)
ಉಡುಪಿ: ದೇಶಾದ್ಯಂತ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವ ಉದ್ದೇಶದಿಂದ ಎಐಸಿಸಿ ‘ಸೃಜನ ಸಂಘಟನಾ ಅಭಿಯಾನ’ವನ್ನು ರೂಪಿಸಿದೆ. ಅದರನ್ವಯವೇ ಕರ್ನಾಟಕ ರಾಜ್ಯದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಆಗಸ್ಚ್ ಅಂತ್ಯದಲ್ಲಿ ಜಿಲ್ಲಾಧ್ಯಕ್ಷರ ನೇಮಕ ನಡೆಯಲಿದೆ ಎಂದು ಎಐಸಿಸಿ ವೀಕ್ಷಕ ಹಿಮ್ಮತ್ ಸಿಂಗ್ ಪಟೇಲ್ ತಿಳಿಸಿದ್ದಾರೆ.
ವೀಕ್ಷಕರ ವರದಿ ಸಿದ್ಧಪಡಿಸಲು ಕನಿಷ್ಠ 10 ದಿನಗಳು ಬೇಕಾಗುತ್ತದೆ. ವರದಿ ಸಲ್ಲಿಕೆಯಾದ ಬಳಿಕ ಪರಿಶೀಲನಾ ಸಭೆ ನಡೆದು, ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ. ಆಗಸ್ಟ್ ಅಂತ್ಯದೊಳಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಹೆಸರನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ ಕುಮಾರ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಮಾಜಿ ಸಂಸದ ಜಯಪ್ರಕಾಶ ಹೆಗ್ಡೆ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಪಕ್ಷ ಪ್ರಮುಖರಾದ ಶಾಲೆಟ್ ಪಿಂಟೊ, ಕಿಶನ್ ಹೆಗ್ಡೆ ಕೊಳ್ಕೆಬೈಲು, ರಮೇಶ ಕಾಂಚನ್, ಹರೀಶ ಕಿಣಿ ಅಲೆವೂರು, ಪ್ರಸಾದರಾಜ್ ಕಾಂಚನ್ ಮೊದಲಾದವರಿದ್ದರು.