)
ನಾಪೋಕ್ಲು: ಮೂರ್ನಾಡು ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಐಚೇಟ್ಟಿರ ಜಿ ಬಬ್ಲೂ ಚಿಣ್ಣಪ್ಪ, ಉಪಾಧ್ಯಕ್ಷರಾಗಿ ಪಳಂಗಂಡ ಬಿ ವಿಠ್ಠಲ್ ಪೂವಯ್ಯ, ಗೌರವ ಕಾರ್ಯದರ್ಶಿ ಪುದಿಯೊಕ್ಕಡ ಹರೀಶ್ ದೇವಯ್ಯ. ಖಜಾಂಚಿ ನೆರ ವಂಡ ಎಸ್ ಜಯ ಮುತ್ತಪ್ಪ, ನಿರ್ದೇಶಕರಾಗಿ ಮುಂಡಂಡ ಕೆ. ನಂದಚಂಗಪ್ಪ, ಪಾಣತ್ತಲೆ ಟಿ .ಹರೀಶ್, ಮಾಳೇಟಿರ ಸಿ ಮೇದಪ್ಪ, ತಿರ್ಕಚೇರಿರ ಟಿ ಅನಿತಾ, ತೇಲಪಂಡ ಸಿ ಸುಬ್ಬಯ್ಯ ನೂತನ ಆಡಳಿತ ಮಂಡಳಿಗೆ ಆಯ್ಕೆಯಾಗಿದ್ದಾರೆ.
ನಾಳೆ ನೇರ ಸಂದರ್ಶನ
ಮಡಿಕೇರಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜು.14ರಂದು ಬೆಳಗ್ಗೆ 11ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಕುಶಾಲನಗರ ಪಿರಾಮಲ್ ಫೈನಾನ್ಸ್ ಲಿಮಿಟೆಡ್, ಸರ್ಕಾರಿ ಪ್ರಾಥಮಿಕ ಶಾಲೆ ಎದುರು, ಎಸ್‌ವೈ ನಂ: 9/2 ಮತ್ತು 9/3 ಬಿ.ಎಂ. ರಸ್ತೆ, ಶೌರ್ಯ ಮ್ಯಾನ್ಸಿಯನ್ ಕಾಂಪ್ಲೆಕ್ಸ್, 1ನೇ ಮಹಡಿ, ಕುಶಾಲನಗರ. ಇಲ್ಲಿ ನೇರ ಸಂದರ್ಶನ ನಡೆಯಲಿದೆ.ಈ ನೇರ ಸಂದರ್ಶನದಲ್ಲಿ ಕುಶಾಲನಗರ ಪಿರಾಮಲ್ ಫೈನಾನ್ಸ್ ಲಿಮಿಟೆಡ್ ಇವರು ತಮ್ಮ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ನೇರ ಸಂದರ್ಶನದಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ ಹಾಗೂ ಸ್ನಾತಕೋತ್ತರ ಪದವಿ, ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಿ ಉದ್ಯೋಗ ನೆರವು ಪಡೆಯಬಹುದು. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣಪತ್ರ (ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಸಿ.ಬಿ. ಮಂಜುನಾಥ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಜಾಬ್ ಕೋಆರ್ಡಿನೇಟರ್ 8296020826 ಅವರನ್ನು ಸಂಪರ್ಕಿಸಬಹುದು.