನ ಕಟ್ಟಿಗೇನಹಳ್ಳಿ ಗ್ರಾಮದ ನೀಲಗಿರಿ ತೋಪಿನಲ್ಲಿ ಅಡಗಿಸಿಟ್ಟಿದ್ದ ಕೋಟ್ಯಂತರ ರುಪಾಯಿ ಮೌಲ್ಯದ 180 ರಕ್ತಚಂದನ ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಆಂಧ್ರ ಪೊಲೀಸರ ತನಿಖೆಗೆ ಹೊಸಕೋಟೆ ಪೊಲೀಸರು ಸಾಥ್ ನೀಡಿದ್ದಾರೆ. ಪತ್ತೆಯಾದ ರಕ್ತಚಂದನದ ತುಂಡುಗಳನ್ನು ಆಂಧ್ರ ಪೊಲೀಸರು ತಮ್ಮ ರಾಜ್ಯಕ್ಕೆ ರವಾನಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಕೆಲವೊಂದು ಗ್ರಾಮಗಳು ಈ ಅಕ್ರಮ ರಕ್ತಚಂದನ ಸಂಗ್ರಹಿಸುವುದು ಸಾಮಾನ್ಯವಾಗಿದೆ. ಈ ಬಾರಿ 1 ಕೋಟಿ ಮೌಲ್ಯದ ರಕ್ತಚಂದನ ಕಟ್ಟಿಗೇನಹಳ್ಳಿಯಲ್ಲಿ ಅಡಗಿಸಲು ಸಹಕಾರ ನೀಡಿದವರು ಯಾರು ಎಂದು ಪೊಲೀಸರು ತನಿಖೆ ನಡೆಸಬೇಕಾಗಿದೆ.

ಫೋಟೋ: 6 ಹೆಚ್‌ಎಸ್‌ಕೆ 1

ಹೊಸಕೋಟೆ ತಾಲೂಕಿನ ತಿರುಮಲಶೆಟ್ಟಿಹಳ್ಳಿ ಪೊಲೀಸರು ಹಾಗೂ ಆಂಧ್ರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಕಟ್ಟಿಗೇನಹಳ್ಳಿ ನೀಲಗಿರಿ ತೋಪಿನಲ್ಲಿ ಸಂಗ್ರಹಿಸಿದ್ದ ರಕ್ತಚಂದನ ತುಂಡುಗಳನ್ನು ವಶಕ್ಕೆ ಪಡೆದಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಲ್ಸ್‌ ಪೋಲಿಯೋ ಹಾಕಿಸಿ, ಅಂಗವಿಕತೆ ತಪ್ಪಿಸಿ
ಪುಷ್ಪಗಿರಿ ಜೇಸಿಗೆ 50 ವರ್ಷ: ಸಂಭ್ರಮ ಆಚರಣೆ