ಕನ್ನಡಪ್ರಭ ವಾರ್ತೆ ಸಿಂದಗಿ
ಪಟ್ಟಣದ ಹೀರಾಮಾತಾ ಅನುದಾನಿತ ಪ್ರಾಥಮಿಕ ಶಾಲೆಯಲ್ಲಿ ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ೨೦೨೪-೨೦೨೯ರ ಅವಧಿಗೆ ಹಮ್ಮಿಕೊಂಡ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ ಸಭೆಯಲ್ಲಿ ಪದಗೃಹಣ ಸ್ವೀಕರಿಸಿದ ಬುಳ್ಳಪ್ಪ.ಡಿ ಮಾತನಾಡಿ, ಮುಂಬರುವ ದಿನಗಳಲ್ಲಿ ಅನುದಾನಿತ ಶಾಲೆಗಳ ಹಾಗೂ ಶಿಕ್ಷಕರ ಸಮಸ್ಯೆಗಳ ಬಗ್ಗೆ ಪ್ರಾಮಾಣಿಕವಾಗಿ ಕಾರ್ಯ ಮಾಡುತ್ತೇನೆ. ಸಂಘದಿಂದ ಮಾನ್ಯತಾ ನವೀಕರಣವನ್ನು ಸರಳಿಕರಣಗೊಳಿಸುವ ಪ್ರಯತ್ನ ಮಾಡುವೆ. ಮಕ್ಕಳಿಗೆ ಸಿಗಬೇಕಾದ ವಿವಿಧ ಸೌಲಭ್ಯಗಳನ್ನು ದೊರಕಿಸಿಕೊಡುವುದು. ಹಲವಾರು ದಿನಗಳಿಂದ ನೆನೆಗುದಿಗೆ ಬಿದ್ದಿರುವ ಶಿಕ್ಷಕರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು ಪರಿಹರಿಸುವುದಕ್ಕೆ ಮೊದಲ ಆದ್ಯತೆ ನೀಡುವೆ ಎಂದರು.
ಈ ವೇಳೆ ಜಿಲ್ಲಾ ಸಂಘದ ಗೌರವಾಧ್ಯಕ್ಷ, ಎಸ್.ಎಂ.ಬಿರಾದಾರ, ಜಿಲ್ಲಾದ್ಯಕ್ಷ ಶಿವಾನಂದ ಹಿರೇಕುರಬರ, ಪ್ರಧಾನ ಕಾರ್ಯದರ್ಶಿ ಗಿರೀಶ ಬಿರಾದಾರ, ಸಹ ಕಾರ್ಯದರ್ಶಿ ಸುಭಾಸ ಪಾಟೀಲ, ಸಂಘಟನಾ ಕಾರ್ಯದರ್ಶಿ ಎಚ್.ಎ.ಕುಂದರಗಿ, ಮಾಳು ಹೊಸೂರ, ನಿವೃತ್ತ ಶಿಕ್ಷಕ ಎಸ್.ಎಂ.ಕುಂಬಾರ ಸೇರಿದಂತೆ ತಾಲೂಕಿನ ವಿವಿಧ ಶಾಲೆಗಳ ಸಹ ಶಿಕ್ಷಕರು ಉಪಸ್ಥಿತರಿದ್ದರು.